ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟಬಹುಮತ ಪಡೆಯುವ ಮೂಲಕ ಮತ್ತೊಮ್ಮೆ ಅಧಿಕಾರದ ಚುಕ್ಕಾಣಿಯನ್ನು ಹಿಡಿಯಲಿದೆ ಎಂದು ಶಾಸಕ ಮಸಾಲಾ ಜಯರಾಮ್ ವಿಶ್ವಾಸ ವ್ಯಕ್ತಪಡಿಸಿದರು.
ತುರುವೇಕೆರೆ : ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟಬಹುಮತ ಪಡೆಯುವ ಮೂಲಕ ಮತ್ತೊಮ್ಮೆ ಅಧಿಕಾರದ ಚುಕ್ಕಾಣಿಯನ್ನು ಹಿಡಿಯಲಿದೆ ಎಂದು ಶಾಸಕ ಮಸಾಲಾ ಜಯರಾಮ್ ವಿಶ್ವಾಸ ವ್ಯಕ್ತಪಡಿಸಿದರು.
ತಮ್ಮ ಗೃಹ ಕಚೇರಿಯಲ್ಲಿ ತಂಡಗ ಗ್ರಾಮ ಪಂಚಾಯ್ತಿಯ ನೂರಾರು ಯುವಕರನ್ನುಗೆ ಸೇರ್ಪಡೆ ಮಾಡಿಕೊಂಡು ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ನನಗೆ ಸಿಕ್ಕ ಒಂದೂವರೆಯಿಂದ ಎರಡು ವರ್ಷಗಳ ಅವಧಿಯಲ್ಲಿ ಸುಮಾರು ಒಂದು ಸಾವಿರ ಕೋಟಿಗೂ ಹೆಚ್ಚು ಹಣ ತಂದು ತುರುವೇಕೆರೆ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿ ಮಾಡಿದ್ದೇನೆ ಎಂದರು.
undefined
ಮುಂಬರುವ ದಿನಗಳಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಹಲವರು ರಾಜ್ಯ ಮತ್ತು ಜಿಲ್ಲಾ ಮುಖಂಡರು ತಾಲೂಕಿಗೆ ಆಗಮಿಸಲಿದ್ದಾರೆ. ಅಂದು ನೂರಾರು ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ದೊರೆಯಲಿದೆ ಎಂದು ಹೇಳಿದರು.
ತಮ್ಮ ಪಕ್ಷಕ್ಕೆ ಸೇರುತ್ತಿರುವ ಎಲ್ಲರೂ ಸಹ ಕ್ಷೇತ್ರದ ಅಭಿವೃದ್ಧಿ ಮತ್ತು ರಾಜ್ಯದ ಅಭಿವೃದ್ಧಿ ನೋಡಿ ಪಕ್ಷ ಸೇರುತ್ತಿದ್ದಾರೆ. ಹೊಸ ಹಾಗೂ ಹಳೆಯ ಕಾರ್ಯಕರ್ತರೆಲ್ಲಾ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಾಧನೆಗಳನ್ನು ಮನೆ ಮನೆಗೆ ತಿಳಿಸಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬರಲು ಶ್ರಮಿಸಬೇಕೆಂದು ಕರೆ ನೀಡಿದರು.
ಈ ಸಂಧರ್ಭದಲ್ಲಿ ತಾಲೂಕು ಬಿಜೆಪಿ ಅಧ್ಯಕ್ಷ ಕಲ್ಕೆರೆ ಮೃತ್ಯುಂಜಯ, ಮುಖಂಡರಾದ ಮಾಯಸಂದ್ರ ಬಾಬು ಜೈನ್, ಕೊಂಡಜ್ಜಿ ವಿಶ್ವನಾಥ್, ವಿ.ಟಿ.ವೆಂಕಟರಾಮಯ್ಯ, ತಾಲೂಕು ಮಹಿಳಾ ಘಟಕದ ಅಧ್ಯಕ್ಷೆ ಚೂಡಾಮಣಿ, ಬಡಗರಹಳ್ಳಿ ರಾಮೇಗೌಡ, ಡೊಂಕಿಹಳ್ಳಿ ಪ್ರಕಾಶ್, ಪಟ್ಟಣ ಪಂಚಾಯ್ತಿ ಅಧ್ಯಕ್ಷ ಟಿ.ಕೆ.ಪ್ರಭಾಕರ್, ಉಪಾಧ್ಯಕ್ಷೆ ಶೀಲಾ ಶಿವಪ್ಪನಾಯಕ, ಬಿಜೆಪಿ ಯು1/19/2023 5:32:09 Pಋ1/19/2023 5:32:09 Pಋ1/19/2023 5:32:09 Pಋ1/19/2023 5:32:10 Pಋವ ಮೋರ್ಚಾ ತಾಲೂಕು ಅಧ್ಯಕ್ಷ ಗೌರೀಶ್, ಮಾಜಿ ಅಧ್ಯಕ್ಷ ಬಸವೇಶ್ ಸೇರಿದಂತೆ ಹಲವಾರು ಮುಖಂಡರು ಉಪಸ್ಥಿತರಿದ್ದರು.
