ನೊಂದವರು ನಿರ್ಭಿತಿಯಿಂದ ಮುಕ್ತವಾಗಿ ಲೋಕಾಯುಕ್ತಕ್ಕೆ ಅದೂರು ಅಥವ ಅರ್ಜಿ ಸಲ್ಲಿಸಲು ಮುಂದಾಗಬೇಕು
ಚಿಕ್ಕಬಳ್ಳಾಪುರ (ನ. 08): ನೊಂದವರು ನಿರ್ಭಿತಿಯಿಂದ ಮುಕ್ತವಾಗಿ ಲೋಕಾಯುಕ್ತಕ್ಕೆ ದೂರು ಅಥವ ಅರ್ಜಿ ಸಲ್ಲಿಸಲು ಮುಂದಾಗಬೇಕು. ಲೋಕಾಯುಕ್ತ ಸಂಸ್ಥೆಯ ಮೇಲೆ ಸಂಪೂರ್ಣ ನಂಬಿಕೆ ಇಡಬೇಕು. ನೊಂದವರ ಹಾಗೂ ಅನ್ಯಾಯಕ್ಕೆ ಒಳಗಾದವರ ಬೆಂಬಲಕ್ಕೆ ಲೋಕಾಯುಕ್ತ ಸಂಸ್ಥೆ ಧೃಡವಾಗಿ ನಿಲ್ಲುತ್ತದೆ. ಈ ಬಗ್ಗೆ ಯಾರಿಗೂ ಸಂಶಯ ಬೇಡ ಎಂದು ಕರ್ನಾಟಕ ಉಪ ಲೋಕಾಯುಕ್ತ ಕೆ.ಎನ್.ಫಣೀಂದ್ರ ತಿಳಿಸಿದರು.
ನಗರದ(Zilla Panchayat ) ಸಭಾಂಗಣದಲ್ಲಿ ಸೋಮವಾರ ನಡೆದ ಸಾರ್ವಜನಿಕ ದೂರು ಅರ್ಜಿಗಳು, ಅಹವಾಲುಗಳ ವಿಲೇವಾರಿ ಮತ್ತು ವಿಚಾರಣೆ ಮಾಡುವ ಮುನ್ನ ಸಾರ್ವಜನಿಕರನ್ನು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.
ಯಾರಿಗೂ (Bribe) ನೀಡಬೇಡಿ
ಯಾವುದೇ ಸರ್ಕಾರಿ ಕೆಲಸಗಳನ್ನು ಮಾಡಿಸಿ ಕೊಳ್ಳಲು ಸಾರ್ವಜನಿಕರು ಲಂಚವನ್ನು ನೀಡಬಾರದು. ಅದೇ ರೀತಿ ಸರ್ಕಾರಿ ಅಧಿಕಾರಿಗಳು ಮತ್ತು ಸಿಬ್ಬಂದಿ ಯಾವುದೇ ರೂಪದಲ್ಲಿ ಲಂಚ ಪಡೆಯದೇ ಪ್ರಮಾಣಿಕತೆಯನ್ನು ಮೆರೆಯಬೇಕು. ಇದೇ ದೇಶಕ್ಕೆ ಕೊಡುವ ನಿಜವಾದ ನಿಮ್ಮ ಕೊಡುಗೆ ಈ ದಿಸೆಯಲ್ಲಿ ಎಲ್ಲರೂ ಸಂಕಲ್ಪ ಮಾಡಿ ನೆಡೆದುಕೊಳ್ಳುವಂತೆ ಅಧಿಕಾರಿ ವರ್ಗಕ್ಕೆ ಮತ್ತು ಸಾರ್ವಜನಿಕರಲ್ಲಿ ಉಪ ಲೋಕಾಯುಕ್ತ ಫಣೀಂದ್ರ ಮನವಿ ಮಾಡಿದರು.
ಕಳೆದ ಮೂರು ದಿನಗಳಿಂದ ನಮ್ಮನ್ನು ಸಂಪರ್ಕಿಸಲು ಸಾಧ್ಯವಾಗದಿರುವ ಜಿಲ್ಲೆಯ ಯಾವುದೇ ಸಾರ್ವಜನಿಕರು, ಜಿಲ್ಲೆಯ ಯಾವುದೇ ಸರ್ಕಾರಿ ಅಧಿಕಾರಿ ಮತ್ತು ಸಿಬ್ಬಂದಿಯಿಂದ ಹಾಗೂ ಇತರರಿಂದ ಸರ್ಕಾರಿ ಕೆಲಸ ಮಾಡಿಕೊಡಲು ತೊಂದರೆ ಅನುಭವಿಸಿದ್ದರೆ, ಯಾರಾದರು ಲಂಚಕ್ಕೆ ಬೇಡಿಕೆ ಇಟ್ಟಿದ್ದರೆ ಹಾಗೂ ಇತರೆ ಆಮಿಶಗಳನ್ನು ನಿಮ್ಮಿಂದ ಬಯಸಿದ್ದರೆ ಅಂತಹವರ ವಿರುದ್ಧ ಜಿಲ್ಲಾ ಲೋಕಾಯುಕ್ತ ಅಧೀಕ್ಷಕರ ಕಚೇರಿಯನ್ನು ಸಂಪರ್ಕಿಸಿ, ದೂರು ಅರ್ಜಿ ನೀಡಿದರೆ ಲೋಕಾಯುಕ್ತ ಸಂಸ್ಥೆಯು ಕಾನೂನು ಪ್ರಕ್ರಿಯೆ ನಡೆಸಿ ನೊಂದವರಿಗೆ ನ್ಯಾಯ ಒದಗಿಸುತ್ತದೆ ಎಂದರು.
