
ಕೊರಟಗೆರೆ(ಫೆ.06): ಸಿಎಂ ಸಿದ್ದರಾಮಯ್ಯ ಕರ್ನಾಟಕ ಸರ್ಕಾರದ 17ನೇ ಬಜೆಟ್ ಮಂಡನೆ ಮಾಡುತ್ತಾರೆ. ಬಜೆಟ್‌ನಲ್ಲಿ ಗ್ರಾಮೀಣ ಭಾಗದ ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡುವಂತೆ ಸಿಎಂಗೆ ನಾನು ಮನವಿ ಮಾಡಿದ್ದೇನೆ. ಗ್ಯಾರಂಟಿ ಯೋಜನೆಯ ಜೊತೆ ಗ್ರಾಮೀಣ ಭಾಗದ ಅಭಿವೃದ್ಧಿ ಆಗಲಿದೆ. ಟೀಕೆ ಮಾಡೋರಿಗೆ ನಾನು ಅಭಿವೃದ್ಧಿ ಮಾಡಿ ಉತ್ತರ ನೀಡುತ್ತೇನೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ತಿಳಿಸಿದರು.
ತಾಲೂಕಿನ ಚನ್ನರಾಯನದುರ್ಗ ಹೋಬಳಿ ಜೆಟ್ಟಿ ಅಗ್ರಹಾರ ಗ್ರಾಪಂ ವ್ಯಾಪ್ತಿಯ ಜಂಪೇನಹಳ್ಳಿ ಕ್ರಾಸಿನ ಬಳಿ ಲೋಕೋಪಯೋಗಿ ಇಲಾಖೆಯಿಂದ ಬುಧವಾರ 26ಕೋಟಿ ವೆಚ್ಚದ ವಿವಿಧ ರಸ್ತೆ ಕಾಮಗಾರಿಗಳಿಗೆ ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದರು. ಬಜೆಟ್‌ನಲ್ಲಿ ತುಮಕೂರು ಜಿಲ್ಲೆ ಮತ್ತು ಕೊರಟಗೆರೆ ಕ್ಷೇತ್ರದ ನೀರಾವರಿ ಯೋಜನೆಗೆ ಹೆಚ್ಚಿನ ಅನುದಾನ ಸಿಗಲಿದೆ. ಕೊರಟಗೆರೆ ಪಪಂಯನ್ನು ಪುರಸಭೆಯನ್ನಾಗಿ ಮಾಡಲು ಈಗಾಗಲೇ ಸರ್ಕಾರ ಚಿಂತನೆ ನಡೆಸುತ್ತಿದೆ. ಜಂಪೇನಹಳ್ಳಿ ಕ್ರಾಸ್‌ನಲ್ಲಿ ಕುಡಿಯುವ ನೀರು, ಹೈಮಾಸ್ಟ್ ಲೈಟ್ ವ್ಯವಸ್ಥೆ ಮಾಡಿಸುತ್ತೇನೆ. ಸರ್ಕಾರದಲ್ಲಿ ದುಡ್ಡಿಲ್ಲ. ಅಭಿವೃದ್ಧಿ ಕೆಲಸಗಳು ಆಗ್ತಿಲ್ಲ ಎಂಬತಪ್ಪು ಸಂದೇಶ ನೀಡುತ್ತಿದ್ದಾರೆ. 5 ಗ್ಯಾರಂಟಿಯ ಬಗ್ಗೆ ಟೀಕೆ ಮಾಡಿದೋರು ಈಗ ಅದರ ಲಾಭ ಪಡೆಯುತ್ತಿಲ್ಲವೇ ಎಂದು ಕಿಚಾಯಿಸಿದರು.
ಬಡವರನ್ನು ಶೋಷಣೆ ಮಾಡಿದ್ರೇ ಸುಮ್ಮನಿರಲ್ಲ: ಗೃಹ ಸಚಿವ ಪರಮೇಶ್ವರ್ ಎಚ್ಚರಿಕೆ
ಈ ವೇಳೆ ತುಮಕೂರು ಜಿಲ್ಲಾಧಿಕಾರಿ ಶುಭಕಲ್ಯಾಣ್, ಎಸ್ಪಿ ಅಶೋಕ್, ಕೊರಟಗೆರೆ ತಹಸೀಲ್ದಾರ್‌ಮಂಜುನಾಥ. ಪಿಡ್‌ಲ್ಯೂಡಿ ಎಇಇ ಸ್ವಾಮಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅರಕೆರೆ ಶಂಕರ್. ಗ್ರಾಪಂ ಅಧ್ಯಕ್ಷ ಪುಷ್ಪರವಿಕುಮಾರ್, ಮಾಜಿ ಗ್ರಾಪಂ ಅಧ್ಯಕ್ಷೆ ಲಕ್ಷ್ಮಿ, ಮುಖಂಡರಾದ ಮಹಾಲಿಂಗಪ್ಪ, ಟೈಗರ್‌ನಾಗ್, ಪ್ರಸನ್ನಕುಮಾರ್, ಮಂಜುನಾಥ, ಕಿರಣ್, ರಂಗರಾಜು ಇತರರು ಇದ್ದರು.