ಜನರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡುತ್ತೇನೆ: ಶಾಸಕ ಎಚ್‌.ಎಂ.ಗಣೇಶ್‌ ಪ್ರಸಾದ್‌

Published : Jun 17, 2023, 09:43 PM IST
ಜನರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡುತ್ತೇನೆ: ಶಾಸಕ ಎಚ್‌.ಎಂ.ಗಣೇಶ್‌ ಪ್ರಸಾದ್‌

ಸಾರಾಂಶ

ಜನರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡುತ್ತೇನೆ, ಇದರಲ್ಲಿ ಯಾವುದೇ ಅನುಮಾನ ಬೇಡ, ನನಗೆ ಜ್ಞಾಪಕ ಶಕ್ತಿ ಇದೆ ಎಂದು ನೂತನ ಶಾಸಕ ಎಚ್‌.ಎಂ.ಗಣೇಶ್‌ ಪ್ರಸಾದ್‌ ಹೇಳಿದರು. 

ಗುಂಡ್ಲುಪೇಟೆ (ಜೂ.17): ಜನರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡುತ್ತೇನೆ, ಇದರಲ್ಲಿ ಯಾವುದೇ ಅನುಮಾನ ಬೇಡ, ನನಗೆ ಜ್ಞಾಪಕ ಶಕ್ತಿ ಇದೆ ಎಂದು ನೂತನ ಶಾಸಕ ಎಚ್‌.ಎಂ.ಗಣೇಶ್‌ ಪ್ರಸಾದ್‌ ಹೇಳಿದರು. ಕಬ್ಬಹಳ್ಳಿ ಗ್ರಾಮದಲ್ಲಿ ಪಟ್ಟದ ಮಠದ ದಾಸೋಹ ಭವನಕ್ಕೆ ಗುದ್ದಲಿ ಪೂಜೆ, ಪಡಗೂರು ಗ್ರಾಮದ ಸರ್ಕಾರಿ ಶಾಲೆಯ ನೂತನ ಕೊಠಡಿಗಳ ಉದ್ಘಾಟನೆ, ಕೆಲಸೂರು ಗ್ರಾ.ಪಂ ನೂತನ ಗ್ರಂಥಾಲಯ ಕಟ್ಟಡ ಉದ್ಘಾಟಿಸಿ ಮಾತನಾಡಿದರು.

ರಾಜ್ಯದಲ್ಲಿ ನಮ್ಮದೇ ಸರ್ಕಾರವಿದೆ. ಇನ್ನೂ ಐದು ವರ್ಷಗಳ ಸರ್ಕಾರದಲ್ಲಿ ಜನರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡುವ ಪ್ರಯತ್ನ ನನ್ನದಾಗಿದೆ. ನಿಮ್ಮ ಪ್ರೀತಿ, ವಿಶ್ವಾಸ ನನ್ನ ಮೇಲೆ ಇರಲಿ ಎಂದರು. ನನ್ನ ತಂದೆ ಎಚ್‌.ಎಸ್‌.ಮಹದೇವಪ್ರಸಾದ್‌ ಅವರ ಹಾದಿಯಲ್ಲಿ ಸಾಗುತ್ತೇನೆ. ರಾಜಕಾರಣ ಮಾಡುತ್ತೇವೆ ಎಂದು ದಿನದ 24 ಗಂಟೆ ರಾಜಕಾರಣ ಮಾಡುವುದಿಲ್ಲ. ಕಾನೂನಿನೊಳಗಡೆ ಇರುವ ಕೆಲಸ ಪಕ್ಷಾತೀತವಾಗಿ ಮಾಡುತ್ತೇನೆ ಗ್ರಾಮಸ್ಥರು ಒಗ್ಗಟ್ಟಿನಿಂದಿರಿ ಎಂದರು.

ಕಾಂಗ್ರೆಸ್‌ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಸದ್ಭಳಕೆ ಮಾಡಿಕೊಳ್ಳಿ: ಶಾಸಕ ಗಣೇಶ್‌ ಪ್ರಸಾದ್‌

ಶಿಕ್ಷಣ ಮುಖ್ಯ: ಸ್ಪರ್ಧಾತ್ಮಕ ಯುಗದಲ್ಲಿ ಶಿಕ್ಷಣ ಗುಣಮಟ್ಟದಲ್ಲಿ ಇರಬೇಕು. ಸರ್ಕಾರಿ ಶಾಲೆಯಲ್ಲಿ ಗುಣಮಟ್ಟದ ಶಿಕ್ಷಣ ಸಿಗಬೇಕು. ಖಾಸಗಿ ಶಾಲೆಗೆ ಸರಿ ಸಮನಾಗಿ ಶಿಕ್ಷಣ ಸಿಕ್ಕರೆ ಒಳ್ಳೆಯದು ಎಂದರು.

