ಮಾರ್ವಾಡಿಗಳು ಹೋಳಿ ಹಬ್ಬಕ್ಕೆ ಮಾಡಿಸಿದ್ದ ಊಟ ತಿಂದು ಹಾಸ್ಟೆಲ್ ವಿದ್ಯಾರ್ಥಿ ಸಾವು, 29 ಮಕ್ಕಳು ಅಸ್ವಸ್ಥ!

ಮಂಡ್ಯದ ವಸತಿ ಶಾಲೆಯಲ್ಲಿ ಫುಡ್ ಪಾಯ್ಸನ್‌ನಿಂದ ಓರ್ವ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ. ಹೋಳಿ ಹಬ್ಬದ ಊಟ ಸೇವಿಸಿ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ.

Hostel student dies after eating Holi festival food 29 children fall ill sat

ಮಂಡ್ಯ (ಮಾ.16): ಹೋಳಿ ಹಬ್ಬದ ನಿಮಿತ್ತ ಮಾರ್ವಾಡಿ ಉದ್ಯಮಿಯೊಬ್ಬರು ಭರ್ಜರಿ ಊಟವನ್ನು ಮಾಡಿಸಿದ್ದರು. ಆದರೆ, ಊಟ ಹೆಚ್ಚಾಗಿ ಉಳಿದಿದ್ದರಿಂದ ಹತ್ತಿರದ ವಸತಿ ಶಾಲೆಗೆ ಕೊಟ್ಟಿದ್ದರು. ಆದರೆ, ಈ ಊಟವನ್ನು ಸೇವನೆ ಮಾಡಿದ ವಿದ್ಯಾರ್ಥಿಗಳಿಗೆ ವಾಂತಿ ಬೇಧಿ ಶುರುವಾಗಿದ್ದು, ಫುಡ್ಸ್‌ ಪಾಯ್ಸನ್‌ನಿಂದ ಓರ್ವ ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ನಡೆದಿದೆ.

ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಟಿ. ಕಾಗೇಪುರ ಗ್ರಾಮದಲ್ಲಿರುವ ಗೋಕುಲ ವಿದ್ಯಾಸಂಸ್ಥೆಯ ಹಾಸ್ಟೆಲ್‌ನಲ್ಲಿ ಈ ದುರಂತ ಸಂಭವಿಸಿದೆ. ಹಾಸ್ಟೆಲ್‌ನಲ್ಲಿ ನಿನ್ನೆ ರಾತ್ರಿ ಆಹಾರ ಸೇವಿಸಿದ ಫುಡ್ ಪಾಯ್ಸನ್ ಉಂಟಾಗಿ 30 ವಿದ್ಯಾರ್ಥಿಗಳಿಗೆ ವಾಂತಿ ಬೇಧಿ ಶುರುವಾಗಿದೆ. ಕೂಡಲೇ ಇವರನ್ನು ಮಳವಳ್ಳಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದರಾದರೂ ಚಿಕಿತ್ಸೆ ಫಲಕಾರಿಯಾಗದೇ ಒಬ್ಬ ವಿದ್ಯಾರ್ಥಿ ಸಾವನ್ನಪ್ಪಿದ್ದಾರೆ. ಮೃತ ವಿದ್ಯಾರ್ಥಿಯನ್ನು ಕೆರ್ಲಾಂಗ್(13) ಆಗಿದ್ದಾನೆ. ಇನ್ನು ಈ ಘಟನೆಗೆ ಹಾಸ್ಟೆಲ್ ಸಿಬ್ಬಂದಯೇ ಕಾರಣವೆಂದು ಗ್ರಾಮಸ್ಥರು ಹಾಗೂ ಮಕ್ಕಳ ಪೋಷಕರು ಆಕ್ರೋಶ ಹೊರ ಹಾಕಿದ್ದಾರೆ.

