ಜೆಡಿಎಸ್ ಪಕ್ಷದಿಂದ ಈಗಾಗಲೇ ಮೊದಲನೆ ಅಭ್ಯರ್ಥಿಗಳ ಪಟ್ಟಿಬಿಡುಗಡೆ ಮಾಡಿದ್ದು, ಎರಡನೇ ಪಟ್ಟಿಬಿಡುಗಡೆಯಾಗಬೇಕಿದೆ. ಚುನಾವಣೆಗೆ ಸಮಯ ಕಡಿಮೆ ಇರುವುದರಿಂದ ಶಿರಾ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷಕ್ಕೆ ಎಚ್.ಡಿ.ಕುಮಾರಸ್ವಾಮಿಯವರು ಸ್ಪರ್ಧಿಸಿದರೆ ಗೆಲುವು ನಿಶ್ಚಿತವಾಗಲಿದೆ.
ಶಿರಾ : ಜೆಡಿಎಸ್ ಪಕ್ಷದಿಂದ ಈಗಾಗಲೇ ಮೊದಲನೆ ಅಭ್ಯರ್ಥಿಗಳ ಪಟ್ಟಿಬಿಡುಗಡೆ ಮಾಡಿದ್ದು, ಎರಡನೇ ಪಟ್ಟಿಬಿಡುಗಡೆಯಾಗಬೇಕಿದೆ. ಚುನಾವಣೆಗೆ ಸಮಯ ಕಡಿಮೆ ಇರುವುದರಿಂದ ಶಿರಾ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷಕ್ಕೆ ಎಚ್.ಡಿ.ಕುಮಾರಸ್ವಾಮಿಯವರು ಸ್ಪರ್ಧಿಸಿದರೆ ಗೆಲುವು ನಿಶ್ಚಿತವಾಗಲಿದೆ. ಇದರಿಂದ ತಾಲೂಕಿನಲ್ಲಿ ಜೆಡಿಎಸ್ ಕಾರ್ಯಕರ್ತರಲ್ಲಿ ಹುಮ್ಮಸ್ಸು ಬರಲಿದೆ ಎಂದು ರೇಷ್ಮೆ ನಿಗಮದ ಮಾಜಿ ಅಧ್ಯಕ್ಷರು ಹಾಗೂ ತುಮಕೂರು ಹಾಲು ಒಕ್ಕೂಟದ ನಿರ್ದೇಶಕ ಎಸ್.ಆರ್.ಗೌಡ ಹೇಳಿದರು.
ಎಚ್ಡಿಕೆ ಮುಖ್ಯಮಂತ್ರಿಯಾಗುವುದು ಶತಸಿದ್ಧ: ರವೀಂದ್ರ ಶ್ರೀಕಂಠಯ್ಯ
ಶುಕ್ರವಾರ ಈ ಬಗ್ಗೆ ನಗರದ ಜೆಡಿಎಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ಶಿರಾ ವಿಧಾನಸಭಾ ಕ್ಷೇತ್ರಕ್ಕೆ ಚುನಾವಣೆಗೆ ಸ್ಪರ್ಧಿಸಬೇಕು. ಇದರಿಂದ ತುಮಕೂರು ಜಿಲ್ಲೆಯ 11 ವಿಧಾನಸಭಾ ಕ್ಷೇತ್ರಗಳಿಗೂ ಶಕ್ತಿ ಬರುತ್ತದೆ. ಇನ್ನೂ ಹೆಚ್ಚಿನ ಸ್ಥಾನಗಳನ್ನು ಗೆಲ್ಲಿಸಲು ಸಾಧ್ಯವಾಗುತ್ತದೆ. ಶಿರಾ ಕ್ಷೇತ್ರದಲ್ಲಿ ಸುಮಾರು 6ಕ್ಕೂ ಹೆಚ್ಚು ಜನ ಜೆಡಿಎಸ್ ಆಕಾಂಕ್ಷಿಗಳಿದ್ದು, ಎಲ್ಲರೂ ಚುನಾವಣೆಯನ್ನು ಎದುರಿಸುವ ಶಕ್ತಿ ಇದೆ. ಆದರೂ ಈ ಬಾರಿ ಎಚ್.ಡಿ.ಕುಮಾರಸ್ವಾಮಿ ಅವರೇ ಸ್ಪರ್ಧಿಸಿದರೆ ಉತ್ತಮ. ಆದ್ದರಿಂದ ಕುಮಾರಸ್ವಾಮಿ ಅವರನ್ನು ಆಹ್ವಾನಿಸಲು ತಾಲೂಕಿನ ಎಲ್ಲಾ ಜೆಡಿಎಸ್ ಮುಖಂಡರು ಶೀಘ್ರದಲ್ಲಿಯೇ ತೆರಳಲಿದ್ದೇವೆ ಎಂದರು.
