ಅಥಣಿ: ನಿಯಮ ಗಾಳಿಗೆ ತೂರಿ ಮದ್ಯ ಮಾರಾಟ

By Kannadaprabha News  |  First Published Jul 19, 2023, 8:10 PM IST

ಅಕ್ರಮವಾಗಿ ರಾಜಾರೋಷವಾಗಿ ಮದ್ಯ ಮಾರಾಟವಾಗುತ್ತಿದ್ದರೂ ಇಲ್ಲಿನ ಅಬಕಾರಿ ಇಲಾಖೆ ಅಧಿಕಾರಿ ಮತ್ತು ಸಿಬ್ಬಂದಿ ಕಂಡು ಕಾಣದಂತೆ ಜಾಣ ಕುರುಡುತನ ಪ್ರದರ್ಶಿಸುತ್ತಿದ್ದಾರೆ. ಅಬಕಾರಿ ಇಲಾಖೆಯು ಸರ್ಕಾರದ ನಿಯಮಗಳನ್ನು ಗಾಳಿಗೆ ತೂರಿ ಬೆಳಗ್ಗೆ 6 ಗಂಟೆಯಿಂದಲೇ ಮದ್ಯ ಮಾರಲು ಅಂಗಡಿಗಳಿಗೆ ಅವಕಾಶ ನೀಡುತ್ತಿದ್ದಾರೆ ಎಂದು ಸಾರ್ವಜನಿಕರು ಆರೋಪಿಸುತ್ತಿದ್ದಾರೆ.


ಸಿ.ಎ.ಇಟ್ನಾಳಮಠ

ಅಥಣಿ(ಜು.19): ಪಟ್ಟಣ ಸೇರಿದಂತೆ ಗ್ರಾಮೀಣ ಪ್ರದೇಶಗಳಲ್ಲಿ ಗುಂಡಿನ ಗಮ್ಮತ್ತು ಜೋರಾಗಿದ್ದು, ಇಲ್ಲಿನ ಅಕ್ರಮ ಮದ್ಯ ವಾಸನೆ ನೋಡಿದರೇ ಸರ್ಕಾರದ ನಿಯಮಗಳು ಮತ್ತು ಕಾನೂನುಗಳಿಗೆ ಯಾವುದೇ ಕಿಮ್ಮತ್ತು ಇಲ್ಲ ಎಂಬುವುದು ಸ್ಪಷ್ಟವಾಗಿ ಗೋಚರಿಸುತ್ತದೆ.

Tap to resize

Latest Videos

ಅಕ್ರಮವಾಗಿ ರಾಜಾರೋಷವಾಗಿ ಮದ್ಯ ಮಾರಾಟವಾಗುತ್ತಿದ್ದರೂ ಇಲ್ಲಿನ ಅಬಕಾರಿ ಇಲಾಖೆ ಅಧಿಕಾರಿ ಮತ್ತು ಸಿಬ್ಬಂದಿ ಕಂಡು ಕಾಣದಂತೆ ಜಾಣ ಕುರುಡುತನ ಪ್ರದರ್ಶಿಸುತ್ತಿದ್ದಾರೆ. ಅಬಕಾರಿ ಇಲಾಖೆಯು ಸರ್ಕಾರದ ನಿಯಮಗಳನ್ನು ಗಾಳಿಗೆ ತೂರಿ ಬೆಳಗ್ಗೆ 6 ಗಂಟೆಯಿಂದಲೇ ಮದ್ಯ ಮಾರಲು ಅಂಗಡಿಗಳಿಗೆ ಅವಕಾಶ ನೀಡುತ್ತಿದ್ದಾರೆ ಎಂದು ಸಾರ್ವಜನಿಕರು ಆರೋಪಿಸುತ್ತಿದ್ದಾರೆ.

ಭೀಮನಂಥ ಗಂಡನನ್ನು ಭೀಮನ ಅಮವಾಸ್ಯೆ ದಿನವೇ ಶಿವನ ಪಾದ ಸೇರಿಸಿದ್ಲು ಹೆಂಡ್ತಿ!

