ಒಂದೇ ಮಂದಿರದಲ್ಲಿ ಇಬ್ಬರು ಅಭ್ಯರ್ಥಿಗಳು ಒಟ್ಟಿಗೆ ಪ್ರಾರ್ಥನೆ ಸಲ್ಲಿಸಿರುವ ಘಟನೆ ಹುಣಸೂರು ವಿಧಾನಸಭಾ ಕ್ಷೇತ್ರದಲ್ಲಿ ನಡೆದಿದೆ. ಹುಣಸೂರು ಸಾಯಿ ಮಂದಿರದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಅಭ್ಯರ್ಥಿಗಳು ಒಟ್ಟಿಗೆ ಪ್ರಾರ್ಥನೆ ಸಲ್ಲಿಸಿದ್ದಾರೆ.
ಮೈಸೂರು(ಡಿ.05): ಒಂದೇ ಮಂದಿರದಲ್ಲಿ ಇಬ್ಬರು ಅಭ್ಯರ್ಥಿಗಳು ಒಟ್ಟಿಗೆ ಪ್ರಾರ್ಥನೆ ಸಲ್ಲಿಸಿರುವ ಘಟನೆ ಹುಣಸೂರು ವಿಧಾನಸಭಾ ಕ್ಷೇತ್ರದಲ್ಲಿ ನಡೆದಿದೆ. ಹುಣಸೂರು ಸಾಯಿ ಮಂದಿರದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಅಭ್ಯರ್ಥಿಗಳು ಒಟ್ಟಿಗೆ ಪ್ರಾರ್ಥನೆ ಸಲ್ಲಿಸಿದ್ದಾರೆ.
ವಿಶ್ವನಾಥ್ ಹಾಗೂ ಮಂಜುನಾಥ್ ರಿಂದ ಒಂದೇ ಸಮಯದಲ್ಲಿ ಪೂಜೆ ಮಾಡಿದ್ದು, ಹುಣಸೂರು ಉಪಚುನಾವಣೆ ಮತದಾನ ಹಿನ್ನೆಲೆಯಲ್ಲಿ ಕಾಂಗ್ರೆಸ್ ಬಿಜೆಪಿ ಅಭ್ಯರ್ಥಿಗಳು ಒಂದೇ ದೇವಾಲಯಕ್ಕೆ ಭೇಟಿ ಕೊಟ್ಟಿದ್ದಾರೆ.
'ಟೈಮ್ ಸೆನ್ಸ್ ಇಲ್ವಾ'..? ಚುನಾವಣಾ ಸಿಬ್ಬಂದಿಗೆ ಕ್ಲಾಸ್..!
ಹುಣಸೂರಿನಲ್ಲಿ ಬಿಜೆಪಿ, ಕಾಂಗ್ರೆಸ್ ಅಭ್ಯರ್ಥಿಯಿಂದ ಟೆಂಪಲ್ ರನ್ ನಡೆದಿದ್ದು, ಹುಣಸೂರಿನ ಸಾಯಿಬಾಬಾ ಮಂದಿರಕ್ಕೆ ಇಬ್ಬರೂ ಅಭ್ಯರ್ಥಿಗಳು ಭೇಟಿ ಕೊಟ್ಟಿದ್ದಾರೆ. ಮತದಾನಕ್ಕೂ ಮುನ್ನ ಬಿಜೆಪಿ ಕಾಂಗ್ರೆಸ್ ಅಭ್ಯರ್ಥಿಗಳು ದೇವರ ಮೊರೆ ಹೋಗಿದ್ದಾರೆ.
ದೇವರ ರೂಪದಲ್ಲಿ ಬಂದ ಬೆಂಗ್ಳೂರು ಪೊಲೀಸ್ರು: ಸಾವಿನಿಂದ ನವ ದಂಪತಿ ಪಾರು
ಹುಣಸೂರು ಕಾಂಗ್ರೆಸ್ ಅಭ್ಯರ್ಥಿ ಹೆಚ್. ಪಿ. ಮಂಜುನಾಥ್ ಸಾಯಿ ಬಾಬಾನಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಪತ್ನಿ ಹಾಗೂ ಮಗಳೊಂದಿಗೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದ್ದು, ಬಿಜೆಪಿ ಅಭ್ಯರ್ಥಿ ಅಡಗೂರು ಹೆಚ್. ವಿಶ್ವನಾಥ್ ಅವರೂ ಪೂಜೆ ಸಲ್ಲಿಸಿದ್ದಾರೆ. ಬೆಂಬಲಿಗರೊಂದಿಗೆ ಆಗಮಿಸಿದ ವಿಶ್ವನಾಥ್ ಪೂಜೆ ಸಲ್ಲಿಸಿದ್ದಾರೆ. ಇನ್ನರೂ ಅಭ್ಯರ್ಥಿಗಳು ಮುಖಾಮುಖಿ ಆದರೂ ಪರಸ್ಪರ ಮಾತನಾಡಿಲ್ಲ.
ಹುಬ್ಬಳ್ಳಿ: ಚಿಕನ್‌ಗಿಂತ ಈರುಳ್ಳಿ ಬೆಲೆಯೇ ದುಬಾರಿ!