
ಬೆಂಗಳೂರು, (ಆ.17): ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಆಯುಕ್ತ ಮಂಜುನಾಥ ಪ್ರಸಾದ್ ಅವರನ್ನು ವರ್ಗಾವಣೆ ಮಾಡಲಾಗಿದೆ.
ಭಾರೀ ಮಳೆಯಾದರೆ ಬೆಂಗಳೂರಿನ 182 ಏರಿಯಾಗಳು ಡೇಂಜರಸ್
ಬಿಬಿಎಂಪಿ ನೂತನ ಕಮಿಷನರ್ ಆಗಿ ಬಿಜೆಪಿ ಶಾಸಕ ಆರ್. ಅಶೋಕ್ ಪರಮಾಪ್ತರಾಗಿರುವ ಐಎಎಸ್ ಅಧಿಕಾರಿ ಗೌರವ್ ಗುಪ್ತಾ ಅವರನ್ನು ನೇಮಕ ಮಾಡಲಾಗಿದೆ. ಈ ಬಗ್ಗೆ ಸರ್ಕಾರದಿಂದ ಅಧಿಕೃತ ಅದೇಶವೊಂದೇ ಬಾಕಿ ಇದೆ.
1990ನೇ ಬ್ಯಾಚಿನ ಐಎಎಸ್ ಅಧಿಕಾರಿಯಾಗಿರುವ ಗೌರವ್ ಗುಪ್ತಾ ಸರ್ಕಾರದ ಹಲವು ಇಲಾಖೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಬಿಬಿಎಂಪಿ ವಿಶೇಷ ಆಯುಕ್ತರಾಗಿಯೂ ಕರ್ತವ್ಯ ನಿರ್ವಹಿಸಿರುವ ಅನುಭವ ಇದೆ.