ಹೈದರಾಬಾದ್ ಕರ್ನಾಟಕ ವಿಮೋಚನಾ ದಿನ ಬಂದ್..ಕಲ್ಯಾಣ ಕರ್ನಾಟಕವೇ ಎಲ್ಲ

By Web DeskFirst Published Sep 9, 2019, 10:00 PM IST
Highlights

ಹೈದರಾಬಾದ್ ಕರ್ನಾಟಕಕ್ಕೆ ಹೊಸ ಹೆಸರು ನಾಮಕರಣ ಮಾಡಿದ್ದ ರಾಜ್ಯ ಸರ್ಕಾರದಿಂದ ಮತ್ತೊಂದು ಆದೇಶ/  ಹೈದರಾಬಾದ್ ಕರ್ನಾಟಕ  ವಿಮೋಚನಾ ದಿನ ಇನ್ನು ಮುಂದೆ ಕಲ್ಯಾಣ ಕಲ್ಯಾಣ ಕರ್ನಾಟಕ ವಿಮೋಚನಾ ದಿನ

ಬೆಂಗಳೂರು, (ಸೆ.09):  ಹೈದರಾಬಾದ್ ಕರ್ನಾಟಕ  ವಿಮೋಚನಾ ದಿನವನ್ನು ಇನ್ನು ಮುಂದೆ ಕಲ್ಯಾಣ ಕಲ್ಯಾಣ ಕರ್ನಾಟಕ ವಿಮೋಚನಾ ದಿನವನ್ನಾಗಿ ಆಚರಿಸಬೇಕು ಎಂದು ಕರ್ನಾಟಕ ಸರ್ಕಾರ ಹೈದರಾಬಾದ್ ಕರ್ನಾಟಕ ಒಳಗೊಳ್ಳುವ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದೆ.

ಹೈದರಾಬಾದ್  ಕರ್ನಾಟಕ ಅಭಿವೃದ್ಧಿ ಮಂಡಳಿಯನ್ನು ಇನ್ನು ಮುಂದೆ ಕಲ್ಯಾಣ ಕರ್ನಾಟಕ ಎಂದು ಮರುನಾಮಕರಣ ಮಾಡಲು  ಸಚಿವ ಸಂಪುಟ ಸಭೆ  ತೀರ್ಮಾನ ತೆಗೆದುಕೊಂಡಿತ್ತು.

ಕಿತ್ತೂರು ಕರ್ನಾಟಕವಾಗುತ್ತಾ ಮುಂಬೈ ಕರ್ನಾಟಕ?

ಪ್ರತಿ ವರ್ಷ ಸೆಪ್ಟೆಂಬರ್ 17ನ್ನು ಹೈದರಾಬಾದ್ ಕರ್ನಾಟಕ ವಿಮೋಚನಾ ದಿನವನ್ನಾಗಿ ಆಚರಣೆ ಮಾಡಲಾಗುತ್ತದೆ. ಈ ಸಾರಿಯಿಂದ ಅದು ಕಲ್ಯಾಣ ಕರ್ನಾಟಕ ವಿಮೋಚನಾ ದಿನವಾಗಲಿದೆ. ಹೈದರಾಬಾದ್-ಕರ್ನಾಟಕದ ವ್ಯಾಪ್ತಿಗೆ ಬರುವ ಜಿಲ್ಲೆಗಳಿಗೆ 371ಜೆ ಅಡಿ ವಿಶೇಷ ಸ್ಥಾನಮಾನ ಸಿಗುತ್ತಿದೆ. ಬೀದರ್, ಬಳ್ಳಾರಿ, ಕಲಬುರಗಿ, ಕೊಪ್ಪಳ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳು ಹೈದರಾಬಾದ್ ಕರ್ನಾಟಕದ ವ್ಯಾಪ್ತಿಗೆ ಸೇರುತ್ತವೆ.

click me!