ಸಚಿವ ಆರಗ ಜ್ಞಾನೇಂದ್ರ ಬಿಡಿಎ ಸೈಟ್‌ ವಾಪಸ್‌, ಕೋರ್ಟಿಗೆ ಹೋಗುವೆ ಎಂದ ಸಚಿವರು

By Suvarna NewsFirst Published Aug 28, 2022, 8:23 AM IST
Highlights

ನಿಯಮ ಉಲ್ಲಂಘಿಸಿ ಗೃಹ ಸಚಿವ ಅರಗ ಜ್ಞಾನೇಂದ್ರ ಅವರಿಗೆ ಬೆಂಗಳೂರಿನ ಆರ್‌ಎಂವಿ ಬಡಾವಣೆಯಲ್ಲಿ ಹಂಚಿಕೆ ಮಾಡಿರುವ ನಿವೇಶನವನ್ನು ವಾಪಸ್‌ ಪಡೆಯುತ್ತೇವೆ ಎಂದು ಬಿಡಿಎ ಅಧ್ಯಕ್ಷ ಎಸ್‌.ಆರ್‌.ವಿಶ್ವನಾಥ್‌ ಹೇಳಿದ್ದಾರೆ.

 ಬೆಂಗಳೂರು (ಆ.28): ನಿಯಮ ಉಲ್ಲಂಘಿಸಿ ಗೃಹ ಸಚಿವ ಅರಗ ಜ್ಞಾನೇಂದ್ರ ಅವರಿಗೆ ಬೆಂಗಳೂರಿನ ಆರ್‌ಎಂವಿ ಬಡಾವಣೆಯಲ್ಲಿ ಹಂಚಿಕೆ ಮಾಡಿರುವ ನಿವೇಶನವನ್ನು ವಾಪಸ್‌ ಪಡೆಯುತ್ತೇವೆ ಎಂದು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಅಧ್ಯಕ್ಷ ಎಸ್‌.ಆರ್‌.ವಿಶ್ವನಾಥ್‌ ತಿಳಿಸಿದರು. ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಬದಲಿ ನಿವೇಶನ ಕೊಡುವಾಗ ಅದೇ ಬಡಾವಣೆ ಅಥವಾ ತದ ನಂತರದ ಬಡಾವಣೆಯಲ್ಲಿ ಕೊಡಬೇಕು ಎಂಬ ನಿಯಮವಿದೆ. ಆದರೆ, ಅರಗ ಜ್ಞಾನೇಂದ್ರ ಅವರಿಗೆ ಎಚ್‌ಎಸ್‌ಆರ್‌ ಲೇಔಟ್‌ಗಿಂತ ಮೊದಲೇ ನಿರ್ಮಾಣವಾದ ಆರ್‌ಎಂವಿ ಬಡಾವಣೆಯಲ್ಲಿ ನಿವೇಶನ ಕೊಟ್ಟಿರುವುದು ಸರಿಯಲ್ಲ ಎಂದು ನಿಯಮ ಸ್ಪಷ್ಟಪಡಿಸಿದೆ. ಹೀಗಾಗಿ ಸುಪ್ರೀಂ ಕೋರ್ಚ್‌ ಆದೇಶ ಕೊಟ್ಟಿದೆ. ಕೋರ್ಚ್‌ ಆದೇಶ ಪರಿಪಾಲಿಸುತ್ತೇವೆ’ ಎಂದರು. ಇನ್ನು ಗೃಹ ಸಚಿವ ಆರಗ ಜ್ಞಾನೇಂದ್ರ ಸೇರಿ ನಾಲ್ವರು ವಿವಿಐಪಿಗಳಿಗೆ ಬಿಡಿಎ ಬದಲಿ ನಿವೇಶನ ಹಂಚಿಕೆ ಮಾಡಿರುವುದು ಅಕ್ರಮ ಎಂದು ಸುಪ್ರೀಂ ಕೋರ್ಚ್‌ ಚಾಟಿ ಬೀಸಿತ್ತು. ಇದರ ಬೆನ್ನಲ್ಲೇ  ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ಆಯುಕ್ತ ಎಂ.ಬಿ.ರಾಜೇಶ್‌ಗೌಡ ಅವರನ್ನು ಎತ್ತಂಗಡಿ ಮಾಡಲಾಗಿತ್ತು. ಇಂಧನ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಕುಮಾರ್‌ ನಾಯ್‌್ಕ ಅವರಿಗೆ ಬಿಡಿಎ ಆಯುಕ್ತ ಹುದ್ದೆಯ ಹೆಚ್ಚುವರಿ ಹೊಣೆಗಾರಿಕೆ ವಹಿಸಲಾಗಿತ್ತು. 

ಕೋರ್ಟಿಗೆ ಹೋಗುವೆ- ಸಚಿವ: ಬಿಡಿಎನಿಂದ ನಿವೇಶನ ಮಂಜೂರಾತಿಗಾಗಿ ಯಾವುದೇ ಪ್ರಭಾವ ಅಥವಾ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಸ್ಪಷ್ಟಪಡಿಸಿದ್ದಾರೆ.

