ಆಡಳಿತದಲ್ಲಿ ಮೂಗು ತೂರಿಸುವ ಕೆಲಸ ಮಾಡಲ್ಲ : ವಿಜಯೇಂದ್ರ

Kannadaprabha News   | Asianet News
Published : Mar 02, 2020, 10:43 AM ISTUpdated : Mar 02, 2020, 12:36 PM IST
ಆಡಳಿತದಲ್ಲಿ ಮೂಗು ತೂರಿಸುವ ಕೆಲಸ ಮಾಡಲ್ಲ : ವಿಜಯೇಂದ್ರ

ಸಾರಾಂಶ

ರಾಜ್ಯ ಸರ್ಕಾರ ಆಡಳಿತ ಎಲ್ಲವೂ ಸುಸೂತ್ರವಾಗಿ ನಡೆಯುತ್ತಿದೆ. ನಾನು ಇದರಲ್ಲಿ ಮೂಗು ತೂರಿಸಲು ಹೋಗುವುದಿಲ್ಲ ಎಂದು ಬಿಜೆಪಿ ಮುಖಂಡ ವಿಜಯೇಂದ್ರ ಹೇಳಿದರು. 

ಧಾರವಾಡ [ಮಾ.02]:  ಸರ್ಕಾರದಲ್ಲಿ ಎಲ್ಲವೂ ಸುಸೂತ್ರವಾಗಿ ನಡೆಯುತ್ತಿದೆ. ನಾನು ಪಕ್ಷದ ಪ್ರಧಾನ ಕಾರ್ಯದರ್ಶಿ ಆಗಿ ಕೆಲಸ ಮಾಡುತ್ತಿದ್ದೇನೆ. ಆಡಳಿತದಲ್ಲಿ ಮೂಗು ತೂರಿಸುವ ಕೆಲಸ ಮಾಡುವುದಿಲ್ಲ. ಪಕ್ಷದ ಕಾರ್ಯಕರ್ತನಾಗಿ ಕೆಲಸ ಮಾಡುತ್ತಿದ್ದೇನೆ ಎಂದು ಬಿಜೆಪಿ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಬಿ.ವೈ. ವಿಜಯೇಂದ್ರ ಸ್ಪಷ್ಟಪಡಿಸಿದರು.

ಭಾನುವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪನವರಿಗೂ ವಯಸ್ಸಿಗೂ ಸಂಬಂಧವೇ ಇಲ್ಲ. ಅವರು ಯುವಕರಂತೆಯೇ ಕೆಲಸ ಮಾಡುತ್ತಿದ್ದಾರೆ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯೆ ನೀಡಿದರು. ಸರ್ಕಾರದ ಬಗ್ಗೆ ಸಿದ್ದರಾಮಯ್ಯ ಮೃದುಧೋರಣೆ ಕುರಿತು ಪ್ರತಿಕ್ರಿಯಿಸಿದ ಅವರು, ಬರುವ ಅಧಿವೇಶನದಲ್ಲಿ ಸಿದ್ದರಾಮಯ್ಯ ಅವರ ಧೋರಣೆ ಏನು ಎಂಬುದು ತಮಗೆ ತಿಳಿಯಲಿದೆ ಎಂದರು.

ದೊಡ್ಡ ಗೌಡರಿಗೆ ರವಿ ಗುದ್ದು, ರಾಜಕಾರಣದ ದಿಕ್ಕು ಬದಲಾಯಿಸುವ ಮದ್ದು!...

ಯಾರಿಗೂ ನೋವಾಗಬಾರ್ದು:  ಸಾವರ್ಕರ್‌ ಬಗ್ಗೆ ಒಬ್ಬರು ಮಾತನಾಡುವುದು, ದೊರೆಸ್ವಾಮಿ ಬಗ್ಗೆ ಇನ್ನೊಬ್ಬರು ಮಾತನಾಡುವುದೂ ಎರಡೂ ಸರಿಯಲ್ಲ. ದೊರೆಸ್ವಾಮಿ ಹಿರಿಯ ಸ್ವಾತಂತ್ರ್ಯ ಹೋರಾಟಗಾರರು. ಬೇರೆಯವರ ಮನಸ್ಸಿಗೆ ನೋವಾಗುವ ಸಂದರ್ಭ ಅವರು ಸೇರಿದಂತೆ ಯಾರಿಂದಲೂ ಸೃಷ್ಟಿಯಾಗಬಾರದು. ಸಾವರ್ಕರ್‌ ಬಗ್ಗೆ ಮಾತನಾಡುವುದು ಸಹ ಸಹಿಸಿಕೊಳ್ಳಲು ಆಗುವುದಿಲ್ಲ ಎಂದರು.

PREV
click me!

Recommended Stories

ಸದ್ದಿಲ್ಲದೇ ಓಪನ್ ಆದ 'ಬಿಗ್ ಬಾಸ್' ನಡೆಯುವ ಜಾಲಿವುಡ್ ಸ್ಟುಡಿಯೋ! KSPCB ಅನುಮತಿ
ವಿಧಾನಸಭೆಯಲ್ಲಿ ಸಿಎಂ ಕುರ್ಚಿಯದ್ದೇ ಗುದ್ದಾಟ: ಬೈರತಿ 'ಕಿಂಗ್ ಅಲೈವ್' ಅಂದಿದ್ದು ಯಾಕೆ? ಆರ್ ಅಶೋಕ್, ಬೈರತಿ ವಾಕ್ಸಮರ!