Tumakuru : ಹಾಸ್ಟೆಲ್‌ ಕಾರ್ಮಿಕರ ಬಾಕಿ ವೇತನ ಬಿಡುಗಡೆಗೆ ಆಗ್ರಹ

By Kannadaprabha News  |  First Published Oct 12, 2022, 4:12 AM IST

ತಾಲೂಕಿನ ವಿವಿಧ ವಸತಿ ನಿಲಯ ಹಾಗೂ ವಸತಿ ಶಾಲೆಗಳಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಕಾರ್ಮಿಕರ ಬಾಕಿ ವೇತನ ಬಿಡುಗಡೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಸಂಯುಕ್ತ ವಸತಿ ನಿಲಯ ಕಾರ್ಮಿಕರ ಸಂಘ(ಎಐಯುಟಿಯುಸಿ) ದಿಂದ ನಗರದ ಜಿಲ್ಲಾ ಪಂಚಾಯ್ತಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು.


 ತುಮಕೂರು (ಅ.12): ತಾಲೂಕಿನ ವಿವಿಧ ವಸತಿ ನಿಲಯ ಹಾಗೂ ವಸತಿ ಶಾಲೆಗಳಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಕಾರ್ಮಿಕರ ಬಾಕಿ ವೇತನ ಬಿಡುಗಡೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಸಂಯುಕ್ತ ವಸತಿ ನಿಲಯ ಕಾರ್ಮಿಕರ ಸಂಘ(ಎಐಯುಟಿಯುಸಿ) ದಿಂದ ನಗರದ ಜಿಲ್ಲಾ ಪಂಚಾಯ್ತಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು.

ಹಾಸ್ಟೆಲ್‌ ಕಾರ್ಮಿಕರಿಗೆ ಕಳೆದ 2-3 ತಿಂಗಳಿಂದ ವೇತನ ಬಿಡುಗಡೆಯಾಗಿಲ್ಲ. ಇಎಸ್‌ಐ, ಪಿಎಫ್‌ ಹಣ ಕಟ್ಟಿರುವ ಬಗ್ಗೆ ಮಾಹಿತಿ ಇಲ್ಲ. ವೇತನ ಆಯಾ ತಿಂಗಳಲ್ಲಿ ಬಿಡುಗಡೆಯಾಗದೆ ಕಾರ್ಮಿಕರು ಜೀವನ ನಡೆಸುವುದು ಕಷ್ಟವಾಗಿದೆ. ಇತ್ತೀಚೆಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸುತ್ತೋಲೆಯಂತೆ ಈ ಕಾರ್ಮಿಕರಿಗೆ ಆಯಾ ತಿಂಗಳ 5ನೇ ತಾರೀಖಿನೊಳಗೆ ವೇತನ ತಲುಪಿಸಬೇಕು. ವೇತನ ಚೀಟಿ ನೀಡಬೇಕು, ಇಎಸ್‌ಐ, ಪಿಎಫ್‌ ಜಮೆಯಾಗಿರುವ ಬಗ್ಗೆ ಸಂಬಂಧಪಟ್ಟವರಿಂದ ದಾಖಲಾತಿ ಒದಗಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

Tap to resize

Latest Videos

ಪ್ರತಿಭಟನಾಕಾರರನ್ನು ಉದ್ದೇಶಿಸಿ ಸಂಘದ ಜಿಲ್ಲಾ ಸಂಘಟನಾಕಾರರಾದ ಮಂಜುಳ ಗೋನವಾರ ಮಾತನಾಡಿ, ಕಾರ್ಮಿಕ ಕಾಯ್ದೆಯಡಿ 8 ಗಂಟೆ ಕೆಲಸದ ನಿಯಮವಿದ್ದರೂ ಹೆಚ್ಚುವರಿಯಾಗಿ ಕೆಲಸ ಮಾಡುತ್ತಾ ವಿದ್ಯಾರ್ಥಿಗಳಿಗೆ ಸಮಯಕ್ಕೆ ಸರಿಯಾಗಿ ಅಡುಗೆ ಮಾಡುವರು. ಆದರೆ ಅವರಿಗೆ ನಿಗದಿತ ಸಮಯಕ್ಕೆ ವೇತನ ಬಿಡುಗಡೆಯಾಗುವುದಿಲ್ಲ ಹಾಗೂ ವಿವಿಧ ಇಲಾಖೆಗಳ ವೇತನ ರೀತಿಯ ವ್ಯತ್ಯಾಸಗಳನ್ನು ಸರಿಪಡಿಸುವಂತೆ ಒತ್ತಾಯಿಸಿದರು.

