ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಮತ ಹಾಕದಿದ್ದರೆ ಗ್ಯಾರಂಟಿ ಯೋಜನೆ ರದ್ದಾಗುತ್ತವೆ; ಶಾಸಕ ಬಾಲಕೃಷ್ಣ ಎಚ್ಚರಿಕೆ

By Sathish Kumar KHFirst Published Jan 30, 2024, 11:01 PM IST
Highlights

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಮತ ಹಾಕದಿದ್ದರೆ ರಾಜ್ಯ ಸರ್ಕಾರ ನೀಡಿರುವ 5 ಗ್ಯಾರಂಟಿಗಳು ರದ್ದಾಗಲಿವೆ ಎಂದು ಶಾಸಕ ಹೆಚ್.ಸಿ. ಬಾಲಕೃಷ್ಣ ಬ್ಲ್ಯಾಕ್‌ಮೇಲ್ ಮಾಡಿದ್ದಾರೆ.

ರಾಮನಗರ (ಜ.30): ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ಹೆಚ್ಚು ಸ್ಥಾನಗಳಲ್ಲಿ ಗೆಲ್ಲದಿದ್ದರೆ ರಾಜ್ಯ ಸರ್ಕಾರ ಕೊಟ್ಟಿರುವ 5 ಗ್ಯಾರಂಟಿ ಯೋಜನೆಗಳನ್ನು ರದ್ದುಗೊಳಿಸಲಾಗುವುದು. ಆದ್ದರಿಂದ ನೀವು ಡಿ.ಕೆ.ಸುರೇಶ್ ಅವರಿಗೆ ಮತ ನೀಡಬೇಕು ಎಂದು ಮಾಗಡಿ ಶಾಸಕ ಹೆಚ್.ಡಿ. ಬಾಲಕೃಷ್ಣ ಜನರಿಗೆ ಬ್ಲ್ಯಾಕ್‌ ಮೇಲ್ ಮಾಡಿದ್ದಾರೆ.

ಮಾಗಡಿ ತಾಲೂಕಿನ ಶ್ರೀಗಿರಿಪುರದ ಜನಸಂಪರ್ಕ ಸಭೆಯಲ್ಲಿ ಮಾತನಾಡಿದ ಶಾಸಕ ಬಾಲಕೃಷ್ಣ ಅವರು, ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಬಡಜನರ ಅಭಿವೃದ್ಧಿಗಾಗಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗಿದೆ. ಲೋಕಸಭೆ ಚುನಾವಣೆಯಲ್ಲಿ ಮತ ನೀಡದಿದ್ರೆ ಗ್ಯಾರಂಟಿ ಯೋಜನೆಗಳನ್ನು ರದ್ದುಗೊಳಿಸಲಾಗುತ್ತದೆ. ಆದ್ದರಿಂದ ನೀವು ಸಂಸದ ಡಿ.ಕೆ ಸುರೇಶ್ ಪರ ಮತ ನೀಡಬೇಕು. ಒಂದು ವೇಳೆ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋತರೆ ಗ್ಯಾರಂಟಿ ರದ್ದಾಗಲಿವೆ ಎಂದು ತಿಳಿಸಿದರು.

Chitradurga:ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ದೇಶದ ಜನ ಅಧಿಕಾರಕ್ಕೆ ಬಂದಂತೆ: ಡಿ.ಕೆ. ಶಿವಕುಮಾರ್‌

ಲೋಕಸಭಾ ಚುನಾವಣೆ ವೇಳೆ ಬಿಜೆಪಿಯವರು ರಾಮ ಮಂದಿರ ನಿರ್ಮಾಣದ ಅಕ್ಷತೆ ಕಾಳನ್ನು ಕೊಟ್ಟು ಮತ ಕೇಳ್ತಿದ್ದಾರೆ. ಆದರೆ, ನಾವು 5 ಗ್ಯಾರಂಟಿಗಳನ್ನ ನೀಡಿ ಮತ ಕೇಳ್ತಿದ್ದೀವಿ. ಕಾಂಗ್ರೆಸ್ ಹೆಚ್ಚು ಸ್ಥಾನ ಗೆಲ್ಲದಿದ್ರೆ ಜನರಿಗೆ 5 ಗ್ಯಾರಂಟಿಗಳು ಇಷ್ಟ ಇಲ್ಲ ಅಂತ ಅರ್ಥವಾದಂತಾಗಲಿದೆ. ಹಾಗಾಗಿ, ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆಯೂ ಚರ್ಚೆ ಮಾಡಿದ್ದೇನೆ. ನಿಮ್ಮ ಮತ ಅಕ್ಷತೆ ಕಾಳಿಗಾ..? ಐದು ಗ್ಯಾರಂಟಿಗಾ ಯೋಚನೆ ಮಾಡಿ ಎಂದು ಜನರಿಗೆ ನೇರವಾಗಿಯೇ ಬ್ಲ್ಯಾಕ್‌ಮೇಲ್ ಮಾಡಿದ್ದಾರೆ.

ಕೆರಗೋಡು ಹನುಮ ಧ್ವಜಕ್ಕೆ ಅನುಮತಿ ಕೊಟ್ಟ ಗ್ರಾಮ ಪಂಚಾಯಿತಿ ನಡಾವಳಿ ಪುಸ್ತಕವೇ ನಾಪತ್ತೆ!

2024ರ  ಲೋಕಸಭೆ ಚುನಾವಣೆಯಲ್ಲಿ ನಮ್ಮ ರಾಜ್ಯದಿಂದ ಕಾಂಗ್ರೆಸ್‌ಗೆ ಹೆಚ್ಚು ಸ್ಥಾನಗಳನ್ನು ನೀಡಿ ಗೆಲ್ಲಿಸಿದರೆ ಗ್ಯಾರಂಟಿ ಯೋಜನೆಗಳನ್ನು ಮುಂದುವರೆಸುತ್ತೇವೆ. ಒಂದು ವೇಳೆ ನೀವು ಕಾಂಗ್ರೆಸ್‌ ಅಭ್ಯರ್ಥೊಗಳನ್ನು ಗೆಲ್ಲಿಸದೇ ಇದ್ದರೆ ಗ್ಯಾರಂಟಿ ಯೋಜನೆ ತಿರಸ್ಕಾರ ಮಾಡಿದ್ದಾರೆ ಅಂತ ಅರ್ಥವಾಗುತ್ತದೆ ಅಲ್ವಾ? ಎಂದು ಜನರನ್ನು ಕೆಣಕಿದ್ದಾರೆ.

click me!