ಲೋಕಾ ಸಂಸ್ಥೆಯಿಂದ ನಿರಂತರ ನಿಗಾ
ಜಿಲ್ಲಾ ಕೇಂದ್ರದಲ್ಲಿರುವ ಜಿಲ್ಲಾಸ್ಪತ್ರೆ, ಜಿಲ್ಲಾ ಕಾರಾಗೃಹ ಹಾಗೂ ಕೆಲವು ವಿದ್ಯಾರ್ಥಿ ನಿಲಯಗಳಿಗೆ ಭಾನುವಾರ ಭೇಟಿ ಕೊಟ್ಟು ಅಲ್ಲಿನ ಸಾರ್ವಜನಿಕರ, ವಿದ್ಯಾರ್ಥಿಗಳ ಕುಂದುಕೊರತೆಗಳನ್ನು ಆಲಿಸಿ ಸಮಸ್ಯೆಗಳ ಪರಿಹಾರಕ್ಕೆ ಸಂಬಂಧಪಟ್ಟಅಧಿಕಾರಿಗಳಿಗೆ ಸೂಚನೆಗಳನ್ನು ನೀಡಲಾಗಿದೆ. ಈ ಎಲ್ಲಾ ಅಂಶಗಳ ಕುರಿತು ಲೋಕಾಯುಕ್ತ ಸಂಸ್ಥೆಗೆ ವರದಿ ಕಳುಹಿಸಿಕೊಡಲು ಸ್ಪಷ್ಟಆದೇಶವನ್ನು ನೀಡಲಾಗಿದೆ. ಈ ಕುರಿತು ಸಂಸ್ಥೆಯು ನಿರಂತರ ನಿಗಾವಹಿಸುತ್ತದೆ ಎಂದು ಉಪ ಲೋಕಾಯುಕ್ತರು ತಿಳಿಸಿದರು.
ಸಭೆಯಲ್ಲಿ ಕರ್ನಾಟಕ ಲೋಕಾಯುಕ್ತದ ಅಪರ ನಿಬಂಧಕರಾದ ಅಮ್ಮನಬಾವಿ, ಉಪನಿಬಂಧಕರಾದ ಚನ್ನಕೇಶವರೆಡ್ಡಿ, ಸಹಾಯಕ ನಿಬಂಧಕರಾದ ಸಿ.ಚಂದ್ರಶೇಖರ್, ಗೌರವಾನ್ವಿತ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಲಕ್ಷ್ಮೀಕಾಂತ್ ಜೆ. ಮಿಸ್ಕಿನ…, ಜಿಲ್ಲಾಧಿಕಾರಿ ಎನ….ಎಂ.ನಾಗರಾಜ…, ಜಿಪಂ ಸಿಇಒ ಪಿ.ಶಿವಶಂಕರ್, ಜಿಲ್ಲೆಯ ಕರ್ನಾಟಕ ಲೋಕಾಯುಕ್ತ ಪೊಲೀಸ್ ಆಧೀಕ್ಷಕರಾದ ಪವನ್ ನೆಜ್ರ್ಜೂ, ಉಪವಿಭಾಗಾಧಿಕಾರಿ ಡಾ.ಸಂತೋಷ್ ಕುಮಾರ್ ಹಾಜರಿದ್ದರು.
ಕಳೆದ ಮೂರು ದಿನಗಳಿಂದ ಜಿಲ್ಲಾ ಕೇಂದ್ರದಲ್ಲಿಯೇ ಪ್ರವಾಸ ಕೈಗೊಂಡು ಸಾರ್ವಜನಿಕರ ಅಹವಾಲು ಮತ್ತು ದೂರು ಅರ್ಜಿಗಳನ್ನು ಸ್ವೀಕರಿಸಿ, ಕೆಲವು ಪ್ರಕರಣಗಳಲ್ಲಿ ಅಧಿಕಾರಿಗಳ ಸಮ್ಮುಖದಲ್ಲಿ ಸ್ಥಳದಲ್ಲಿಯೇ ತೀರ್ಮಾನ ಕೈಗೊಂಡು ಇತ್ಯರ್ಥ ಪಡಿಸಲಾಗಿದೆ. ದುರ್ಬಲರ, ಆರ್ಥಿಕ ಚೈತನ್ಯವಿಲ್ಲದವರ ಕೆಲವು ಪ್ರಕರಣಗಳನ್ನು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಕ್ಕೆ ವರ್ಗಾಯಿಸಿ ಉಚಿತ ಕಾನೂನು ನೆರವಿಗೆ ತಿಳಿಸಲಾಗಿದೆ.
ಕೆ.ಎನ್.ಫಣೀಂದ್ರ, ಉಪ ಲೋಕಾಯುಕ್ತರು.
ನೊಂದವರು ನಿರ್ಭಿತಿಯಿಂದ ಮುಕ್ತವಾಗಿ ಲೋಕಾಯುಕ್ತಕ್ಕೆ ದೂರು ಅಥವ ಅರ್ಜಿ ಸಲ್ಲಿಸಲು ಮುಂದಾಗಬೇಕು.
ಲೋಕಾಯುಕ್ತ ಸಂಸ್ಥೆಯ ಮೇಲೆ ಸಂಪೂರ್ಣ ನಂಬಿಕೆ ಇಡಬೇಕು. ನೊಂದವರ ಹಾಗೂ ಅನ್ಯಾಯಕ್ಕೆ ಒಳಗಾದವರ ಬೆಂಬಲಕ್ಕೆ ಲೋಕಾಯುಕ್ತ ಸಂಸ್ಥೆ ಧೃಡವಾಗಿ ನಿಲ್ಲುತ್ತದೆ.