ರೈಲ್ವೆ ಪ್ರಯಾಣಿಕರಿಗೆ ಸಂತಸದ ಸುದ್ದಿ ನೀಡಿದ ಕೇಂದ್ರ ಸಚಿವ ಅಂಗಡಿ

By Kannadaprabha News  |  First Published Jan 30, 2020, 11:03 AM IST

15 ರಿಂದ ಹುಬ್ಬಳ್ಳಿ- ವಿಜಯಪುರ ಇಂಟರ್‌ಸಿಟಿ ರೈಲು| ಈ ಭಾಗದ ಜನರಿಗೆ ಸಾಕಷ್ಟು ಅನುಕೂಲ| ಹುಬ್ಬಳ್ಳಿಯಲ್ಲಿ ರೈಲ್ವೆ ಮೇಲ್ಸೇತುವೆ ಲೋಕಾರ್ಪಣೆಗೊಳಿಸಿದ  ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ| 


ಹುಬ್ಬಳ್ಳಿ(ಜ.30): ಇದೇ ಫೆ. 15 ರಿಂದ ಹುಬ್ಬಳ್ಳಿ- ವಿಜಯಪುರ ನಡುವೆ ಇಂಟರ್‌ಸಿಟಿ ರೈಲು ಸಂಚಾರ ಪ್ರಾರಂಭವಾಗಲಿದ್ದು, ತನ್ಮೂಲಕ ಈ ಭಾಗದ ಜನರ ಪ್ರಮುಖ ಬೇಡಿಕೆ ಈಡೇರಲಿದೆ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಹೇಳಿದ್ದಾರೆ.

ಇಲ್ಲಿನ ದೇಸಾಯಿ ಸರ್ಕಲ್‌ನಲ್ಲಿ ರೈಲ್ವೆ ಮೇಲ್ಸೇತುವೆ ಲೋಕಾರ್ಪಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

Latest Videos

undefined

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ವಿಜಯಪುರ- ಹುಬ್ಬಳ್ಳಿ ಮಾರ್ಗದಲ್ಲಿ ಇಂಟರ್‌ಸಿಟಿ ರೈಲು ಪ್ರಾರಂಭಿಸಬೇಕೆಂಬ ಬೇಡಿಕೆ ಬಹು ಕಾಲದಿಂದ ಇತ್ತು. ಈ ನಿಟ್ಟಿನಲ್ಲಿ ಸಭೆ ನಡೆಸಿದ್ದು, ಇದೇ ಫೆ.15 ರಿಂದ ರೈಲು ಓಡಿಸಲು ಕ್ರಮ ಕೈಗೊಳ್ಳಲಾಗಿದೆ. ಇದರಿಂದ ಈ ಭಾಗದ ಜನರಿಗೆ ಸಾಕಷ್ಟು ಅನುಕೂಲವಾಗಲಿದೆ ಎಂದರು.

ಬೆಂಗಳೂರು- ಹುಬ್ಬಳ್ಳಿ ನಡುವೆ ನಾಲ್ಕೈದು ಗಂಟೆಗಳಲ್ಲಿ ಕ್ರಮಿಸುಂತಾಗಬೇಕು. ಆ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಕನಿಷ್ಠ ತಾಸಿಗೆ 150 ಕಿಲೋ ಮೀಟರ್‌ ವೇಗದಲ್ಲಿ ರೈಲು ಸಂಚರಿಸಬೇಕು. ಪುಣಾ- ಬೆಂಗಳೂರು ಡಬ್ಲಿಂಗ್‌ ಕೆಲಸ ಪ್ರಗತಿಯಲ್ಲಿ ಸಾಗಿದೆ ಎಂದು ತಿಳಿಸಿದ್ದಾರೆ. 
 

click me!