ತಾಲೂಕು ಜೆಡಿಎಸ್ ಅಧ್ಯಕ್ಷ ಆರ್.ಉಗ್ರೇಶ್ ಮಾತನಾಡಿ, ಶಿರಾ ಕ್ಷೇತ್ರವು ಜೆಡಿಎಸ್‌ನ ಭದ್ರಕೋಟೆಯಾಗಿದ್ದು, ಇಲ್ಲಿ ಜೆಡಿಎಸ್ ಪಕ್ಷವನ್ನು ಉಳಿಸಬೇಕಿದೆ. ಈಗಾಗಲೇ ವಿಧಾನಸಭೆ ಚುನಾವಣೆ ಘೋಷಣೆಯಾಗಿದ್ದು, ಶಿರಾ ಕ್ಷೇತ್ರಕ್ಕೆ ಜೆಡಿಎಸ್ ಅಭ್ಯರ್ಥಿಯ ಹೆಸರನ್ನು ಘೋಷಿಸಲು ವಿಳಂಬವಾಗುತ್ತಿದ್ದು, ಇದರಿಂದ ಕಾರ್ಯಕರ್ತರಲ್ಲಿ ಗೊಂದಲ ಉಂಟಾಗುತ್ತದೆ ಹಾಗೂ ಕಾರ್ಯಕರ್ತರು ವಿಚಲಿತರಾಗುತ್ತಿದ್ದು, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಶಿರಾ ಕ್ಷೇತ್ರಕ್ಕೆ ಬಂದು ಸ್ಪರ್ಧಿಸುವ ಮೂಲಕ ಕ್ಷೇತ್ರವನ್ನು ಮತ್ತೊಮ್ಮೆ ಜೆಡಿಎಸ್ ಭದ್ರಕೋಟೆಯನ್ನಾಗಿಸಬೇಕಿದೆ ಎಂದರು.
ರಾಹುಲ್ ಗಾಂಧಿ ಒಪ್ಪಿದರಷ್ಟೇ 2 ಕ್ಷೇತ್ರದಲ್ಲಿ ಸಿದ್ದರಾಮಯ್ಯ ಸ್ಪರ್ಧೆ?
ತಾ.ಪಂ. ಮಾಜಿ ಅಧ್ಯಕ್ಷ ಸತ್ಯಪ್ರಕಾಶ್ ಮಾತನಾಡಿ, ಶಿರಾ ಕ್ಷೇತ್ರಕ್ಕೆ ಕುಮಾಸ್ವಾಮಿ ಅವರು ಬಂದರೆ ಶಿರಾ ತಾಲೂಕು ಸಹ ಚನ್ನಪಟ್ಟಣ, ರಾಮನಗರ ಅಭಿವೃದ್ಧಿಯಾದಂತೆ ಅಭಿವೃದ್ಧಿಯಾಗುತ್ತದೆ ಹಾಗೂ ತುಮಕೂರು ಜಿಲ್ಲೆಯೂ ಸಹ ಅಭಿವೃದ್ಧಿಯಾಗುತ್ತದೆ ಎಂದು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಜಿ.ಪಂ.ಮಾಜಿ ಸದಸ್ಯ ಸಿ.ಆರ್.ಉಮೇಶ್, ರಾಜ್ಯ ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಮುದಿಮಡು ರಂಗಶಾಮಯ್ಯ, ತಾ.ಪಂ. ಮಾಜಿ ಉಪಾಧ್ಯಕ್ಷ ರಂಗನಾಥ್ ಗೌಡ, ಮುಖಂಡರಾದ ಶ್ರೀರಾಮೇಗೌಡ, ಕಲ್ಕೆರೆ ರವಿಕುಮಾರ್, ರಾಜ್ಯ ಜೆಡಿಎಸ್ ಉಪಾಧ್ಯಕ್ಷ ರವಿಶಂಕರ್, ಲಿಂಗದಹಳ್ಳಿ ಚೇತನ್‌ಕುಮಾರ್, ಶಿರಾ ಯೋಜನಾ ಪ್ರಾಧಿಕಾರದ ಮಾಜಿ ಅಧ್ಯಕ್ಷ ಈರಣ್ಣ, ತಾ.ಪಂ. ಮಾಜಿ ಉಪಾಧ್ಯಕ್ಷ ಉದಯಶಂಕರ್, ಪಿಎಲ್‌ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಟಿ.ಡಿ.ಮಲ್ಲೇಶ್, ಸೀಗಲಹಳ್ಳಿ ವೀರೇಂದ್ರ, ಶ್ರೀರಂಗ, ಸೋಮಶೇಖರ್, ಲಲಿತಮ್ಮ, ಸುನಿಲ್‌ಕುಮಾರ್ ಸೇರಿದಂತೆ ಹಲವರು ಹಾಜರಿದ್ದರು.
JDS ಅಧಿಕಾರಕ್ಕೆ ಬರಲ್ಲ
ಗುರುಮಠಕಲ್ (ಮಾ.26): ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬರುವುದಿಲ್ಲ. ಜೆಡಿಎಸ್ ಕಾರ್ಯಕರ್ತರು ತಮ್ಮ ಮತ ವ್ಯರ್ಥ ಮಾಡಿಕೊಳ್ಳಬಾರದು ಎಂದು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಡಿ.ಕೆ.ಶಿವಕುಮಾರ್ ಹೇಳಿದರು. ಗುರುಮಠಕಲ್ ಮತಕ್ಷೇತ್ರದ ಸೈದಾಪುರ ಗ್ರಾಮದಲ್ಲಿ ಕಾಂಗ್ರೆಸ್ ವತಿಯಿಂದ ನಡೆದ ನೂತನ ಕಾಂಗ್ರೆಸ್ ಕಚೇರಿಯ ಶಂಕುಸ್ಥಾಪನೆ ಸಮಾರಂಭದಲ್ಲಿ ಮಾತನಾಡಿದ ಅವರು, ಕುಮಾರಸ್ವಾಮಿ ಅವರನ್ನು ಬಿಜೆಪಿ ಒಂದು ಸಲ ಮುಖ್ಯಮಂತ್ರಿ ಅವಕಾಶ ನೀಡಿದರು. ನಾವು ಸಹ ನೀಡಿದ್ದೇವು. ಆದರೆ, ನಿಭಾಯಿಸಿಕೊಂಡು ಹೋಗಲು ಅವರಿಂದ ಆಗಲಿಲ್ಲ. ಮುಂದೆಯು ಅಧಿಕಾರಕ್ಕೆ ಬರುವುದಿಲ್ಲ ಎಂದರು. ಗುರುಮಠಕಲ್ ಮತ್ತೆ ಕಾಂಗ್ರೆಸ್ ಭದ್ರಕೋಟೆ ಆಗುವಂತೆ ಮಾಡಿ ಡಾ. ಮಲ್ಲಿಕಾರ್ಜುನ ಖರ್ಗೆಗೆ ಶಕ್ತಿ ನೀಡಬೇಕು. ಅವರ ಕೈ ಬಲಪಡಿಸಬೇಕು.
ಗೆಲುವಿನ ಕಾಣಿಕೆಯಾಗಿ ಕೊಡಬೇಕು ಎಂದು ಕಾರ್ಯಕರ್ತರಿಗೆ ಕರೆ ನೀಡಿದರು. ಖರ್ಗೆ ಅವರ ಋುಣ ತೀರಿಸಲು ನೀವು ಮುಂದಾಗಬೇಕು. ಅವರು ಗುರುಮಠಕಲ್ ಕ್ಷೇತ್ರಕ್ಕೆ ಯಾವ ರೀತಿಯಲ್ಲಿ ಅಭಿವೃದ್ಧಿ ಮಾಡಬೇಕು. ಆ ರೀತಿ ಮಾಡಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಬರಲು ಗುರುಮಠಕಲ್ ಕ್ಷೇತ್ರದಲ್ಲಿ ಜನರು ಅವರಿಗೆ ವಿಶ್ವಾಸ ತುಂಬಬೇಕು ಎಂದರು. ರಾಜ್ಯದಲ್ಲಿ ಬಿಜೆಪಿ ಭ್ರಷ್ಟಾಚಾರದಿಂದ ಕೂಡಿದೆ. ಇದರಿಂದ ರಾಜ್ಯದ ಜನರಿಗೆ ಒಳ್ಳೆಯದಾಗಲು ಪ್ರಿಯಾಂಕಾ ಗಾಂಧಿ ಇಲ್ಲಿನ ಹೆಣ್ಣು ಮಕ್ಕಳಿಗೆ ಆರ್ಥಿಕ ಸಹಾಯವಾಗಲು 2000 ರು.ಗಳು ನೀಡಲು ಹೇಳಿದ್ದಾರೆ ಮತ್ತು ನಮ್ಮ ನಾಯಕ ರಾಹುಲ್ ಗಾಂಧಿ ಸಲಹೆಯಂತೆ ನಿರುದ್ಯೋಗ ಯುವಕರಿಗೆ ನಿರುದ್ಯೋಗ ಭತ್ಯೆ 4000 ರು.ಗಳು ನೀಡಲು ಹೇಳಿದ್ದಾರೆ. ಉಚಿತ ವಿದ್ಯುತ್ ಕೊಡಲಾಗುವುದು ಎಂದು ಕಾಂಗ್ರೆಸ್ ಗ್ಯಾರಂಟಿ ಕುರಿತು ಮಾಹಿತಿ ನೀಡಿದರು.