ಒಂದು ವೇಳೆ ವೈದ್ಯರು ಚಿಕಿತ್ಸೆಗೆ ನಿರಾಕರಿಸಿದಲ್ಲಿ ಕೊರೋನಾ ಸೋಂಕಿಗೆ ಒಳಗಾದವರು ಇಲ್ಲಿ ದೂರನ್ನು ದಾಖಲಿಸಬಹುದಾಗಿದೆ. ಇಲ್ಲೊಂದು ಹೆಲ್ಪ್ ಲೈನ್ ನಂಬರ್ ಕೂಡ ಇದೆ.
ಬೆಂಗಳೂರು (ಆ.15): ಕೊರೋನಾ ಸೋಂಕು ರಹಿತ ರೋಗಿಗಳಿಗೂ ಚಿಕಿತ್ಸೆ ನಿರಾಕರಿಸುವ ಖಾಸಗಿ ವೈದ್ಯರ ವಿರುದ್ಧ ದೂರು ದಾಖಲಿಸಲು ಸಹಾಯವಾಣಿ ಆರಂಭಿಸಿರುವುದಾಗಿ ಎಂದು ಕರ್ನಾಟಕ ವೈದ್ಯಕೀಯ ಪರಿಷತ್ (ಕೆಎಂಸಿ) ಹೈಕೋರ್ಟ್‌ಗೆ ಮಾಹಿತಿ ನೀಡಿದೆ.
ಕೊರೋನಾ ಸೋಂಕು ರಹಿತ ರೋಗಿಗಳಿಗೆ ಚಿಕಿತ್ಸೆ ನಿರಾಕರಿಸುವ ಖಾಸಗಿ ವೈದ್ಯರು ಮತ್ತು ಆಸ್ಪತ್ರೆಗಳ ವಿರುದ್ಧ ಕ್ರಮ ಜರುಗಿಸಲು ಕೋರಿ ತುಮಕೂರು ಮೂಲಕ ವಕೀಲ ರಮೇಶ್ ಎಲ್.ನಾಯಕ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್ ಓಕ ಅವರ ನೇತೃತ್ವದ ವಿಭಾಗೀಯ ಪೀಠ ಶುಕ್ರವಾರ ವಿಚಾರಣೆ ನಡೆಸಿತು.
ಕೊರೋನಾ ವಿರುದ್ಧ ಹೊರಾಟ: ಟಾಸ್ಕ್ ಫೋರ್ಸ್ ಸಭೆಯಲ್ಲಿ ತೆಗೆದುಕೊಂಡ ಮಹತ್ವದ ನಿರ್ಧಾರಗಳು .
ಈ ವೇಳೆ ಕೆಎಂಸಿ ಪರ ವಕೀಲರು, ಕರ್ನಾಟಕ ವೈದ್ಯಕೀಯ ಪರಿಷತ್ತು ವತಿಯಿಂದ ಕೊರೋನಾ ರಹಿತ ರೋಗಿಗಳಿಗೆ ವೈದ್ಯರು ಚಿಕಿತ್ಸೆ ನಿರಾಕರಿಸಿದಲ್ಲಿ 080-22200888 ದೂರವಾಣಿ ಸಂಖ್ಯೆಗೂ 99163 02328 ಮೊಬೈಲ್ ಸಂಖ್ಯೆಗೂ ಕರೆ ಮಾಡಿ ದೂರು ನೀಡಬಹುದಾಗಿದೆ ಎಂದು ತಿಳಿಸಿದರು.
ಶುಕ್ರವಾರ ಕರ್ನಾಟಕದಲ್ಲಿ ದಾಖಲೆ ಪ್ರಮಾಣದಲ್ಲಿ ಕೊರೋನಾ ಪ್ರಕರಣಗಳು ಪತ್ತೆ..!
ಸರ್ಕಾರದ ಪರ ವಕೀಲರು, ಚಿಕಿತ್ಸೆ ನಿರಾಕರಿಸದಂತೆ ಮತ್ತು ಚಿಕಿತ್ಸೆ ನಿರಾಕರಿಸಿದಲ್ಲಿ ಸೂಕ್ತ ಕಾನೂನು ಕ್ರಮ ಜರುಗಿಸುವ ಸಂಬಂಧ ಆದೇಶ ಹೊರಡಿಸಲಾಗಿದೆ ಎಂದರು. ಈ ಹೇಳಿಕೆ ದಾಖಲಿಸಿಕೊಂಡ ಪೀಠ ಅರ್ಜಿ ಇತ್ಯರ್ಥಪಡಿಸಿತು.