ರಾಜ್ಯ ಕಾರ್ಯದರ್ಶಿ ಕೆ.ವಿ. ಭಟ್‌ ಮಾತನಾಡಿ, ಬೆಲೆ ಏರಿಕೆಯ ಈ ಸಂದರ್ಭದಲ್ಲಿ ಬರುವ ಅಲ್ಪ ವೇತನಕ್ಕೂ ತಿಂಗಳು ಗಟ್ಟಲೆ ಕಾಯುವ ಪರಿಸ್ಥಿತಿ ಉಂಟಾಗಿದೆ. ವಿದ್ಯಾರ್ಥಿ ನಿಲಯವನ್ನು ತಮ್ಮ ಮನೆಯಷ್ಟೆ

ಪ್ರೀತಿಸುವ ಗುಣ ಕಾರ್ಮಿಕರಲ್ಲಿದೆ. 8 ಗಂಟೆಗೂ ಅಧಿಕ ಕೆಲಸ ಮಾಡುತ್ತಿರುವ ವಿವಿಧ ವಿದ್ಯಾರ್ಥಿನಿಲಯಗಳ ಕಾರ್ಮಿಕರ ಬಾಕಿ ವೇತನವನ್ನು ಶೀಘ್ರದಲ್ಲಿ ಬಿಡುಗಡೆಗೊಳಿಸಿ ಅವರ ಸಮಸ್ಯೆಗಳನ್ನು ಪರಿಹರಿಸಲು ಸಂಘದ ಪದಾಧಿಕಾರಿಗಳೊಂದಿಗೆ ಸಭೆ ನಡೆಸಬೇಕು ಎಂದು ಆಗ್ರಹಿಸಿದರು.

ವಸತಿನಿಲಯ, ವಸತಿ ಶಾಲೆ/ ಕಾಲೇಜು / ಆಶ್ರಮ ಶಾಲೆಗಳಲ್ಲಿ ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಡಿ.ಗ್ರೂಪ್‌ ಅಡುಗೆಯವರು, ಅಡುಗೆ ಸಹಾಯಕರು, ಕಾವಲುಗಾರರನ್ನು ಖಾಯಂಗೊಳಿಸಬೇಕು. ಏಜೆನ್ಸಿಗಳಿಂದ ನೇಮಕಾತಿ ಪತ್ರ, ಸಮವಸ್ತ್ರ ಮತ್ತು ಗುರುತಿನ ಚೀಟಿ ಕೊಡಿಸಬೇಕು. ಕಾನೂನು ಬದ್ಧವಾದ ವಾರದ ರಜೆ, ರಾಷ್ಟ್ರೀಯ ಹಬ್ಬಗಳ ರಜೆ, ಸಾಂದರ್ಭಿಕ ರಜೆಗಳನ್ನು ನೀಡಬೇಕು. ರಜೆಯ ದಿನಗಳಲ್ಲಿ ಕೆಲಸ ಮಾಡಿಸಿಕೊಂಡಲ್ಲಿ ಕಾರ್ಮಿಕ ಕಾಯ್ದೆಯ ಅನ್ವಯ ವೇತನ ನೀಡಬೇಕು ಎಂದು ಒತ್ತಾಯಿಸಿ ಪ್ರತಿಭಟನಾಕಾರರು ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಪ್ರೇಮ ಹಾಗೂ ಅಂಬೇಡ್ಕರ್‌ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಡಾ.ಬಾಲಕೃಷ್ಣ ಅವರಿಗೆ ಮನವಿ ಸಲ್ಲಿಸಿದರು.

ಪ್ರತಿಭಟನೆಯಲ್ಲಿ ತಾಲೂಕಿನ ವಿವಿಧ ವಿದ್ಯಾರ್ಥಿನಿಲಯ, ವಸತಿ ಶಾಲೆಗಳ ಗುತ್ತಿಗೆ ಆಧಾರದ ನೌಕರರು ಪಾಲ್ಗೊಂಡಿದ್ದರು.

  •  ಹಾಸ್ಟೆಲ್‌ ಕಾರ್ಮಿಕರ ಬಾಕಿ ವೇತನ ಬಿಡುಗಡೆಗೆ ಆಗ್ರಹ
  • - ತುಮಕೂರಿನ ಜಿ.ಪಂ. ಕಚೇರಿ ಮುಂಭಾಗ ಎಐಯುಟಿಯುಸಿ ವತಿಯಿಂದ ಪ್ರತಿಭಟನೆ
  • ತಾಲೂಕಿನ ವಿವಿಧ ವಸತಿ ನಿಲಯ ಹಾಗೂ ವಸತಿ ಶಾಲೆಗಳಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಕಾರ್ಮಿಕರ ಬಾಕಿ ವೇತನ
  • ಕರ್ನಾಟಕ ರಾಜ್ಯ ಸಂಯುಕ್ತ ವಸತಿ ನಿಲಯ ಕಾರ್ಮಿಕರ ಸಂಘ(ಎಐಯುಟಿಯುಸಿ) ದಿಂದ ನಗರದ ಜಿಲ್ಲಾ ಪಂಚಾಯ್ತಿ ಕಚೇರಿ ಮುಂಭಾಗ ಪ್ರತಿಭಟನೆ
  • ಹಾಸ್ಟೆಲ್‌ ಕಾರ್ಮಿಕರಿಗೆ ಕಳೆದ 2-3 ತಿಂಗಳಿಂದ ವೇತನ ಬಿಡುಗಡೆಯಾಗಿಲ್ಲ
  • ಇಎಸ್‌ಐ, ಪಿಎಫ್‌ ಹಣ ಕಟ್ಟಿರುವ ಬಗ್ಗೆ ಮಾಹಿತಿ ಇಲ್ಲ. ವೇತನ ಆಯಾ ತಿಂಗಳಲ್ಲಿ ಬಿಡುಗಡೆಯಾಗದೆ ಕಾರ್ಮಿಕರು ಜೀವನ ನಡೆಸುವುದು ಕಷ್ಟವಾಗಿದೆ.
click me!