ದಸರಾ: ಕರ್ನಾಟಕದ ಈ ಮಾರ್ಗಗಳಲ್ಲಿ ಸ್ಪೆಷಲ್ ಟ್ರೈನ್‌!

By Kannadaprabha NewsFirst Published Oct 9, 2024, 12:53 PM IST
Highlights

ರೈಲು ಸಂಖ್ಯೆ 07305 ಎಸ್‌ಎಸ್‌ಎಸ್ ಹುಬ್ಬಳ್ಳಿ-ಯಶವಂತಪುರ ವಿಶೇಷ ಎಕ್ಸ್‌ಪ್ರೆಸ್ ರೈಲು ಅ. 10ರಂದು ಎಸ್‌ಎಸ್‌ಎಸ್‌ ಹುಬ್ಬಳ್ಳಿಯಿಂದ ಬೆಳಗ್ಗೆ 11.30ಕ್ಕೆ ಹೊರಟು, ಅದೇ ದಿನ ಯಶವಂತಪುರ ಸಂಜೆ 7.40ಕ್ಕೆ ತಲುಪಲಿದೆ. ಈ ರೈಲು ಹಾವೇರಿ, ರಾಣಿಬೆನ್ನೂರು, ಹರಿಹರ, ದಾವಣಗೆರೆ, ಬಿರೂರು, ಅರಸೀಕೆರೆ, ತಿಪಟೂರು ಮತ್ತು ತುಮಕೂರು ನಿಲ್ದಾಣಗಳಲ್ಲಿ ನಿಲುಗಡೆ ಇರಲಿದೆ. 
 

ಹುಬ್ಬಳ್ಳಿ(ಅ.09):  ದಸರಾ ಹಬ್ಬದ ಸಮಯದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ಸರಿದೂಗಿಸಲು ವಿಶೇಷ ರೈಲು ಓಡಿಸಲು ನೈಋತ್ಯ ರೈಲ್ವೆ ನಿರ್ಧರಿಸಿದೆ. ರೈಲು ಸಂಖ್ಯೆ 07305 ಎಸ್‌ಎಸ್‌ಎಸ್ ಹುಬ್ಬಳ್ಳಿ-ಯಶವಂತಪುರ ವಿಶೇಷ ಎಕ್ಸ್‌ಪ್ರೆಸ್ ರೈಲು ಅ. 10ರಂದು ಎಸ್‌ಎಸ್‌ಎಸ್‌ ಹುಬ್ಬಳ್ಳಿಯಿಂದ ಬೆಳಗ್ಗೆ 11.30ಕ್ಕೆ ಹೊರಟು, ಅದೇ ದಿನ ಯಶವಂತಪುರ ಸಂಜೆ 7.40ಕ್ಕೆ ತಲುಪಲಿದೆ. ಈ ರೈಲು ಹಾವೇರಿ, ರಾಣಿಬೆನ್ನೂರು, ಹರಿಹರ, ದಾವಣಗೆರೆ, ಬಿರೂರು, ಅರಸೀಕೆರೆ, ತಿಪಟೂರು ಮತ್ತು ತುಮಕೂರು ನಿಲ್ದಾಣಗಳಲ್ಲಿ ನಿಲುಗಡೆ ಇರಲಿದೆ. 

ರೈಲು ಸಂಖ್ಯೆ 07306 ಯಶವಂತಪುರ-ಬೆಳಗಾವಿ ವಿಶೇಷ ಎಕ್ಸ್‌ಪ್ರೆಸ್‌ ರೈಲು ಅ.10ರಂದು ಯಶವಂತಪುರದಿಂದ ರಾತ್ರಿ 8.55ಕ್ಕೆ ಹೊರಟು, ಮರುದಿನ ಬೆಳಗಾವಿಗೆ ಬೆಳಗ್ಗೆ 8.15ಕ್ಕೆ ತಲುಪಲಿದೆ. ಈ ರೈಲು ತುಮಕೂರು, ತಿಪಟೂರು, ಅರಸೀಕೆರೆ, ಬೀರೂರು, ದಾವಣಗೆರೆ, ಹರಿಹರ, ರಾಣಿಬೆನ್ನೂರು, ಹಾವೇರಿ, ಎಸ್‌ಎಸ್‌ಎಸ್ ಹುಬ್ಬಳ್ಳಿ, ಧಾರವಾಡ, ಅಳ್ಳಾವರ, ಲೋಂಡಾ ಮತ್ತು ಖಾನಾಪುರ ನಿಲ್ದಾಣಗಳಲ್ಲಿ ನಿಲುಗಡೆ ಇರಲಿದೆ. 

