ದಸರಾ ವೇಷ ಧರಿಸಿ ಕೊರಗರ ಅವಹೇಳನ ಮಾಡಿದ್ರೆ ಶಿಕ್ಷೆ

By Divya Perla  |  First Published Oct 4, 2019, 11:21 AM IST

ದಸರಾ ಆಚರಣೆ ಸಮಯದಲ್ಲಿ ಇತರ ಜನಾಂಗದವರು ಕೊರಗ ಜನಾಂಗದವರ ವೇಷ ಧರಿಸಿ ಅವಹೇಳನ ಮಾಡಿದರೆ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆ ಎಚ್ಚರಿಕೆ ನೀಡಿದೆ. ಇಂತಹ ಪ್ರಕರಣಗಳು ಕಂಡುಬಂದರೆ ಹತ್ತಿರದ ಪೋಲೀಸ್‌ ಠಾಣೆಗೆ ಮಾಹಿತಿ ನೀಡುವಂತೆ ಸಾರ್ವಜನಿಕರನ್ನು ಕೋರಲಾಗಿದೆ.


ಮಂಗಳೂರು(ಅ.04): ದಸರಾ ಆಚರಣೆ ಸಮಯದಲ್ಲಿ ಇತರ ಜನಾಂಗದವರು ಕೊರಗ ಜನಾಂಗದವರ ವೇಷ ಧರಿಸಿ ಅವಹೇಳನ ಮಾಡಿದರೆ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆ ಎಚ್ಚರಿಕೆ ನೀಡಿದೆ. ಇಂತಹ ಪ್ರಕರಣಗಳು ಕಂಡುಬಂದರೆ ಹತ್ತಿರದ ಪೋಲೀಸ್‌ ಠಾಣೆಗೆ ಮಾಹಿತಿ ನೀಡುವಂತೆ ಸಾರ್ವಜನಿಕರನ್ನು ಕೋರಲಾಗಿದೆ.

ಸರ್ಕಾರದ ಸುತ್ತೋಲೆಯ ಆದೇಶದಂತೆ ದಸರಾ ಆಚರಣೆಯ ಸಮಯದಲ್ಲಿ ಕೊರಗ ಜನಾಂಗದವರ ವೇಷ ಧರಿಸಿ ಅಂಗಡಿ, ಮನೆಗಳ ಮುಂದೆ ಕುಣಿದು ಜಾತಿ ನಿಂದನೆ ಮಾಡುವುದು, ಅಮವಾಸ್ಯೆ ದಿನಗಳಲ್ಲಿ ಕೊರಗ ಜನಾಂಗದವರ ಹೆಂಗಸರಿಗೆ ಉಗುರು, ತಲೆ ಕೂದಲುಗಳನ್ನು ಊಟದಲ್ಲಿ ಹಾಕಿ ಉಣ್ಣಲು ನೀಡುವುದು ಮುಂತಾದ ಕೆಲಸ ಮಾಡಿದರೆ ಕಾನೂನು ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದ್ದಾರೆ.

Tap to resize

Latest Videos

ಪೊರಕೆ ಹಿಡಿದ ಬಂಟ್ವಾಳ ತಹಸೀಲ್ದಾರ್‌ ರಶ್ಮಿ

ಬೇರೆ ಜನಾಂಗದವರ ಚಿಕ್ಕ ಮಕ್ಕಳಿಗೆ ಕಾಯಿಲೆ ಇದ್ದಾಗ ಕೊರಗ ಜನಾಂಗದ ಮಹಿಳೆಯನ್ನು ಕರೆದು ಆ ಮಗುವಿಗೆ ಹಾಲು ಉಣಿಸಲು ಬಳಸಿಕೊಳ್ಳುವುದು, ಕಂಬಳದ ಹಿಂದಿನ ದಿನ ಕಂಬಳ ಕೆರೆಯಲ್ಲಿ ಕೊರಗ ಜನಾಂಗದವರನ್ನು ಓಡಿಸುವುದು, ಜಾತ್ರೆ, ಕಂಬಳ ಇನ್ನಿತರ ಸಾರ್ವಜನಿಕ ಸಮಾರಂಭಗಳಲ್ಲಿ ಕೊರಗ ಜನಾಂಗದವರನ್ನು ಡೋಲು ಬಡಿಸಿ ಕುಣಿತಕ್ಕೆ ಬಳಸಿಕೊಳ್ಳುವುದು, ಬೇರೆ ಜನಾಂಗದ ಮಹಿಳೆಯರ ಸೀಮಂತದ ಎಂಜಲು ಊಟವನ್ನು ಕೊರಗ ಮಹಿಳೆಯರಿಗೆ ಉಣಬಡಿಸುವುದು ಮತ್ತಿತರ ಚಟುವಟಿಕೆಗಳು ಕೊರಗರ ಅಜಲು ಪದ್ದತಿ ನಿಷೇಧ ಕಾಯ್ದೆಯಡಿ ಬರುತ್ತವೆ.

‘ನನ್ನನ್ನು ಹುಲಿ ಅಂಥಾನೂ ಒಪ್ಪಿದ್ದಾರೆ, ಆನೆ ಅಂಥಾನೂ ಒಪ್ಪಿದ್ದಾರೆ’

ಇಂತಹ ಆಚರಣೆಗಳು ಕಂಡುಬಂದರೆ ಪರಿಶಿಷ್ಟಜಾತಿ ಮತ್ತು ಪರಿಶಿಷ್ಟಪಂಗಡಗಳ ಮೇಲಿನ ದೌರ್ಜನ್ಯ ನಿಷೇಧ ಅಧಿನಿಯಮ 1989ರ ಅಡಿಯಲ್ಲಿ ನೋಂದಾಯಿಸಿ ಕಾನೂನು ಕ್ರಮ ಜರುಗಿಸಲಾಗುವುದು. ಅಲ್ಲದೆ 5ರಿಂದ 6 ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು 5 ಸಾವಿರ ರು. ದಂಡ ವಿಧಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ಗಬ್ಬೆದ್ದು ನಾರುತ್ತಿದ್ದ ಕೊಟ್ಟಾರ ಮೇಲ್ಸೇತುವೆ ಅಡಿಭಾಗಕ್ಕೆ ಹೊಸಲುಕ್..! 100 ಕ್ಕೂ ಹೆಚ್ಚು ಆಸನ

click me!