Latest Videos

ಘಟನೆಯ ಹಿನ್ನೆಲೆಯೇನು?
ಮಳವಳ್ಳಿ ಮೂಲದ ಉದ್ಯಮಿಯೊಬ್ಬರು ನಿನ್ನೆ ಹೋಳಿ ಹಬ್ಬಕ್ಕೆ ಊಟ ಮಾಡಿಸಿದ್ದರು. ಇನ್ನು ಹಬ್ಬಕ್ಕೆ ಮಾಡಿಸಿದ್ದ ಊಟ ಹೆಚ್ಚಾಗಿ ಉಳಿದಿದ್ದರಿಂದ ಅದನ್ನು ತಂದು ಹಾಸ್ಟೆಲ್‌ನಲ್ಲಿರುವ ಮಕ್ಕಳಿಗೆ ನೀಡಲಾಗಿತ್ತು. ಇನ್ನು ಹೋಳಿ ಹಬ್ಬಕ್ಕೆ ಮಾಡಿಸಿದ ಊಟವನ್ನು ರಾತ್ರಿ ಸೇವನೆ ಮಾಡಿದ ಮಕ್ಕಳಿಗೆ ಆರೋಗ್ಯದಲ್ಲಿ ಏರುಪೇರು ಕಂಡುಬಂದಿದೆ. ಮಕ್ಕಳು ಹೊಟ್ಟೆನೋವು, ವಾಂತಿ ಬೇಧಿಯಿಂದ ಬಳಲುತ್ತಿದ್ದರೂ ಅವರನ್ನು ಕೂಡಲೇ ಆಸ್ಪತ್ರೆಗೆ ಸೇರಿಸದೆ ಸಿಬ್ಬಂದಿ ನಿರ್ಲಕ್ಷ್ಯ ಮಾಡಿದ್ದಾರೆ. ಓರ್ವ ವಿದ್ಯಾರ್ಥಿ ಹೊಟ್ಟೆನೋವು ತಾಳಲಾರದೇ ಮೂರ್ಛೆ ಬಿದ್ದ ತಕ್ಷಣ ಆಂಬುಲೆನ್ಸ್ ಕರೆಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಅಷ್ಟೆರಲ್ಲಾಗಲೇ ಅರುಣಾಚಲ ಪ್ರದೇಶ ರಾಜ್ಯದಿಂದ ವಿದ್ಯಾಭ್ಯಾಸಕ್ಕೆ ಬಂದಿದ್ದ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ.

ಇದನ್ನೂ ಓದಿ: ಮೈಕ್ರೋ ಫೈನಾನ್ಸ್ ಸಿಬ್ಬಂದಿ ಬೆಳಗ್ಗೆ 8ಕ್ಕೆ ಸಾಲ ವಸೂಲಿಗೆ ಬಂದರೆ ರಾತ್ರಿ 10ಕ್ಕೆ ವಾಪಸ್; ದಾಂಪತ್ಯದಲ್ಲಿ ಬಿರುಕು!

ಇದಾದ ನಂತರ ಇಂದು ಬೆಳಗ್ಗೆ ಪೂಡ್ ಪಾಯ್ಸನ್‌ನಿಂಬ ಬಳಲುತ್ತಿದ್ದ ಒತರೆ 30 ವಿದ್ಯಾರ್ಥಿಗಳನ್ನು ಶಾಲಾ ಆಡಳಿತ ಮಂಡಳಿ ಆಸ್ಪತ್ರೆಗೆ ದಾಖಲಿಸಿದೆ. ಮಳವಳ್ಳಿ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇದೀಗ ಉದ್ಯಮಿ ಹೋಳಿ ಹಬ್ಬದ‌ ಪಾರ್ಟಿಯಲ್ಲಿ ಮಾಡಿಸಿದ್ದ ಊಟವನ್ನು ತಿಂದು ಮಕ್ಕಳು ಅಸ್ವಸ್ಥಗೊಂಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಮಳವಳ್ಳಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಈವರೆಗೆ ಯಾವುದೇ ಪ್ರಕರಣ ದಾಖಲಾಗಿಲ್ಲ.