\ತಾಲೂಕಿನ ಅನೇಕ ಗ್ರಾಮಗಳ ಪಾನ್‌ಶಾಪ್‌ ಮತ್ತು ಇತರೆ ಅಂಗಡಿಗಳಲ್ಲಿ ಈಗ ಮದ್ಯ ಸುಲಭವಾಗಿ ದೊರೆಯುತ್ತಿದೆ ಎಂಬ ಆರೋಪ ಕೂಡ ಕೇಳಿಬರುತ್ತಿದೆ. ಅಲ್ಲದೆ ಪ್ರಮುಖ ರಾಜ್ಯ ಹೆದ್ದಾರಿಯ ಬದಿಗೆ ತಲೆಯೆತ್ತಿರುವ ದಾಬಾಗಳಲ್ಲಿ ಮದ್ಯಕ್ಕೆ ಅವಕಾಶ ನೀಡಿದ್ದು, ಹಗಲು ರಾತ್ರಿ ಎನ್ನದೆ ರಾಜಾರೋಷವಾಗಿ ಮದ್ಯ ಮಾರಾಟ ಮಾಡುತ್ತಿದ್ದರೂ ಅಧಿಕಾರಿಗಳು ಮಾತ್ರ ಕ್ಯಾರೆ ಎನ್ನುತ್ತಿಲ್ಲ. ಇದರಿಂದ ಚಿಕ್ಕ ಮಕ್ಕಳು ಮತ್ತು ಯುವ ಜನಾಂಗ ದುಶ್ಚಟಗಳ ದಾಸರಾಗುತ್ತಿದ್ದಾರೆ ಎಂದು ಪೋಷಕರು ಕೂಡ ಆತಂಕ ವ್ಯಕ್ತಪಡಿಸಿದ್ದಾರೆ. ಇದರಿಂದ ರೋಷಿ ಹೋದ ಅನೇಕ ಮಹಿಳೆಯರು ಮತ್ತು ಮಹಿಳಾ ಸಂಘಟನೆಗಳು ಸಂಬಂಧಪಟ್ಟಅಬಕಾರಿ ಇಲಾಖೆ ಅಧಿಕಾರಿಗಳಿಗೆ ಮತ್ತು ತಾಲೂಕು ಆಡಳಿತಕ್ಕೆ ಅನೇಕ ಬಾರಿ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ.

ಬೆಳಗಾವಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳು ನಡೆಸುವ ಫೋನ್‌ಇನ್‌ ಕಾರ್ಯಕ್ರಮದಲ್ಲಿಯೂ ಅಥಣಿ ತಾಲೂಕಿನಿಂದ ಅನೇಕ ಜನರು ಈ ಕುರಿತಾಗಿ ಅನೇಕ ಬಾರಿ ದೂರು ನೀಡಿದ್ದಾರೆ. ಇದಲ್ಲದೆ ಅಥಣಿ ಮತ್ತು ಕಾಗವಾಡ ಶಾಸಕರ ಅಧ್ಯಕ್ಷತೆಯಲ್ಲಿ ನಡೆದ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಅಬಕಾರಿ ಇಲಾಖೆ ಅಧಿಕಾರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದರೂ ಅಬಕಾರಿ ಇಲಾಖೆ ಅಧಿಕಾರಿಗಳು ಯಾವುದೇ ಕ್ರಮಕ್ಕೆ ಮುಂದಾಗಿಲ್ಲ. ತಾಲೂಕಿನ ವಿವಿಧ ಗ್ರಾಮಗಳ ದಿನ ಜನರು, ಮಹಿಳೆಯರು ಮನವಿ ನೀಡಿದಾಗ ಕಾಟಾಚಾರದಂತೆ ದಾಳಿ ನಡೆಸುವ ಅಬಕಾರಿ ಇಲಾಖೆ ಅಧಿಕಾರಿಗಳು ಕೆಲ ದಿನಗಳ ನಂತರ ಮತ್ತೆ ಅವಕಾಶ ನೀಡುತ್ತಿರುವುದು ಹಲವು ಸಂದೇಹಗಳಿಗೆ ಎಡೆಮಾಡಿದೆ.

ಗಾಂಜಾ ಘಾಟು ಬಲು ಜೋರು:

ಅಕ್ರಮ ಮದ್ಯ ಒಂದೆಡೆಯಾದರೆ, ಅನೇಕ ಯುವಕರು ಮಾವಾ, ಗುಟ್ಕಾ ಮತ್ತು ಗಾಂಜಾದಂತಹ ಮಾದಕ ವಸ್ತುಗಳಿಗೆ ಅಂಟಿಕೊಳ್ಳುತ್ತಿದ್ದಾರೆ. ಅಥಣಿ ಪಟ್ಟಣ ಸೇರಿದಂತೆ ಗ್ರಾಮೀಣ ಪ್ರದೇಶಗಳಲ್ಲಿ ಅಕ್ರಮವಾಗಿ ಮಾವಾ ತಯಾರಿಕೆ ಮತ್ತು ಗಾಂಜಾ ಮಾರುತ್ತಿರುವ ಆರೋಪಗಳು ಕೇಳಿ ಬರುತ್ತಿವೆ. ಅಥಣಿಯಲ್ಲಿಯೇ ತಂಬಾಕು ಮತ್ತು ಅಡಿಕೆಯನ್ನು ಸಂಸ್ಕರಣೆ ಮಾಡಿ ಮಾವಾ ಪ್ಯಾಕೆಟ್‌ಗಳನ್ನು ಮತ್ತು ಗಾಂಜಾ ಪ್ಯಾಕೆಟ್‌ಗಳನ್ನು ತಯಾರಿಸಿ ಸುತ್ತಮುತ್ತಲಿನ ತಾಲೂಕುಗಳಿಗೆ ಮತ್ತು ನೆರೆಯ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಮಾರುತ್ತಿದ್ದಾರೆ. ಇದಕ್ಕೆ ಕಡಿವಾಣ ಹಾಕಬೇಕಾದ ಅಧಿಕಾರಿಗಳು ಕಂಡು ಕಾಣದಂತಿರುವುದು ಹಲವು ಸಂದೇಹಗಳಿಗೆ ಎಡೆ ಮಾಡುತ್ತಿದೆ. ಪೊಲೀಸ್‌ ಇಲಾಖೆಯ ಅಧಿಕಾರಿಗಳು ಒಂದೆರಡು ಬಾರಿ ದಾಳಿ ನಡೆಸಿ ಮಾವಾ ತಯಾರಿಕೆಯ ಅಡ್ಡಗಳ ಮೇಲೆ ಮತ್ತು ಗಾಂಜಾ ಮಾರಾಟ ಮಾಡುವವರ ಮೇಲೆ ಪ್ರಕರಣವನ್ನು ದಾಖಲಿಸಿದ್ದನ್ನು ಹೊರತುಪಡಿಸಿದರೆ ಅಬಕಾರಿ ಇಲಾಖೆಯ ಅಧಿಕಾರಿಗಳು ಇದು ನಮಗೇನು ಸಂಬಂಧವೇ ಇಲ್ಲ ಎಂಬಂತೆ ಮೌನವಾಗಿದ್ದಾರೆ ಎನ್ನುವುದು ಸಾರ್ವಜನಿಕರ ದೂರು.

ಖಾನಾಪುರ: ಅನೈತಿಕ ಚಟುವಟಿಕೆ, ಕಾಡಿನಲ್ಲಿ ಜಲಪಾತಗಳ ವೀಕ್ಷಣೆಗೆ ನಿರ್ಬಂಧ

ವೈನ್‌ಶಾಪ್‌ ಮತ್ತು ಬಾರ್‌ ಆ್ಯಂಡ್‌ ರೆಸ್ಟೋರೆಂಟ್‌ ಮಾಲೀಕರು ಇಲಾಖೆಯ ನಿಯಮಾನುಸಾರ ಮದ್ಯ ಮಾರಾಟ ಮಾಡಬೇಕು. ಈ ಬಗ್ಗೆ ನಿಗಾ ಇಡುವಂತೆ ನಮ್ಮ ಇಲಾಖೆಯ ಅಧಿಕಾರಿಗಳಿಗೆ ಮತ್ತು ಸಿಬ್ಬಂದಿಗೆ ಸೂಚನೆ ನೀಡಲಾಗಿದ್ದು, ನಿಯಮಗಳನ್ನು ಗಾಳಿಗೆ ತೂರಿ ಅಕ್ರಮ ಮಾರಾಟ ಕಂಡುಬಂದಲ್ಲಿ ಮತ್ತು ಯಾವುದೇ ದೂರು ಬಂದಲ್ಲಿ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುವುದು ಎಂದು ಅಥಣಿ ಅಬಕಾರಿ ಡಿವೈಎಸ್ಪಿ ಹನುಮಂತ ವಜ್ರಮಟ್ಟಿ ತಿಳಿಸಿದ್ದಾರೆ. 

ಎಗ್ಗಿಲ್ಲದೆ ಅಕ್ರಮ ಸರಾಯಿ ಮಾರಾಟವಾಗುತ್ತಿದ್ದು, ಇದರಿಂದ ಅನೇಕ ಯುವಕರು ದುಶ್ಚಟಗಳ ದಾಸರಾಗುತ್ತಿದ್ದು, ಇದರಿಂದ ಅನೇಕ ಅಪಘಾತ ಹಾಗೂ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿವೆ. ಸಂಬಂಧಪಟ್ಟಇಲಾಖೆಯ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳದೇ ಇರುವುದು ನಾಚಿಕೆಗೇಡಿನ ಸಂಗತಿಯಾಗಿದೆ ಎಂದು ಅಥಣಿ ಸಾಮಾಜಿಕ ಕಾರ್ಯಕರ್ತ ಜಗನ್ನಾಥ ಬಾಮನೆ ತಿಳಿಸಿದ್ದಾರೆ.  

click me!