‘ನಾನು ಕಾಂಗ್ರೆಸ್ಸಿಗ, ಬಿಜೆಪಿಗೆ ಹೋಗಲ್ಲ’

Published : May 27, 2019, 10:09 AM IST
‘ನಾನು ಕಾಂಗ್ರೆಸ್ಸಿಗ, ಬಿಜೆಪಿಗೆ ಹೋಗಲ್ಲ’

ಸಾರಾಂಶ

ನಾನು ಅಪ್ಪಟ ಕಾಂಗ್ರೆಸಿಗ, ಕಾಂಗ್ರೆಸ್ ಬಿಟ್ಟು ಎಂದಿಗೂ ತೆರಳುವುದಿಲ್ಲ ಎಂದು ನಾಯಕರೋರ್ವರು ಹೇಳಿದ್ದಾರೆ. 

ಕೊಪ್ಪಳ :  ನಾನು ಕಾಂಗ್ರೆಸ್‌ನ ಶಿಸ್ತಿನ ಸಿಪಾಯಿ, ಹೀಗಾಗಿ ಬಿಜೆಪಿಗೆ ಹೋಗುವ ಪ್ರಶ್ನೆಯೇ ಇಲ್ಲ ಎಂದು ರಾಬಕೊ (ರಾಯಚೂರು, ಬಳ್ಳಾರಿ, ಕೊಪ್ಪಳ) ಹಾಲು ಒಕ್ಕೂಟದ ಅಧ್ಯಕ್ಷ, ಶಾಸಕ ಭೀಮಾನಾಯ್ಕ ಹೇಳಿದ್ದಾರೆ. 

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಈವರೆಗೂ ಬಿಜೆಪಿಯ ಯಾರೂ ನನ್ನನ್ನು ಸಂಪರ್ಕಿಸಿಲ್ಲ. ಅಲ್ಲದೆ, ನಾನು ಬಿಜೆಪಿಗೆ ಹೋಗುತ್ತೇನೆಂದು ಎಲ್ಲೂ ಹೇಳಿಲ್ಲ. 

ಸಿದ್ದರಾಮಯ್ಯ ನಮ್ಮ ನಾಯಕರು, ಅವರ ಮಾರ್ಗದರ್ಶನದಲ್ಲೇ ಮುಂದುವರಿಯುತ್ತೇನೆ. ಅವರನ್ನು 2023ಕ್ಕೆ ರಾಜ್ಯದ ಮುಖ್ಯಮಂತ್ರಿಯನ್ನಾಗಿ ಮಾಡಬೇಕೆಂಬುದು ನಮ್ಮ ಗುರಿ, ಹೀಗಾಗಿ ಎಲ್ಲಿಗೂ ಹೋಗುವುದಿಲ್ಲ ಎಂದರು.

PREV
click me!

Recommended Stories

ಅಪಘಾತಕ್ಕೀಡಾದ ಕುಟುಂಬಕ್ಕೆ ಪರಿಹಾರ ನೀಡುವಲ್ಲೂ ಪೊಲಿಟಿಕ್ಸ್! ಸಚಿವ ಜಮೀರ್ ಭೇಟಿ ರದ್ದಾಗಲು ರಾಜಕೀಯ ಕಾರಣವೇ?
Hubballi-Ankola National Highway ಅತಿಕ್ರಮಣದ ಪರಿಣಾಮ, ಮೃತ್ಯಕೂಪವಾದ ಹುಬ್ಬಳ್ಳಿ ಅಂಕೋಲಾ ಹೆದ್ದಾರಿ!