Latest Videos

ಮೋದಿ ಭೇಟಿ ಮಾಡಿದ ಸಚಿವ ಸೋಮಣ್ಣ: ಕರ್ನಾಟಕದ ಸರ್ವಾಂಗೀಣ ಅಭಿವೃದ್ಧಿಯ ಬಗ್ಗೆ ಚರ್ಚೆ

ರೈಲು ಸಂಖ್ಯೆ 07307 ಬೆಳಗಾವಿ- ಮೈಸೂರು ವಿಶೇಷ ಎಕ್ಸ್‌ಪ್ರೆಸ್ ರೈಲು ಅ. 11ರಂದು ಬೆಳಗಾವಿಯಿಂದ ಸಂಜೆ 5.30ಕ್ಕೆ ಹೊರಟು, ಮರುದಿನ ಮೈಸೂರಿಗೆ ಬೆಳಗ್ಗೆ 6.25ಕ್ಕೆ ತಲುಪಲಿದೆ. ಈ ರೈಲು ಖಾನಾಪುರ, ಲೋಂಡಾ, ಅಳ್ಳಾವರ, ಧಾರವಾಡ, ಎಸ್‌ಎಸ್‌ಎಸ್ ಹುಬ್ಬಳ್ಳಿ, ಹಾವೇರಿ, ರಾಣಿಬೆನ್ನೂರು, ಹರಿಹರ, ದಾವಣಗೆರೆ, ಬೀರೂರು, ಅರಸೀಕೆರೆ, ಹಾಸನ, ಹೊಳೆ ನರಸೀಪುರ ಮತ್ತು ಕೃಷ್ಣರಾಜನಗರ ನಿಲ್ದಾಣಗಳಲ್ಲಿ ನಿಲುಗಡೆಯಾಗಲಿದೆ. ರೈಲು ಸಂಖ್ಯೆ 07308 ಮೈಸೂರು-ಎಸ್‌ಎಸ್‌ಎಸ್‌ ಹುಬ್ಬಳ್ಳಿ ವಿಶೇಷ ಎಕ್ಸ್‌ಪ್ರೆಸ್ ರೈಲು ಅ. 12ರಂದು ಮೈಸೂರಿನಿಂದ ರಾತ್ರಿ 10.30ಕ್ಕೆ ಹೊರಟು, ಮರುದಿನ ಎಸ್‌ಎಸ್‌ಎಸ್ ಹುಬ್ಬಳ್ಳಿಗೆ ಬೆಳಗ್ಗೆ 7ಕ್ಕೆ ತಲುಪಲಿದೆ.  ಈ ರೈಲು ಕೃಷ್ಣರಾಜನಗರ, ಹೊಳೆ ನರಸೀಪುರ, ಹಾಸನ, ಅರಸೀಕೆರೆ, ಬೀರೂರು, ದಾವಣಗೆರೆ, ಹರಿಹರ, ರಾಣಿಬೆನ್ನೂರು ಮತ್ತು ಹಾವೇರಿ ನಿಲ್ದಾಣಗಳಲ್ಲಿ ನಿಲುಗಡೆಯಾಗಲಿದೆ. 

ಈ ವಿಶೇಷ ರೈಲುಗಳು (07305 /06 ಮತ್ತು 07307/08) 1 ಎಸಿ 2-ಟೈಯರ್, 1 ಎಸಿ 3-ಟೈಯರ್, 10 ಸ್ಲಿಪರ್ ಕ್ಲಾಸ್, 2 ಸಾಮಾನ್ಯ ದ್ವಿತೀಯ ದರ್ಜೆ ಮತ್ತು 2 ಎಸ್ಎಲ್ ರ್ಆ/ಡಿ ಬೋಗಿಗಳು ಸೇರಿದಂತೆ 16 ಬೋಗಿಗಳನ್ನು ಒಳಗೊಂಡಿರುತ್ತವೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ, ಸಹಾಯವಾಣಿ ಸಂಖ್ಯೆ 139ಗೆ ಸಂಪರ್ಕಿಸಿ ಅಥವಾ ವೆಬ್ ಸೈಟ್ www.enquiry.indianrail.gov.in ಗೆ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಪ್ರಕಟಣೆ ತಿಳಿಸಿದೆ.

click me!