5 ವರ್ಷದಿಂದ ಕ್ಷೇತ್ರದ ಜನರ ಜೊತೆಯಲ್ಲಿದ್ದೇನೆ: ಪರಂ

By Kannadaprabha NewsFirst Published Feb 9, 2023, 5:43 AM IST
Highlights

ಕೊರಟಗೆರೆ ಕ್ಷೇತ್ರದಿಂದ ನನ್ನನ್ನು ಆರಿಸಿ ಕಳುಹಿಸಿದ ಜನರಿಗೆ ಕಳೆದ 5 ವರ್ಷಗಳಲ್ಲಿ ನನ್ನ ಅಭಿವೃದ್ಧಿ ಕೆಲಸಗಳ ಜನಪರ ಸಾಧನೆಯ ಕೈಪಿಡಿ ಹೆಜ್ಜೆಗುರುತು ಪುಸ್ತಕವನ್ನು ಮನೆಮನೆಗೂ ತಲುಪಿಸುವ ಕೆಲಸ ಮಾಡುತ್ತೇನೆ ಎಂದು ಶಾಸಕ ಡಾ.ಜಿ.ಪರಮೇಶ್ವರ ತಿಳಿಸಿದರು.

  ಕೊರಟಗೆರೆ : ಕೊರಟಗೆರೆ ಕ್ಷೇತ್ರದಿಂದ ನನ್ನನ್ನು ಆರಿಸಿ ಕಳುಹಿಸಿದ ಜನರಿಗೆ ಕಳೆದ 5 ವರ್ಷಗಳಲ್ಲಿ ನನ್ನ ಅಭಿವೃದ್ಧಿ ಕೆಲಸಗಳ ಜನಪರ ಸಾಧನೆಯ ಕೈಪಿಡಿ ಹೆಜ್ಜೆಗುರುತು ಪುಸ್ತಕವನ್ನು ಮನೆಮನೆಗೂ ತಲುಪಿಸುವ ಕೆಲಸ ಮಾಡುತ್ತೇನೆ ಎಂದು ಶಾಸಕ ಡಾ.ಜಿ.ಪರಮೇಶ್ವರ ತಿಳಿಸಿದರು.

ಪಟ್ಟಣದ ಲಕ್ಷ್ಮೀನರಸಿಂಹಸ್ವಾಮಿ ಸಮುದಾಯ ಭವನದಲ್ಲಿ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಕೊರಟಗೆರೆ ವಿಧಾನಸಭಾ ಕ್ಷೇತ್ರದಲ್ಲಿ 5 ವರ್ಷಗಳಲ್ಲಿ ಮಾಡಿರುವ 2573.68 ಕೋಟಿ ರು.ಗಳ ಅಭಿವೃದ್ಧಿ ಕಾಮಗಾರಿಗಳ ಮಾಹಿತಿ ಹೆಜ್ಜೆಗುರುತು ಪುಸ್ತಕ ಬಿಡುಗಡೆ ಮಾಡಿ ಮಾಹಿತಿ ನೀಡಿ ಮಾತನಾಡಿದರು.

