'ನಾನು ಕ್ಷೇತ್ರದ ಅಭಿವೃದ್ಧಿಗೆ ದುಡಿವ ಎತ್ತು': ಶಾಸಕ ತಮ್ಮಣ್ಣ

Published : Aug 30, 2019, 09:55 AM ISTUpdated : Aug 30, 2019, 10:00 AM IST
'ನಾನು ಕ್ಷೇತ್ರದ ಅಭಿವೃದ್ಧಿಗೆ ದುಡಿವ ಎತ್ತು': ಶಾಸಕ ತಮ್ಮಣ್ಣ

ಸಾರಾಂಶ

ನಾನು ಕ್ಷೇತ್ರದ ಅಭಿವೃದ್ಧಿಗೆ ದುಡಿವ ಎತ್ತು. ಸೋಮಾರಿತನವನ್ನು ಮೈಗೂಡಿಸಿಕೊಂಡಿಲ್ಲ ಎಂದು ಶಾಸಕ ಡಿ.ಸಿ.ತಮ್ಮಣ್ಣ ಹೇಳಿದರು. ಮಂಡ್ಯದಲ್ಲಿ ಮಾತನಾಡಿದ ಅವರು, ಮತದಾರರ ಋುಣವನ್ನು ತೀರಿಸಲು ಪ್ರತಿಯೊಂದು ಗ್ರಾಮೀಣ ಪ್ರದೇಶಗಳಿಗೆ ತೆರಳಿ ಸಮಸ್ಯೆಗಳಿಗೆ ಸ್ಪಂದಿಸುತ್ತಿದ್ದೇನೆ ಎಂದರು.

ಮಂಡ್ಯ(ಆ.30): ನಾನು ಕ್ಷೇತ್ರದ ಅಭಿವೃದ್ಧಿಗೆ ದುಡಿವ ಎತ್ತು. ಸೋಮಾರಿತನವನ್ನು ಮೈಗೂಡಿಸಿಕೊಂಡಿಲ್ಲ ಎಂದು ಶಾಸಕ ಡಿ.ಸಿ.ತಮ್ಮಣ್ಣ ತಿಳಿಸಿದರು.

ಭಾರತೀನಗರದ ಎಸ್‌.ಐ.ಹೊನ್ನಲಗೆರೆ ಗ್ರಾಮದಲ್ಲಿ 2 ಕೋಟಿ ರು. ವೆಚ್ಚದಲ್ಲಿ ರಸ್ತೆ ಅಭಿವೃದ್ದಿ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿ, ಮತದಾರರ ಋುಣವನ್ನು ತೀರಿಸಲು ಪ್ರತಿಯೊಂದು ಗ್ರಾಮೀಣ ಪ್ರದೇಶಗಳಿಗೆ ತೆರಳಿ ಸಮಸ್ಯೆಗಳಿಗೆ ಸ್ಪಂದಿಸುತ್ತಿದ್ದೇನೆ. ಜೊತೆಗೆ ಆಯಾಯ ಗ್ರಾಮದಲ್ಲಿ ಆಗಬೇಕಾಗಿರುವ ಕೆಲಸ ಕಾಮಗಾರಿಗಳಿಗೆ ಸರ್ಕಾರದಿಂದ ಹಣ ಬಿಡುಗಡೆಗೊಳಿಸಿ ಚಾಲನೆ ನೀಡುತ್ತಿದ್ದೇನೆ ಎಂದರು.

ರೈತರ ಮತ್ತು ಸಾರ್ವಜನಿಕರ ಸಂಚಾರಕ್ಕೆ ಅನುಕೂಲವಾಗಲೆಂದು ರಸ್ತೆ ಅಭಿವೃದ್ಧಿಗೆ ಹೆಚ್ಚು ಮಹತ್ವ ನೀಡುತ್ತಿದೆ. ಹಾಗಾಗಿ ರಸ್ತೆಗಳು ಆಳಾಗದಂತೆ ನೋಡಿಕೊಳ್ಳಬೇಕು. ನನ್ನ ಅಧಿಕಾರ ಅವಧಿಯಲ್ಲಿ ದ್ವೇಷ ಅಸೂಯೆ ಇಲ್ಲದೆ ಕ್ಷೇತ್ರದ ಪ್ರತಿಯೊಂದು ಗ್ರಾಮಗಳಿಗೂ ತೆರಳಿ ಕಷ್ಟ-ಸುಖಗಳಿಗೆ ಭಾಗಿಯಾಗಿದ್ದೇನೆ. ಅದರೂ ಸಹ ನನ್ನನ್ನು ಟೀಕೆಯನ್ನು ಮಾಡುತ್ತಲೇ ಬರುತ್ತಿದ್ದಾರೆ. ಎಂದರು.

ಮಂಡ್ಯ: ಮಾಜಿ ಸಿಎಂ ಕುಮಾರಸ್ವಾಮಿಗೆ ಬಿಎಸ್‌ವೈ ಟಾಂಗ್‌

ಇದೇ ವೇಳೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳಾದ ಎಇಇ ರಮೇಶ್‌, ಹನುಮಂತು, ತಾ.ಪಂ ಮಾಜಿ ಸದಸ್ಯ ಎನ್‌.ಸಿ.ಪುಟ್ಟಸ್ವಾಮಿಗೌಡ, ಮಧು, ಸುಬ್ಬಣ್ಣ, ಪ್ರಕಾಶ್‌ ನಾಗರಾಜಪ್ಪ, ಮಾದೇಗೌಡ, ರವಿ, ಗ್ರಾ.ಪಂ ಸದಸ್ಯ ಗುರುಸ್ವಾಮಿ, ಬೋರಯ್ಯ, ಗುತ್ತಿಗೆದಾರರಾದ ತಿಪ್ಪೀರೇಗೌಡ, ರವಿರಾಜು ಇದ್ದರು.

ಹೆಚ್ಚಿನ ಜಿಲ್ಲಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ

PREV
click me!

Recommended Stories

Bigg boss 12 winner ‘ಗಿಲ್ಲಿ’ ನಟನಿಗೆ ಹೆಚ್‌ಡಿ ಕುಮಾರಸ್ವಾಮಿ ಅಭಿನಂದನೆ; ಮಂಡ್ಯದ ಮಣ್ಣಿನ ಮಗನ ಸಾಧನೆಗೆ ಮೆಚ್ಚುಗೆ!
ಅಪಘಾತಕ್ಕೀಡಾಗಿ ರಸ್ತೆಯಲ್ಲಿ ಬಿದ್ದಿದ್ದ ಗಾಯಾಳು; ಕಾರು ನಿಲ್ಲಿಸಿ ಆಸ್ಪತ್ರೆಗೆ ಸೇರಿಸಿದ ಸಚಿವ ಪ್ರಿಯಾಂಕ್ ಖರ್ಗೆ!