ಬರುವ ಅಸೆಂಬ್ಲಿ ಚುನಾವಣೆಗೆ ಸ್ಥಳೀಯ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದು, ನಾನು ಮಧುಗಿರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಪಕ್ಷದಿಂದ ಟಿಕೆಟ್ ಆಕಾಂಕ್ಷಿ ಎಂದು ನಿವೃತ್ತ ಕೆಎಎಸ್ ಅಧಿಕಾರಿ ಹಾಗೂ ಜನಮುಖಿ ಸಂಸ್ಥೆ ಅಧ್ಯಕ್ಷ ಎಲ್.ಸಿ. ನಾಗರಾಜು ತಿಳಿಸಿದರು.
ಮಧುಗಿರಿ : ಬರುವ ಅಸೆಂಬ್ಲಿ ಚುನಾವಣೆಗೆ ಸ್ಥಳೀಯ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದು, ನಾನು ಮಧುಗಿರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಪಕ್ಷದಿಂದ ಟಿಕೆಟ್ ಆಕಾಂಕ್ಷಿ ಎಂದು ನಿವೃತ್ತ ಕೆಎಎಸ್ ಅಧಿಕಾರಿ ಹಾಗೂ ಜನಮುಖಿ ಸಂಸ್ಥೆ ಅಧ್ಯಕ್ಷ ಎಲ್.ಸಿ. ನಾಗರಾಜು ತಿಳಿಸಿದರು.
ಭಾನುವಾರ ಇಲ್ಲಿನ ನಿರೀಕ್ಷಣಾ ಮಂದಿರದಲ್ಲಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಈ ವಿಷಯ ತಿಳಿಸಿದರು.
undefined
ನಾನು ತಾಲೂಕಿನ ಚಿಕ್ಕ ಮಾಲೂರು ಗ್ರಾಮಕ್ಕೆ ಸೇರಿದ್ದು ಸ್ಥಳೀಯ ಶಾಲೆಗಳಲ್ಲಿ ಓದಿ ಕೆಎಎಸ್ ಅಧಿಕಾರಿಯಾಗಿ ಪ್ರಾಮಾಣಿಕವಾಗಿ ಜನಮುಖಿಯಾಗಿ ಕೆಲಸ ಮಾಡಿದ್ದೇನೆ. ಆದಕಾರಣ ತಾಲೂಕಿನ ಎಲ್ಲ ವರ್ಗದ ಜನರ ಸಲಹೆ, ಸಹಕಾರ ನನಗೆ ಬೇಕು. ಈ ಸಲ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿಪಕ್ಷದಿಂದ ಟಿಕೆಟ್ ಬಯಸಿದ್ದು, ಬಿಜೆಪಿ ಟಿಕೆಟ್ ನೀಡಿದರೆ ನಮ್ಮ ಮಧುಗಿರಿ ಕ್ಷೇತ್ರದಿಂದ ಕಣಕ್ಕಿಳಿಯಲು ಬಯಸಿದ್ದೇನೆ. ಈಗಾಗಲೇ ಕಾಂಗ್ರೆಸ್ ಮತ್ತು ಜೆಡಿಎಸ್‌ನಿಂದ ಸ್ಪರ್ಧಿಸುತ್ತಿರುವವರು ಹೊರಗಿನವರು. ಆದರೆ ನಾನು ಸ್ಥಳೀಯನಾಗಿದ್ದು, ಮತದಾರರ ಸಹಕಾರ, ಬೆಂಬಲ ನನಗೆ ಬೇಕಿದೆ ಎಂದರು.
ಮಾ.19ರಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ. ಈ ಮೇಳದಲ್ಲಿ ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ,ಡಿಪ್ಲೋಮ, ಬಿಎಸ್‌ಸಿ, ಬಿಬಿಎಂ ಸೇರಿದಂತೆ ವಿದ್ಯಾರ್ಹತೆಗೆ ಅನುಗುಣವಾಗಿ ವಿವಿಧ ಕಂಪನಿಗಳು ನೇರ ಸಂದರ್ಶನ ಮಾಡಿ ಆಯ್ಕೆ ಮಾಡಲಿದ್ದಾರೆ. ಇದರ ಪ್ರಯೋಜನವನ್ನು ನಿರುದ್ಯೋಗಿ ಯುವ ಜನತೆ ಪಡೆದುಕೊಳ್ಳುವಂತೆ ನಾಗರಾಜು ತಿಳಿಸಿದರು.