ಬಿಜೆಪಿ ಅಧಿಕಾರಕ್ಕೆ ಬರುವುದಿಲ್ಲ
ಸೊರಬ (ಜ.15): ಸಮಾಜದ ಸ್ವಾಸ್ಥ್ಯತೆಯನ್ನು ಕದಡುತ್ತಿರುವ ಬಿಜೆಪಿ ವಿರುದ್ಧ ಜನಾಂದೋಲನ ಪ್ರಾರಂಭವಾಗಿದ್ದು, ಮುಂದಿನ ದಿನಗಳಲ್ಲಿ ಅಧಿಕಾರಕ್ಕೆ ಬರುವುದಿಲ್ಲ. ಜನಸಾಮಾನ್ಯರ ಮತ್ತು ಎಲ್ಲ ಜಾತಿ- ವರ್ಗಗಳಿಗೆ ಸಮಾನ ಅವಕಾಶ ಕಲ್ಪಿಸಿರುವ ಕಾಂಗ್ರೆಸ್ ಮುಂದಿನ ವಿಧಾನಸಭಾ ಚುನಾವಣೆ ನಂತರ ಅಧಿಕಾರದ ಚುಕ್ಕಾಣಿ ಹಿಡಿಯವುದು ಖಚಿತ ಎಂದು ಕೆಪಿಸಿಸಿ ಹಿಂದುಳಿದ ವರ್ಗಗಳ ರಾಜ್ಯಾಧ್ಯಕ್ಷ ಮಧು ಬಂಗಾರಪ್ಪ ಹೇಳಿದರು. ಪಟ್ಟಣದ ಬಂಗಾರ ಧಾಮದಲ್ಲಿ ಕಾಂಗ್ರೆಸ್ ಬೂತ್‌ಮಟ್ಟದ ಅಧ್ಯಕ್ಷರು, ಪದಾಧಿಕಾರಿಗಳು ಮತ್ತು ಕಾರ್ಯಕರ್ತರ ಸಭೆ ನಡೆಸಿ ಅವರು ಮಾತನಾಡಿದರು.
ಬಿಜೆಪಿಯ ಹುಸಿ ಭರವಸೆಗಳನ್ನು ಅರಿತಿರುವ ಮತದಾರರು ಸಮಾಜದಲ್ಲಿ ಸೌಹಾರ್ದತೆಯನ್ನು ಮೂಡಿಸುವ ಮತ್ತು ಈ ಹಿಂದೆ ಉತ್ತಮ ಆಡಳಿತ ನೀಡಿದ ಕಾಂಗ್ರೆಸ್ ಕಡೆ ಜನತೆ ಒಲವು ತೋರುತ್ತಿದ್ದಾರೆ . ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಪಕ್ಷವನ್ನು ಬಲಪಡಿಸಿ, ಅಧಿಕಾರಕ್ಕೆ ತರಲು ಜೋಡೆತ್ತುಗಳಂತೆ ಶ್ರಮಿಸುತ್ತಿದ್ದಾರೆ. ಚುನಾವಣೆಯಲ್ಲಿ ಬಹುಮತಗಳಿಂದ ನನ್ನನ್ನು ಗೆಲ್ಲಿಸುವಲ್ಲಿ ಕಾರ್ಯಕರ್ತರು ಹೆಚ್ಚಿನ ರೀತಿಯಲ್ಲಿ ಶ್ರಮಿಸಬೇಕು ಎಂದು ಕರೆ ನೀಡಿದರು. ಕೆಪಿಸಿಸಿ ವಾರ್ ರೂಂ ಸದಸ್ಯ ಸುರೇಶ್ ಮಾತನಾಡಿ, ಕಾರ್ಯಕರ್ತರ ನಡುವೆ ಸಣ್ಣಪುಟ್ಟ ಗೊಂದಲ, ಮನಸ್ತಾಪಗಳಿದ್ದಲ್ಲಿ ಅವುಗಳನ್ನು ದೂರಮಾಡಿ ಪ್ರತಿ ಮನೆ ಬಾಗಿಲಿಗೆ ತೆರಳಿ ಪಕ್ಷ ಸಂಘಟಿಸಬೇಕು ಎಂದರು.
ಕಾಂಗ್ರೆಸ್‌ನಿಂದ ಶೀಘ್ರ ರಾಜ್ಯಮಟ್ಟದ ಒಬಿಸಿ ಸಮಾವೇಶ: ಮಧು ಬಂಗಾರಪ್ಪ
ಸಭೆಯಲ್ಲಿ ಸೊರಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಣ್ಣಪ್ಪ ಹಾಲಘಟ್ಟ, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಅನಿತಾಕುಮಾರಿ, ತಾಲೂಕು ಮಹಿಳಾ ಅಧ್ಯಕ್ಷೆ ಸುಜಾತ ಜೋತಾಡಿ, ಆನವಟ್ಟಿಬ್ಲಾಕ್ ಅಧ್ಯಕ್ಷೆ ವಿಶಾಲಾಕ್ಷಿ, ಜಿಪಂ ಮಾಜಿ ಸದಸ್ಯರಾದ ತಬಲಿ ಬಂಗಾರಪ್ಪ, ತಾರಾ ಶಿವಾನಂದಪ್ಪ, ರಾಜೇಶ್ವರಿ, ತಾಪಂ ಮಾಜಿ ಸದಸ್ಯರಾದ ಎಚ್.ಗಣಪತಿ, ನಾಗರಾಜ ಚಿಕ್ಕಸವಿ, ಸುನೀಲ್‌ಗೌಡ ಸೇರಿದಂತೆ ಬೂತ್ ಕಮಿಟಿ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಹಾಜರಿದ್ದರು.