ಕ್ಷೇತ್ರದ ಜನರ ನಿರೀಕ್ಷೆಗಳಿಗೆ ತಕ್ಕಂತೆ ಕೆಲಸ ಮಾಡಿದ್ದೇನೆ. ಪ್ರತಿ ಗ್ರಾಮ ಪಂಚಾಯಿತಿಗಳಲ್ಲೂ ಗ್ರಾಮಗಳ ಅಗತ್ಯಕ್ಕೆ ತಕ್ಕಂತೆ ಆದ್ಯತೆ ಮೇರೆಗೆ ಕೆಲಸ ಮಾಡಿದ್ದೇನೆ, ಕ್ಷೇತ್ರದ ಅಭಿವೃದ್ಧಿಗೆ ನನ್ನದೇ ಕಲ್ಪನೆ ರೀತಿಯಲ್ಲಿ ಸೇವೆ ಸಲ್ಲಿಸಿದ್ದೇನೆ. ಆದರೂ ಕೆಲ ವಿರೋಧ ಪಕ್ಷದವರು, ನನ್ನನ್ನು ದ್ವೇಷಿಸುವರು ಈಗಲೂ ಹೈಫೈ ರಾಜಕಾರಣಿ ಎಂದು ಅಪಪ್ರಚಾರ ಮಾಡುತ್ತಾರೆ. ಆದರೆ ರಾಜ್ಯದಲ್ಲಿಯೇ ಸಾಮಾನ್ಯ ವ್ಯಕ್ತಿ ಹಾಗೂ ಜನ ಪ್ರತಿನಿಧಿಯಾಗಿ ನನ್ನ ಕ್ಷೇತ್ರದ ಜನತೆಯ ಜೊತೆಗಿದ್ದೇನೆ. ಜನರಿಗೆ ನನ್ನ ವ್ಯಕ್ತಿತ್ವದ ಸಂಪೂರ್ಣ ಅರಿವಿದೆ. ಕೊರಟಗೆರೆ ವಿಧಾನಸಭಾ ಕ್ಷೇತ್ರಕ್ಕೆ ಹೆಚ್ಚಿನ ಪ್ರಾತಿನಿಧ್ಯವಾಗಿ ಶೈಕ್ಷಣಿಕ, ಆರೋಗ್ಯ ಕೇಂದ್ರಗಳು, ನೀರಾವರಿ ಯೋಜನೆಗಳಿಗೆ ಸೇರಿದಂತೆ ಬಹುತೇಕ ಕೆಲಸಗಳು ಜನರ ಮೂಲಭೂತ ಸೌಕರ್ಯಗಳಿಗೆ ಆದ್ಯತೆ ನೀಡಿ ಅಭಿವೃದ್ಧಿ ಕಾಮಗಾರಿಗಳನ್ನು ಮಾಡಲಾಗುತ್ತಿದೆ. ಇದನ್ನು ಜನರಿಗೆ ತಲುಪಿಸಿ ವಿರೋಧಿಗಳ ಬಾಯಿ ಮುಚ್ಚಿಸಿ ಮುಂಬರುವ ಚುನಾವಣೆಯಲ್ಲಿ ಸಾಧನೆಗೆ ಮತ ನೀಡಿ ಸಾಧಿಸೋಣ. ಜೊತೆಗೂಡಿ ಎಂಬ ಧ್ಯೇಯವಾಕ್ಯದೊಂದಿಗೆ ಮುಂದಿನ ಚುನಾವಣೆಯನ್ನು ಎದುರಿಸುತ್ತೇನೆ ಎಂದರು..

ಡಾ.ಜಿ.ಪರಮೇಶ್ವರ್‌ ಅವರು ಭಾನುವಾರ ತಡರಾತ್ರಿ ದೆಹಲಿಗೆ

ಬೆಂಗಳೂರು (ಫೆ.05): ಚುನಾವಣಾ ಘೋಷಣೆ ಪ್ರಕಟಿಸುವ ವಿಚಾರದಲ್ಲಿ ತಮ್ಮನ್ನು ನಿರ್ಲಕ್ಷ್ಯ ಮಾಡಿದ್ದಾರೆ ಎಂಬ ಕಾರಣಕ್ಕೆ ಬೇಸರಗೊಂಡಿರುವ ಕೆಪಿಸಿಸಿ ಚುನಾವಣಾ ಪ್ರಣಾಳಿಕೆ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಡಾ.ಜಿ.ಪರಮೇಶ್ವರ್‌ ಅವರು ಭಾನುವಾರ ತಡರಾತ್ರಿ ದೆಹಲಿಗೆ ತೆರಳಲಿದ್ದಾರೆ. ಮೂಲಗಳ ಪ್ರಕಾರ ಸೋಮವಾರ ಎಐಸಿಸಿ ವರಿಷ್ಠೆ ಸೋನಿಯಾ ಗಾಂಧಿ ಅವರ ಭೇಟಿಗೆ ಕಾಲಾವಕಾಶವನ್ನು ಪರಮೇಶ್ವರ್‌ ಕೋರಿದ್ದು, ಈ ಹಿನ್ನೆಲೆಯಲ್ಲಿ ಅವರು ದೆಹಲಿಗೆ ತೆರಳಲಿದ್ದಾರೆ.

