ಹುಬ್ಬಳ್ಳಿ ಏರ್‌ಪೋರ್ಟ್‌ ಕರ್ನಾಟಕದ ಮೊದಲ ಹಸಿರು ವಿಮಾನ ನಿಲ್ದಾಣ..!

By Kannadaprabha News  |  First Published Nov 22, 2022, 10:00 AM IST

ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಅಳವಡಿಸಿರುವ 8 ಮೆ.ವ್ಯಾ. ಗ್ರಿಡ್‌-ಸಂಪರ್ಕಿತ ಸೌರ ವಿದ್ಯುತ್‌ ಸ್ಥಾವರದಿಂದಾಗಿ ಏರ್‌ಪೋರ್ಟ್‌ ಶೇ.100ರಷ್ಟು ಹಸಿರು ವಿಮಾನ ನಿಲ್ದಾಣವಾಗಿದೆ. 


ಹುಬ್ಬಳ್ಳಿ(ನ.22): ಹುಬ್ಬಳ್ಳಿ ಏರ್‌ಪೋರ್ಟ್‌ ರಾಜ್ಯದ ಮೊದಲ ಹಸಿರು ವಿಮಾನ ನಿಲ್ದಾಣವಾಗಿ ರೂಪುಗೊಂಡಿದೆ. ಈ ಸ್ಥಾನಮಾನ ಪಡೆದ ದೇಶದ ಕೆಲವೇ ಕೆಲ ವಿಮಾನ ನಿಲ್ದಾಣಗಳಲ್ಲಿ ಹುಬ್ಬಳ್ಳಿ ಕೂಡ ಒಂದು. ಈ ವಿಚಾರವನ್ನು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಟ್ವೀಟರ್‌ ಮೂಲಕ ಹಂಚಿಕೊಂಡಿದ್ದಾರೆ. ಜತೆಗೆ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರಿಗೆ ಧನ್ಯವಾದ ತಿಳಿಸಿದ್ದಾರೆ. 

ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಅಳವಡಿಸಿರುವ 8 ಮೆ.ವ್ಯಾ. ಗ್ರಿಡ್‌-ಸಂಪರ್ಕಿತ ಸೌರ ವಿದ್ಯುತ್‌ ಸ್ಥಾವರದಿಂದಾಗಿ ಏರ್‌ಪೋರ್ಟ್‌ ಶೇ.100ರಷ್ಟು ಹಸಿರು ವಿಮಾನ ನಿಲ್ದಾಣವಾಗಿದೆ. ಈ ಸ್ಥಾವರದಿಂದ ಉತ್ಪತ್ತಿಯಾಗುವ ಸೌರಶಕ್ತಿಯನ್ನು ಹುಬ್ಬಳ್ಳಿಯ ಗ್ರಿಡ್‌ಗೆ ನೀಡಲಾಗುತ್ತಿದೆ. ವಿಮಾನ ನಿಲ್ದಾಣದ 38 ಎಕರೆ ಪ್ರದೇಶದಲ್ಲಿ ಸೌರಶಕ್ತಿ ಘಟಕ ಸ್ಥಾಪಿಸಲಾಗಿದ್ದು, ಅಲ್ಲಿ ವಿದ್ಯುತ್‌ ಉತ್ಪಾದಿಸಲಾಗುತ್ತಿದೆ. 2030ರ ವೇಳೆಗೆ ನವೀಕರಿಸಬಹುದಾದ ಮೂಲಗಳಿಂದ ಶೇ.50ರಷ್ಟು ಇಂಧನ ಉತ್ಪಾದಿಸುವ ಪ್ರಧಾನಿ ಮೋದಿ ಅವರ ಕನಸನ್ನು ನನಸಾಗಿಸಲು ಹುಬ್ಬಳ್ಳಿ ವಿಮಾನ ನಿಲ್ದಾಣ ಮೊದಲ ಹೆಜ್ಜೆ ಇಟ್ಟಿದೆ. 

Tap to resize

Latest Videos

ಹುಬ್ಬಳ್ಳಿಯ ಏರ್ಪೋರ್ಟ್‌ಗೆ ಬೆಲ್ಜಿಯಂ ಶಫರ್ಡ್ ಶ್ವಾನಗಳ ಕಾವಲು

ವಿಮಾನ ನಿಲ್ದಾಣ ಪ್ರಾಧಿಕಾರವೂ ಹುಬ್ಬಳ್ಳಿ ನಿಲ್ದಾಣವನ್ನು ಗ್ರೀನ್‌ ಎನರ್ಜಿ ಯೋಜನೆಯಡಿ ಆಯ್ಕೆ ಮಾಡಿಕೊಂಡಿತ್ತು. ವಿಮಾನ ನಿಲ್ದಾಣದ 38 ಎಕರೆ ಪ್ರದೇಶದಲ್ಲಿ ಸೌರಶಕ್ತಿ ಘಟಕ ಸ್ಥಾಪಿಸಲಾಗಿದ್ದು, ವಿದ್ಯುತ್‌ ಉತ್ಪಾದಿಸಲಾಗುತ್ತಿದೆ. ತಾರಿಹಾಳದ ಎಲೆಕ್ಟ್ರಿಕಲ್‌ ಗ್ರಿಡ್‌ನೊಂದಿಗೆ ನ.8ರಂದು ಒಡಂಬಡಿಕೆ ಮಾಡಿಕೊಳ್ಳಲಾಗಿದ್ದು, ಇಲ್ಲಿ ಉತ್ಪಾದನೆಯಾಗುವ ವಿದ್ಯುತ್‌ ಬೆಂಗಳೂರು, ಬೆಳಗಾವಿ, ಹುಬ್ಬಳ್ಳಿ, ಮೈಸೂರು, ಕಲಬುರಗಿ ವಿಮಾನ ನಿಲ್ದಾಣಗಳಲ್ಲೂ ಬಳಕೆಯಾಗಲಿದೆ ಎಂದು ವಿಮಾನ ನಿಲ್ದಾಣದ ನಿರ್ದೇಶಕ ಪ್ರಮೋದ್‌ ಠಾಕ್ರೆ ತಿಳಿಸಿದ್ದಾರೆ.
 

click me!