ಹಳ್ಳಿಗೆ ಬರುವೆ: ಇದೀಗ ತಾನೆ ರಾಜ್ಯದಲ್ಲಿ ಕಾಂಗ್ರೆಸ್‌ ನೇತೃತ್ವದ ಸರ್ಕಾರ ರಚನೆಯಾಗಿದೆ. ಕಾಂಗ್ರೆಸ್‌ ಪಕ್ಷದ ಭರವಸೆಯಂತೆ ಐದು ಗ್ಯಾರಂಟಿ ಅನುಷ್ಠಾನ ಗೊಳಿಸುವಲ್ಲಿ ಸರ್ಕಾರ ಮುಂದಾಗಿದೆ. ಮುಂದಿನ ದಿನಗಳಲ್ಲಿ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುವೆ ಎಂದರು.

ಸರ್ಕಾರಕ್ಕೆ ಹೊರೆಯಾದರೂ ಕೊಟ್ಟಮಾತು ಉಳಿಸಿಕೊಳ್ಳುತ್ತೇವೆ: ಸಚಿವ ವೆಂಕಟೇಶ್‌

ಸಮಾರಂಭದಲ್ಲಿ ಕಬ್ಬಹಳ್ಳಿ ಮಠದ ಶ್ರೀ ಗ್ರಾ.ಪಂ ಅಧ್ಯಕ್ಷರಾದ ಕೆ.ಎನ್‌.ಮಾದಪ್ಪ, ಸರೋಜಮ್ಮ, ಜಿ.ಪಂ ಮಾಜಿ ಉಪಾಧ್ಯಕ್ಷ ಕೆ.ಎಸ್‌.ಮಹೇಶ್‌, ತಾಪಂ ಮಾಜಿ ಅಧ್ಯಕ್ಷ ಎಚ್‌.ಎನ್‌.ಬಸವರಾಜು, ಮುಖಂಡ ಕಬ್ಬಹಳ್ಳಿ ದೀಪು, ಕೆಲಸೂರು ಗ್ರಾ.ಪಂ ಉಪಾಧ್ಯಕ್ಷೆ ಸುಜಾತ, ರತಿಮಣಿ, ರಾಧ, ಲಕ್ಷ್ಮಮ್ಮ, ಸಿದ್ದಪ್ಪಾಜಿ, ಚನ್ನನಾಯಕ, ಸ್ವಾಮಿ, ನಾಗೇಶ್‌ ನಾಯಕ, ಶೃತಿ, ಶಿವಮಲ್ಲಪ್ಪ, ಮಹದೇವೇಗೌಡ, ಸದಸ್ಯರಾದ ಮಾಜಿ ಸದಸ್ಯ ಪಡಗೂರು ನಾಗೇಶ್‌, ತಾಪಂ ಕಾರ್ಯ ನಿರ್ವಾಹಕ ಅಧಿಕಾರಿ ಜಿ.ಶ್ರೀಕಂಠರಾಜೇ ಅರಸ್‌, ಕ್ಷೇತ್ರ ಶಿಕ್ಷಣಾಧಿಕಾರಿ ಮಲ್ಲಿಕಾರ್ಜುನ ಸೇರಿದಂತೆ ಹಲವರಿದ್ದರು.

PREV
Read more Articles on
click me!

Recommended Stories

ಬೆಂಗಳೂರು ಜನರಿಗೆ ಹೊಟ್ಟೆತುಂಬಾ ಬಿರಿಯಾನಿ ಬಾಡೂಟ ಕೊಟ್ಟ ಕುಟುಂಬ ಸಾಲದ ಸುಳಿಗೆ ಸಿಲುಕಿ ಆತ್ಮ*ಹತ್ಯೆ!
ಗಡೀಪಾರು ಸಂಕಷ್ಟದಲ್ಲಿ Mahesh Shetty Timarodi: ಎಸಿ ಕೋರ್ಟ್‌ಗೆ ಹಾಜರಾಗುವ ಮುನ್ನ ಮಹಾಲಿಂಗೇಶ್ವರ ದೇಗುಲದಲ್ಲಿ ಪ್ರಾರ್ಥನೆ