‘ನನಗೆ 17 ವರ್ಷಗಳ ಹಿಂದೆ ಮಂಜೂರಾಗಿದ್ದ ನಿವೇಶವನ್ನು ಸಕಾರಣವಿಲ್ಲದೆ ಬಿಡಿಎ ಹಿಂಪಡೆದಿದೆ. ಆದರೆ ಆ ನಿವೇಶನಕ್ಕೆ ಮೂರು ನೊಂದಣಿ ಸಂಬಂಧ ಶುಲ್ಕ ಪಾವತಿಸಿದ್ದರೂ ಮತ್ತೆ ಮಂಜೂರು ಮಾಡಿಲ್ಲ’ ಎಂದು ಹೇಳಿದ್ದಾರೆ. ಬಿಡಿಎ ನಿಂದ ನ್ಯಾಯ ಪಡೆಯಲು ನ್ಯಾಯಾಲಯದ ಮೊರೆ ಹೋಗಲು ಸಹ ನಿರ್ಧರಿಸಿದ್ದೇನೆ ಎಂದು ಸಚಿವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜೀನಾಮಗೆ ಒತ್ತಾಯಿಸಿದ್ದ ಡಿಕೆ ಸಹೋದರರು: ಗೃಹ ಸಚಿವ ಆರಗ ಜ್ಞಾನೇಂದ್ರ ಸೇರಿದಂತೆ ಕೆಲವರಿಗೆ ಬಿಡಿಎಯಿಂದ ನಿವೇಶನ ಹಂಚಿಕೆಯಲ್ಲಿ ಉಂಟಾಗಿರುವ ಅಕ್ರಮದ ಬಗ್ಗೆ ಸುಪ್ರೀಂ ಕೋರ್ಚ್‌ ಛೀಮಾರಿ ಹಾಕಿದೆ. ಆರಗ ಜ್ಞಾನೇಂದ್ರ ಅವರು ಪ್ರಾಮಾಣಿಕತೆ, ನಿಷ್ಠೆ ಹೊಂದಿರುವ ವ್ಯಕ್ತಿಯಾಗಿದ್ದು, ಅವರೇ ಸ್ವಯಂ ಪ್ರೇರಿತವಾಗಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆ ಎಂದು ಸಂಸದ ಡಿ.ಕೆ. ಸುರೇಶ್‌ ಹೇಳಿದ್ದರು.

Shivaram Karanth Layout ನಿರ್ಮಾಣಕ್ಕೆ ಬಿಡಿಎ ಟೆಂಡರ್‌, 2430 ಕೋಟಿಯಲ್ಲಿ ನಿರ್ಮಾಣ

‘ಗೃಹ ಸಚಿವ ಆರಗ ಜ್ಞಾನೇಂದ್ರ ಸೇರಿ ನಾಲ್ವರು ವಿವಿಐಪಿಗಳಿಗೆ ಬಿಡಿಎ ಬದಲಿ ನಿವೇಶನ ಹಂಚಿಕೆ ಮಾಡಿರುವುದು ಅಕ್ರಮ ಎಂದು ಸುಪ್ರೀಂ ಕೋರ್ಚ್‌ ಚಾಟಿ ಬೀಸಿದೆ. ಈ ಹಗರಣದ ಫಲಾನುಭವಿ ಸಚಿವ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಮಸ್ಯೆ ದೊಡ್ಡದಾಗುವ ಮೊದಲು ಅವರನ್ನು ಸಂಪುಟದಿಂದ ಕೈಬಿಡಬೇಕು’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಒತ್ತಾಯಿಸಿದ್ದರು.

ಆರಗ ಸೇರಿ ಹಲವರಿಗೆ ಬಿಡಿಎ ಬದಲಿ ನಿವೇಶನ, ಬಿಡಿಎ ಆಯುಕ್ತ ರಾಜೇಶ್‌ಗೌಡ ಎತ್ತಂಗಡಿ

 ‘ಸುಪ್ರೀಂ ಕೋರ್ಚ್‌ ಛೀಮಾರಿ ಹಾಕಿರುವುದನ್ನು ಪತ್ರಿಕೆಗಳಲ್ಲಿ ನೋಡಿದೆ. ರಾಜಕೀಯ ಒತ್ತಡವಿಲ್ಲದೆ ಯಾವುದೇ ಅಧಿಕಾರಿಯೂ ಏನನ್ನೂ ಮಾಡಲು ಸಾಧ್ಯವಿಲ್ಲ. ಹೀಗಾಗಿ ಮೊದಲು ಫಲಾನುಭವಿಗಳು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು. ಬಸವರಾಜು ಬೊಮ್ಮಾಯಿ ಅವರು ಇದನ್ನು ದೊಡ್ಡದು ಮಾಡಿಕೊಳ್ಳದೆ ಫಲಾನುಭವಿ ಸಚಿವರನ್ನು ಮೊದಲು ಸಂಪುಟದಿಂದ ಕೈಬಿಡಬೇಕು’ ಎಂದು ಒತ್ತಾಯಿಸಿದ್ದರು.

click me!