ತಮ್ಮ ದೆಹಲಿ ಭೇಟಿಗೆ ತುಮಕೂರಿನಲ್ಲಿ ಹೊಸದಾಗಿ ನಿರ್ಮಿಸಿರುವ ಕಾಂಗ್ರೆಸ್‌ ಭವನ ಉದ್ಘಾಟನೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಆಹ್ವಾನಿಸಲು ತೆರಳುತ್ತಿರುವುದಾಗಿ ಪರಮೇಶ್ವರ್‌ ಆಪ್ತರು ಹೇಳುತ್ತಾರೆ. ಇದೇ ವೇಳೆ ಸೋನಿಯಾಗಾಂಧಿ ಭೇಟಿಗೂ ಕಾಲಾವಕಾಶ ಕೋರಿರುವುದು ಮೂಲಗಳಿಂದ ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಪರಮೇಶ್ವರ್‌ ಅವರ ದೆಹಲಿ ಭೇಟಿ ಕುತೂಹಲ ಕೆರಳಿಸಿದೆ.

ಭಿನ್ನಾಭಿಪ್ರಾಯ ಇದೆ, ಅಸಮಾಧಾನ ಅಲ್ಲ: ಪರಮೇಶ್ವರ್‌ ಮೊದಲ ಬಹಿರಂಗ ಹೇಳಿಕೆ

ಪ್ರಣಾಳಿಕೆ ಸಮಿತಿ ಅಧ್ಯಕ್ಷರಾದ ತಮ್ಮನ್ನು ನಿರ್ಲಕ್ಷಿಸಿ ಚುನಾವಣಾ ಘೋಷಣೆಗಳನ್ನು ಮಾಡಲಾಗುತ್ತಿದೆ ಎಂದು ಪರಮೇಶ್ವರ್‌ ಬೇಸರಗೊಂಡಿದ್ದರು. ರಾಜೀನಾಮೆ ಸಹ ನೀಡಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ಅವರು ಇತ್ತೀಚೆಗೆ ಪರಮೇಶ್ವರ್‌ ಅವರನ್ನು ಭೇಟಿ ಮಾಡಿ ಮನವೊಲಿಕೆ ಯತ್ನ ಮಾಡಿದ್ದನ್ನು ಇಲ್ಲಿ ಸ್ಮರಿಸಬಹುದು.

ಪ್ರಣಾಳಿಕೆ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿಲ್ಲ: ಕಾಂಗ್ರೆಸ್‌ನ ಪ್ರಣಾಳಿಕೆ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ನೀಡಿದ್ದಾಗಿ ಸುದ್ದಿ ಹರಿದಾಡಿತ್ತು. ಆದರೆ ಅದೆಲ್ಲ ಸುಳ್ಳು. ಕೆಲವರು ನಮ್ಮಲ್ಲಿ ಅಸಮಾಧಾನ ಮೂಡಿಸಲು ಈ ರೀತಿ ಸುದ್ದಿ ಹಬ್ಬಿಸುತ್ತಿದ್ದಾರೆಂದು. ಕಾಂಗ್ರೆಸ್‌ನಲ್ಲಿ ಯಾರೂ ನನ್ನನ್ನು ಸೈಡ್‌ಲೈನ್‌ ಮಾಡಿಲ್ಲ. ಹಾಗೆ ಮಾಡಿದ್ದರೆ ಪ್ರಣಾಳಿಕೆ ಸಮಿತಿ ಅಧ್ಯಕ್ಷರನ್ನಾಗಿ ಮಾಡುತ್ತಿದ್ದರಾ ಎಂದು ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ಸ್ಪಷ್ಟಪಡಿಸಿದ್ದಾರೆ.

click me!