ನಾನು ಮುಂದಿನ ಚುನಾವಣೆಯಲ್ಲಿ ಸ್ಪರ್ಧೆ ಮಾಡಲ್ಲ ಎಂದು ವಿಜಯನಗರ ಕಾಂಗ್ರೆಸ್ ಅಭ್ಯರ್ಥಿ ಆನಂದ್ ಸಿಂಗ್ ಹೇಳಿದ್ದಾರೆ.
ಹೊಸಪೇಟೆ [ಡಿ.07]: ಮುಂದಿನ ಸಾರ್ವತ್ರಿಕ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ ಎಂದು ವಿಜಯನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಆನಂದ್ ಸಿಂಗ್ ಘೋಷಣೆ ಮಾಡಿದ್ದಾರೆ.
ನಗರದಲ್ಲಿ ಪಕ್ಷದ ಕಾರ್ಯಕರ್ತರ ಸಭೆ ನಡೆಸಿದ ಅವರು ತಮ್ಮ ಮುಂದಿನ ರಾಜಕೀಯ ನಡೆಯನ್ನು ಕಾರ್ಯಕರ್ತರ ಮುಂದಿಟ್ಟರು. ವಿಜಯನಗರ ಕ್ಷೇತ್ರದ ಮತದಾರರು ಮೂರು ಬಾರಿ ನನ್ನನ್ನು ಗೆಲ್ಲಿಸಿದ್ದಾರೆ. ಈ ಉಪ ಚುನಾವಣೆಯಲ್ಲಿ ಸಹ ನಾನು ಗೆದ್ದೇ ಗೆಲ್ಲುತ್ತೇನೆ ಎಂಬ ವಿಶ್ವಾಸವಿದೆ. ಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಸ್ಪರ್ಧಿಸುವ ಬದಲು ಯುವಕರನ್ನು ಬೆಳೆಸುವ ನಿರ್ಧಾರ ಕೈಗೊಂಡಿದ್ದೇನೆ ಎಂದು ತಿಳಿಸಿದರು.
undefined
ನಾನು ಯಾವುದೇ ಸ್ವಾರ್ಥಕ್ಕಾಗಿ ರಾಜಕಾರಣ ಮಾಡಲು ಬಂದಿಲ್ಲ. ಈ ಉಪಚುನಾವಣೆಯ ಸ್ಪರ್ಧೆಯ ಹಿಂದೆ ಯಾವ ಸ್ವಾರ್ಥ ಅಡಗಿಲ್ಲ. ನಮ್ಮ ಕ್ಷೇತ್ರ ಸಮಗ್ರ ಅಭಿವೃದ್ಧಿಯಾಗಬೇಕು ಎಂಬುದಷ್ಟೇ ನನ್ನ ಆಸೆಯಾಗಿತ್ತು. ಈ ದೃಷ್ಟಿಯಿಂದ ನನ್ನ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ, ಉಪ ಚುನಾವಣೆ ಎದುರಿಸಿದೆ. ನಾನು ರಾಜಕೀಯ ಕ್ಷೇತ್ರದಲ್ಲಿ ಏನಾದರೂ ಸಾಧಿಸಬೇಕು ಎಂದರು.
ಎಂಟಿಬಿ ನಾಗರಾಜ್ ಹೇಗೆ ಕೋಟ್ಯಧಿಪತಿಯಾದ್ರು? ಆನಂದ್ ಸಿಂಗ್ ಹೇಳ್ತಾರೆ ಕೇಳಿ!...
ನನ್ನದೇ ಆದ ಸಾಧನೆಯ ಹೆಜ್ಜೆ ಗುರುತುಗಳು ಇರಬೇಕು ಎಂಬ ಉದ್ದೇಶ ನನ್ನದು. ತಾಂತ್ರಿಕ ಕಾರಣದಿಂದ ಬಿಜೆಪಿ ಬಿಟ್ಟು ಹೋಗಿದ್ದೆ. ಕಾಂಗ್ರೆಸ್‌ನಲ್ಲಿ ಸೂಕ್ತ ಸ್ಥಾನಮಾನ ಹಾಗೂ ನನ್ನ ಕ್ಷೇತ್ರದ ಅಭಿವೃದ್ಧಿಯ ಕಡೆಗೆ ಗಮನ ಹರಿಸದ ಸರ್ಕಾರದ ನಡೆಯಿಂದ ಬೇಸರಗೊಂಡು ರಾಜೀನಾಮೆ ನೀಡಿ, ನನ್ನ ಮಾತೃಪಕ್ಷಕ್ಕೆ ಮರಳಿದ್ದೇನೆ ಎಂದರು.