ಮಾರ್ವಾಡಿಗಳ ಕುಟುಂಬಕ್ಕೂ ವಾಂತಿ ಬೇಧಿ:
ಫುಡ್ ಪಾಯಿಸನ್‌ನಿಂದ ವಿದ್ಯಾರ್ಥಿಗಳು ಅಸ್ವಸ್ಥ ಪ್ರಕರಣದ ಬೆನ್ನಲ್ಲಿಯೇ ಮಳವಳ್ಳಿ ಆಸ್ಪತ್ರೆಗೆ ಭೇಟಿ ನೀಡಿದ ಜಿಲ್ಲಾ ವೈದ್ಯಾಧಿಕಾರಿ ಡಾ.ಮೋಹನ್ ಅವರು ಪರಿಶೀಲನೆ ಮಾಡಿದ್ದಾರೆ. ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಾರ್ವಾಡಿಗಳು ಹೋಳಿ ಹಬ್ಬ ಪ್ರಯುಕ್ತ ಶುಕ್ರವಾರ ರಾತ್ರಿ ಊಟ ಮಾಡಿಸಿದ್ದರು. ಗೋಕುಲಂ ವಿದ್ಯಾಸಂಸ್ಥೆ ವಿದ್ಯಾರ್ಥಿಗಳಿಗೂ ಅದೇ ಊಟ ವಿತರಿಸಲಾಗಿದೆ‌. ಮಾರನೆಯ ದಿನ ಮಧ್ಯಾಹ್ನ ವಿದ್ಯಾರ್ಥಿಗಳಿಗೆ ವಾಂತಿ, ಬೇಧಿ ಶುರುವಾಗಿದೆ. ವೈದ್ಯರು ಚಿಕಿತ್ಸೆ ನೀಡಿ ಬಂದಿದ್ದರು. ಆದರೆ, ಚೆನ್ನಾಗಿ ಓಡಾಡಿಕೊಂಡಿದ್ದ ವಿದ್ಯಾರ್ಥಿಯೊಬ್ಬ ಸಡನ್ ಆಗಿ ಡೆತ್‌ ಆಗಿದ್ದಾನೆ. ಪೋಸ್ಟ್ ಮಾರ್ಟಮ್‌‌ನಲ್ಲಿ ಸಾವಿಗೆ ಕಾರಣ ನಿಖರವಾಗಿ ಗೊತ್ತಾಗುತ್ತದೆ. 

ಇದನ್ನೂ ಓದಿ: ಕಲಬುರಗಿಯಲ್ಲಿ ಮಂಗಳಮುಖಿಯರ ಜಡೆ ಜಗಳ: ವಿಡಿಯೋ ವೈರಲ್!

ಇದೀಗ ಹಾಸ್ಟೆಲ್‌ನಲ್ಲಿ ಊಟ ಸೇವಿಸಿ ಅಸ್ವಸ್ಥಗೊಂಡ ವಿದ್ಯಾರ್ಥಿಗಳಲ್ಲಿ 27 ಮಂದಿ ಹೊರ ರಾಜ್ಯದವರು. ಇಬ್ಬರು ಸ್ಥಳೀಯ ವಿದ್ಯಾರ್ಥಿಗಳು. ಅಸ್ವಸ್ಥಗೊಂಡ ಎಲ್ಲಾ ವಿದ್ಯಾರ್ಥಿಗಳು ಆರೋಗ್ಯವಾಗಿದ್ದಾರೆ. ಹಬ್ಬದ ಊಟ ಮಾಡಿಸಿ, ಸೇವಿಸಿದ್ದ ಮಾರ್ವಾಡಿಗಳಿಗೂ ವಾಂತಿ, ಭೇದಿ ಆಗಿದೆ. ಅವರು ಹಲವೆಡೆ ಚಿಕಿತ್ಸೆ ಪಡೆದಿದ್ದಾರೆ. ಈ ಪ್ರಕರಣ ಸಂಬಂಧ ಮಳವಳ್ಳಿ ಠಾಣೆಯಲ್ಲಿ FIR ದಾಖಲಿಸಲಾಗಿದೆ ಎಂದು ಜಿಲ್ಲಾ ರೋಗ್ಯಾಧಿಕಾರಿ ಮೋಹನ್ ತಿಳಿಸಿದರು.

vuukle one pixel image
click me!