
ವರದಿ: ಗುರುರಾಜ್ ಹೂಗಾರ್
ಹುಬ್ಬಳ್ಳಿ, (ಮೇ.09): ಬೆಳೆಯುತ್ತಿರುವ ಮಹಾನಗರಗಳಲ್ಲಿ ಘನ ತ್ಯಾಜ್ಯ ನಿರ್ವಹಣೆಯದ್ದೇ ದೊಡ್ಡ ಸಮಸ್ಯೆ. ನಿತ್ಯ ಸಂಗ್ರವಾಗುವ ನೂರಾರು ಟನ್ ಕಸ್ ವಿಲೇವಾರಿಗೆ ಪಾಲಿಕೆಗೆಳಿಗೆ ಸಾಕು-ಬೇಕಾಗುತ್ತೆ. ಆದ್ರೇ ರಾಜ್ಯದ ಎರಡನೇ ಅತಿದೊಡ್ಡ ಮಹಾನಗರ ಪಾಲಿಕೆ ಅಂತಲೇ ಕರೆಸಿಕೊಳ್ಳುವ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಕಸ ನಿರ್ವಹಣೆ ಹೊಸ ಉಪಾಯ ಕಂಡುಕೊಂಡಿದೆ. ಟನ್ ಗಟ್ಟಲೇ ಸಂಗ್ರಹವಾದ ಕಸ ಕ್ಷಣಮಾತ್ರದಲ್ಲಿ ವಿಲೇವಾರಿ ಮಾಡಿ ಬೇಷ್ ಎನಿಸಿಕೊಂಡಿದೆ. ತ್ಯಾಜ್ಯ ನಿರ್ವಹಣೆಗೆ ಪಾಲಿಕೆ ಕಂಡುಕೊಂಡ ಮಾರ್ಗ ಯಾವುದು ಅಂತೀರಾ ಈ ಕೆಳಗೆ ಓದಿ..
ಹಸಿ ತ್ಯಾಜ್ಯದಿಂದ ಕಾಂಪೋಸ್ಟ್ ಗೊಬ್ಬರ ತಯಾರಿಸುವ ಮಹಾನಗರ ಪಾಲಿಕೆಯ ಯೋಜನೆ ಆರಂಭಗೊಂಡಿದ್ದು, ಮಾರುಕಟ್ಟೆಗೆ ಅಧಿಕೃತವಾಗಿ ಶೀಘ್ರದಲ್ಲೇ ಲೋಕಾರ್ಪಣೆಗೊಳಿಸಲು ಪಾಲಿಕೆ ಸಿದ್ಧವಾಗಿದೆ. ಹೌದು.. ಭೂ ಸಮೃದ್ಧಿ ಬ್ರ್ಯಾಂಡ್ ಹೆಸರಲ್ಲಿ ಕಾಂಪೋಸ್ಟ್ ಗೊಬ್ಬರವನ್ನು ಕೈಗೆಟುಕುವ ದರದಲ್ಲಿ ನೀಡಲು ಹುಬ್ಬಳ್ಳಿ ಧಾರವಾಡ ಪಾಲಿಕೆ ಸನ್ನದ್ಧವಾಗಿದೆ . ಬರೋಬ್ಬರಿ ಐದು ವರ್ಷಗಳ ನಂತರ ಯೋಜನೆ ಸಾಕಾರಗೊಂಡಿದ್ದು, ರೈತ ಸಮುದಾಯಕ್ಕೆ ಪಾಲಿಕೆ ತಯಾರಿಸಿದ ಗೊಬ್ಬರ ದೊರೆಯಲಿದೆ. ಮಹಾನಗರದ ಘನ ತ್ಯಾಜ್ಯ ಸಮರ್ಪಕ ನಿರ್ವಹಣೆಗಾಗಿ ಪಾಲಿಕೆ ಸಮಗ್ರ ಪನತ್ಯಾಜ್ಯ ಯೋಜನೆ ರೂಪಿಸಿತ್ತು. ಹಸಿ ತ್ಯಾಜ್ಯದಿಂದ ಸಾವಯವ ಗೊಬ್ಬರ, ಒಣ ತ್ಯಾಜ್ಯದಿಂದ ಸಿಮೆಂಟ್ ಕಂಪನಿಗಳಿಗೆ ಅಗತ್ಯವಾದ ಪರ್ಯಾಯ ಇಂಧನ ಸಿದ್ಧಪಡಿಸುವುದು ಯೋಜನೆ ಅನುಷ್ಠಾನಗೊಂಡಿದ್ದು. ಹುಬ್ಬಳ್ಳಿ ಧಾರವಾಡ ಅವಳಿ ನಗರವನ್ನು ಸ್ವಚ್ಛ ಹಾಗೂ ಸುಂದರ ನಗರವಾಗಿಸುವ ಕಾರ್ಯಕ್ಕೆ ಸನ್ನದ್ಧವಾಗಿದೆ ಇದಕ್ಕಾಗಿ ಸುಮಾರು 65 ಕೋಟಿ ವೆಚ್ಚದಲ್ಲಿ ಸಿದ್ಧವಾದ ಯೋಜನೆ ಇದೀಗ ಕಾರ್ಯರೂಪಕ್ಕೆ ಬಂದಿದೆ. ಇದೀಗ ಮೊದಲ ಹಂತದಲ್ಲಿ ಹಸಿ ತ್ಯಾಜ್ಯದಿಂದ ಕಾಂಪೋಸ್ಟ್ ಗೊಬ್ಬರ ತಯಾರಿಸಲಾಗುತ್ತಿದ್ದು, ಭೂ ಸಮೃದ್ಧಿ ಹೆಸರಲ್ಲಿ ಮಾರುಕಟ್ಟೆಗೆ ಬಿಡುಗಡೆ ಮಾಡಲು ಪಾಲಿಕೆ ಸಿದ್ಧತೆ ಮಾಡಿಕೊಂಡಿದೆ.
Hubballi: ಆಮೆಗತಿಯಲ್ಲಿ ಸಾಗಿದೆ ಪೈಪ್‌ಲೈನ್ ಮೂಲಕ ಗ್ಯಾಸ್ ಸಂಪರ್ಕ ಕಲ್ಪಿಸುವ ಯೋಜನೆ!
ಹುಬ್ಬಳ್ಳಿಯಲ್ಲಿ ದಿನಕ್ಕೆ ಸುಮಾರು 60-70 ಟನ್ ಹಾಗೂ ಧಾರವಾಡದಲ್ಲಿ 30-35 ಟನ್ ಹಸಿ ತ್ಯಾಜ್ಯ ದೊರೆಯುತ್ತಿದೆ. ಧಾರವಾಡದಲ್ಲಿ ಈಗಾಗಲೇ ಕಾಂಪೋಸ್ಟ್ ಗೊಬ್ಬರ ಉತ್ಪಾದನೆ ಆರಂಭಗೊಂಡಿದ್ದು, ಹುಬ್ಬಳ್ಳಿ ಘಟಕದಲ್ಲಿ ಕಳೆದ ಎರಡು ತಿಂಗಳಿನಿಂದ ಕಾರ್ಯ ಆರಂಭಿಸಿದೆ. ಆರಂಭದಲ್ಲಿ ಪಾಲಿಕೆ ವಲಯ ಕಚೇರಿಗಳಲಲ್ಲಿ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಲಾಗಿದ್ದು ನಂತರ ಬೇಡಿಕೆ ಆಧಾರದ ಮೇಲೆ ಹೊರಗಡೆ ಕೇಂದ್ರಗಳನ್ನು ಆರಂಭಿಸುವ ಗುರಿಯಿದೆ, ಹುಬ್ಬಳ್ಳಿ ಹಾಗೂ ಧಾರವಾಡದ ಎರಡು ಘಟಕಗಳನ್ನು ಸದ್ಯಕ್ಕೆ ಪಾಲಿಕೆ ಸಿಬ್ಬಂದಿ ಮೂಲಕ ನಿರ್ವಹಿಸಲಾಗುತ್ತಿದೆ. ಪ್ರಾಯೋಗಿಕ ಹಂತವಾಗಿರುವುದರಿಂದ ಇನ್ನೂ ಪರಿಣಾಮಕಾರಿಯಾಗಿ ಕಾಂಪೋಸ್ಟ್ ಗೊಬ್ಬರ ಉತ್ಪಾದನೆ ಆಗುತ್ತಿಲ್ಲ. ಘಟಕಗಳ ಸಾಮರ್ಥ್ಯದ ಸಂಪೂರ್ಣ ಸದ್ಬಳಕೆ ಮಾಡಿಕೊಳ್ಳಬೇಕಾದರೆ ಹೆಚ್ಚಿನ ಪ್ರಮಾಣದ ಮಾನವ ಸಂಪನ್ಮೂಲದ ಅಗತ್ಯವಿದೆ. ಪ್ರಾಥಮಿಕ ಹಂತದಲ್ಲಿ ಹಸಿ ಹಾಗೂ ಒಣ ತ್ಯಾಜ್ಯ ಪ್ರತ್ಯೇಕವಾಗಿ ಸಂಗ್ರಹ ಕಟ್ಟುನಿಟ್ಟಾಗಿ ಜಾರಿ ಆದರೆ ಇನ್ನಷ್ಟು ಪ್ರಮಾಣದಲ್ಲಿ ಪರಿಣಾಮಕಾರಿ ಹಾಗೂ ನಿರೀಕ್ಷಿತ ಗುರಿ ತಲುಪಲು ಸಾಧ್ಯವಾಗಿದೆ. ಸುಮಾರು 80 ಟನ್ ಗೊಬ್ಬರ ದಾಸ್ತಾನಿದೆ, ಇನ್ನೂ ಹುಬ್ಬಳಿಯಲ್ಲಿ ಇದೀಗ 40 ಟನ್ ಸಿದ್ಧವಾಗಿದೆ. ಸಮರ್ಪಕವಾಗಿ ರೈತರಿಗೆ ಮುಟ್ಟಿಸುವ ನಿಟ್ಟಿನಲ್ಲಿ ಭೂ ಸಮೃದ್ಧಿ ಎಂದು ಬ್ರ್ಯಾಂಡಿಂಗ್ ಮಾಡಲಾಗಿದೆ.
ಒಟ್ಟಿನಲ್ಲಿ ನಿರ್ವಹಣಾ ವೆಚ್ಚ ಸರಿದೂಗಿಸುವ ನಿಟ್ಟಿನಲ್ಲಿ ಕೈಗೆಟುಕುವ ದರದಲ್ಲಿ ಮಾರಾಟ ಮಾಡುವ ಇಂಗಿತ ಪಾಲಿಕಗಿದೆ. ಸದ್ಯಕ್ಕೆ ಪ್ರತಿ ಕೆಜಿಗೆ 2.16 ರೂ ದರದಲ್ಲಿ ಮಾರಾಟ ಮಾಡಲಾಗುತ್ತಿದೆ ಗೊತ್ತಿರುವ ರೈತರು, ಜನರು ಧಾರವಾಡದಲ್ಲಿ ಖರೀದಿ ಮಾಡುತ್ತಿದ್ದಾರೆ. ಇದನ್ನು 50 ಹಾಗೂ 15 ಕೆಜಿ ಬ್ಯಾಗ್‌ನಲ್ಲಿ ಮಾರಾಟ ಮಾಡುವ ಚಿಂತನೆಯಿದೆ.