ಹುಬ್ಬಳ್ಳಿ-ಧಾರವಾಡ ಕಮಿಷನರ್‌ಗೆ ಅನಾರೋಗ್ಯ: ಬೆಂಗಳೂರಿಗೆ ಏರ್‌ಲಿಫ್ಟ್‌

Kannadaprabha News   | Asianet News
Published : Nov 13, 2020, 10:39 AM ISTUpdated : Nov 13, 2020, 10:46 AM IST
ಹುಬ್ಬಳ್ಳಿ-ಧಾರವಾಡ ಕಮಿಷನರ್‌ಗೆ ಅನಾರೋಗ್ಯ: ಬೆಂಗಳೂರಿಗೆ ಏರ್‌ಲಿಫ್ಟ್‌

ಸಾರಾಂಶ

ಲಾಬುರಾವ್‌ಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ| ಕಳೆದ 10 ದಿನಗಳ ಹಿಂದೆಯಷ್ಟೇ ಹು-ಧಾ ಮಹಾನಗರ ಪೊಲೀಸ್‌ಆಯುಕ್ತರಾಗಿ ನೇಮಕವಾಗಿದ್ದ ಲಾಬುರಾಮ್‌| ಆರೋಗ್ಯದಲ್ಲಿ ತೀವ್ರ ಏರುಪೇರು ಕಂಡ ಬಂದ ಹಿನ್ನೆಲೆಯಲ್ಲಿ ವಿಶೇಷ ಇಂಡಿಗೋ ವಿಮಾನದ ಮೂಲಕ ಬೆಂಗಳೂರಿಗೆ ಏರ್‌ಲಿಫ್ಟ್‌| 

ಹುಬ್ಬಳ್ಳಿ(ನ.13): ಹುಬ್ಬಳ್ಳಿ-ಧಾರವಾಡ ಮಹಾನಗರ ಪೊಲೀಸ್ ‌ಕಮಿಷನರ್‌ ಲಾಬುರಾಮ್‌ಅವರು ಕಳೆದ ಎರಡು ದಿನಗಳ ಹಿಂದೆ ಅನಾರೋಗ್ಯದಿಂದ ಎಸ್‌ಡಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಹೆಚ್ಚಿನ ವೈದ್ಯಕೀಯ ಚಿಕಿತ್ಸೆಗಾಗಿ ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ಬುಧವಾರ ರಾತ್ರಿ ಏರ್‌ಲಿಫ್ಟ್‌ ಮಾಡಲಾಗಿದೆ.

ಆರ್‌.ದಿಲೀಪ್ ‌ಅವರ ವರ್ಗಾವಣೆ ಹಿನ್ನೆಲೆ ಹು-ಧಾ ಮಹಾನಗರ ಪೊಲೀಸ್‌ ಆಯುಕ್ತರಾಗಿ ಕಳೆದ 10 ದಿನಗಳ ಹಿಂದೆಯಷ್ಟೇ ನೇಮಕವಾಗಿದ್ದ ಲಾಬುರಾಮ್‌ ಅವರು ಸಿಬ್ಬಂದಿಗಳಲ್ಲಿ ಸಮನ್ವಯತೆ ಸೃಷ್ಟಿಸಿದ್ದರು.

ವಿನಯ್‌ ಕುಲಕರ್ಣಿ ಬಂಧನ: 'ಮುಜುಗರ ತಪ್ಪಿಸಿಕೊಳ್ಳಲು ಬಿಜೆಪಿ ಮೇಲೆ ಆರೋಪ'

ಇದೀಗ ಕಳೆದ ಎರಡು ದಿನಗಳಿಂದ ಗಂಟಲು ನೋವು ಹಾಗೂ ಬಿಳಿ ರಕ್ತ ಕಣಗಳು ಕಡಿಮೆಯಾದ ಹಿನ್ನೆಲೆಯಲ್ಲಿ ಎಸ್‌ಡಿಎಂ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಬುಧವಾರ ರಾತ್ರಿ ಆರೋಗ್ಯದಲ್ಲಿ ತೀವ್ರ ಏರುಪೇರು ಕಂಡ ಬಂದ ಹಿನ್ನೆಲೆಯಲ್ಲಿ ಅವರನ್ನು ವಿಶೇಷ ಇಂಡಿಗೋ ವಿಮಾನದ ಮೂಲಕ ಬೆಂಗಳೂರಿಗೆ ಕರೆದುಕೊಂಡು ಹೋಗಲಾಗಿದೆ ಎಂದು ಮೂಲಗಳು ತಿಳಿಸಿವೆ.
 

PREV
click me!

Recommended Stories

ತಾಳಿ ಕಟ್ಟುವ ಶುಭ ವೇಳೆ 'ಇವನು ನನ್ನ ಗಂಡ' ಎಂದ ಯುವತಿ; ಮಾಜಿ ಪ್ರೇಯಸಿ ರಾಕ್, ಮದುವೆ ಮನೇಲಿದ್ದವರು ಶಾಕ್!
ಸಿಲ್ಕ್ ಬೋರ್ಡ್- ಕೆ.ಆರ್ ಪುರ ಮೆಟ್ರೋ ನಿಲ್ದಾಣದವರೆಗೂ ಹೈಟೆಕ್ ಹೊರವರ್ತುಲ ರಸ್ತೆ ಅಭಿವೃದ್ಧಿಗಾಗಿ ₹307 ಕೋಟಿ ಅನುಮೋದನೆ