ಗೋಷ್ಠಿಯಲ್ಲಿ ಮುಖಂಡರಾದ ಟಿ.ಗೋವಿಂದರಾಜು, ಉಪ್ಪರಾಹಳ್ಳಿ ಶಿವಕುಮಾರ್, ರಾಮಣ್ಣ, ಅಭಿಮಾನಿಗಳು, ಬೆಂಬಲಿಗರು ಇದ್ದರು.
ರಾಮಚಂದ್ರೇಗೌಡ ಬಿಜೆಪಿಗೆ
ಶಿಡ್ಲಘಟ್ಟ(ಮಾ.10): ಬೆಂಗಳೂರು ನಗರದ ಬಿಜೆಪಿ ಪಕ್ಷದ ಕೇಂದ್ರ ಕಚೇರಿಯಲ್ಲಿ ಸೀಕಲ್ ರಾಮಚಂದ್ರೇ ಗೌಡ ಮತ್ತು ಜೆಟಿ ದೇವೇಗೌಡ ರವರ ಅಳಿಯ ಆನಂದ್ ಗೌಡ ರವರು ಬಿಜೆಪಿಗೆ ಸೇರ್ಪಡೆಯಾದರು.
ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮಾತನಾಡಿ, ಪಕ್ಷದ ಬಗ್ಗೆ ನಿಷ್ಠೆ ಮತ್ತು ಯಾವುದೇ ಷರತ್ತುಗಳಿಲ್ಲದೆ ಯಾರೇ ಪಕ್ಷಕ್ಕೆ ಬಂದರೂ ಸ್ವಾಗತಿಸುವುದಾಗಿ ತಿಳಿಸಿದರು. ಉತ್ತರದ ಮೂರು ರಾಜ್ಯಗಳ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿದ್ದು ನಮ್ಮ ರಾಜ್ಯದಲ್ಲೂ 150 ಸ್ಥಾನಗಳನ್ನು ಪಡೆದು ಮತ್ತೆ ಅಧಿಕಾರವನ್ನು ಪಡೆಯುವುದು ಖಚಿತವೆಂದರು.
CHIKKABALLAURA : ಜೆಡಿಎಸ್ ಅಧಿಕಾರಕ್ಕೆ ಬಂದರೆ ಜಿಲ್ಲೆಗೆ ಶಾಶ್ವತ ನೀರು
ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ಸೀಕಲ್ ರಾಮಚಂದ್ದೇ ಗೌಡ ತಮ್ಮ ನೂರಾರು ಬೆಂಬಲಿಗರೊಂದಿಗೆ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾದರು. ತಾಲ್ಲೂಕು ಬಿಜೆಪಿ ಅಧ್ಯಕ್ಷ ಕಂಬದ ಹಳ್ಳಿ ಸುರೇಂದ್ರ ಗೌಡ ಹಾಗೂ ಮಾಜಿ ಶಾಸಕ ಎಂ. ರಾಜಣ್ಣ ಸೇರಿದಂತೆ ಹಲವಾರು ಉಪಸ್ಥಿತರಿದ್ದರು.
ಸೇರ್ಪಡೆಯ ನಂತರ ಮಾತನಾಡಿದ ರಾಮಚಂದ್ರ ಗೈಡ, ಕಾಂಗ್ರೆಸ್ ಮತ್ತು ಜೆಡಿಎಸ್ ಸರ್ಕಾರಗಳ ಅವಧಿಯಲ್ಲಿ ಶಿಡ್ಲಘಟ್ಟ ತಾಲೂಕು ಯಾವುದೇ ಅಭಿವೃದ್ಧಿಯನ್ನು ಕಂಡಿಲ್ಲ ತಾಲೂಕಿನ ಯಾವುದೇ ಸಮಸ್ಯೆಗಳ ಬಗ್ಗೆ ಕಿಂಚಿತ್ತೂ ಸ್ಪಂದಿಸಿಲ್ಲ. ಆದರೆ ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರ ಜನರ ಮೂಲಭೂತ ಸೌಕರ್ಯಗಳ ಬಗ್ಗೆ ಹೆಚ್ಚಿನ ಗಮನ ಹರಿಸಿದ್ದು ರೈತರ ಮತ್ತು ನಿರುದ್ಯೋಗ ಸಮಸ್ಯೆಗಳ ನಿವಾರಣೆಗೆ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಜನರು ಮತ್ತೆ ಬಿಜೆಪಿಯನ್ನು ಅಧಿಕಾರಕ್ಕೆ ತರಲು ಬಯಸುತ್ತಿದ್ದಾರೆ ಎಂದರು.
5
5
00:03/02:00