ಆರಗ ಸೇರಿ ಹಲವರಿಗೆ ಬಿಡಿಎ ಬದಲಿ ನಿವೇಶನ, ಬಿಡಿಎ ಆಯುಕ್ತ ರಾಜೇಶ್‌ಗೌಡ ಎತ್ತಂಗಡಿ

By Suvarna NewsFirst Published Aug 27, 2022, 10:05 AM IST
Highlights

ಗಣ್ಯ ವ್ಯಕ್ತಿಗಳಿಗೆ ಪರ್ಯಾಯ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿ ಸುಪ್ರೀಂ ಕೋರ್ಚ್‌ ತರಾಟೆಗೆ ತೆಗೆದುಕೊಂಡ ಬೆನ್ನಲ್ಲೇ  ಬಿಡಿಎ ಆಯುಕ್ತ ಎಂ.ಬಿ.ರಾಜೇಶ್‌ಗೌಡ ಅವರನ್ನು ಎತ್ತಂಗಡಿ ಮಾಡಲಾಗಿದೆ.

ಬೆಂಗಳೂರು (ಆ.27): ಸುಪ್ರೀಂ ಕೋರ್ಚ್‌ ತರಾಟೆಗೆ ತೆಗೆದುಕೊಂಡ ಬೆನ್ನಲ್ಲೇ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ಆಯುಕ್ತ ಎಂ.ಬಿ.ರಾಜೇಶ್‌ಗೌಡ ಅವರನ್ನು ಎತ್ತಂಗಡಿ ಮಾಡಲಾಗಿದೆ. ಈ ಸಂಬಂಧ ರಾಜ್ಯ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿದ್ದು, ಇಂಧನ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಕುಮಾರ್‌ ನಾಯ್‌್ಕ ಅವರಿಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ಹುದ್ದೆಯ ಹೆಚ್ಚುವರಿ ಹೊಣೆಗಾರಿಕೆ ವಹಿಸಲಾಗಿದೆ. ಮಾತ್ರವಲ್ಲ ರಾಜೇಶ್‌ಗೌಡ ಅವರಿಗೆ ಯಾವುದೇ ಹುದ್ದೆ ನೀಡಿಲ್ಲ. ಬೆಂಗಳೂರಿನಲ್ಲಿ ಪೂರ್ಣ ಪ್ರಮಾಣದಲ್ಲಿ ಅಭಿವೃದ್ಧಿ ಹೊಂದಿದ ಬಡಾವಣೆಯಲ್ಲಿ ಗಣ್ಯ ವ್ಯಕ್ತಿಗಳಿಗೆ ಪರ್ಯಾಯ ನಿವೇಶನಗಳನ್ನು ಹಂಚಿಕೆ ಮಾಡಿದ ಕಾರಣಕ್ಕಾಗಿ ನ್ಯಾಯಾಲಯ ತರಾಟೆಗೆ ತೆಗೆದುಕೊಂಡಿತ್ತು. ಅಭಿವೃದ್ಧಿ ಹೊಂದಿದ ಬಡಾವಣೆಗಳಲ್ಲಿ ಪರ್ಯಾಯ ನಿವೇಶನಗಳ ಹಂಚಿಕೆಯನ್ನು ನ್ಯಾಯಾಲಯ ನಿರ್ಬಂಧಿಸಿದ್ದೇವೆ. ಆದರೂ ಆಯುಕ್ತರು ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸುವುದರ ಜತೆಗೆ ಪ್ರಾಧಿಕಾರಕ್ಕೆ ಆರ್ಥಿಕ ನಷ್ಟವನ್ನುಂಟು ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ವರ್ಗಾವಣೆ ಮಾಡುವಂತೆ ನ್ಯಾಯಾಲಯವು ಸರ್ಕಾರವು ಸೂಚನೆ ನೀಡಿತ್ತು. ನ್ಯಾಯಾಲಯದ ಸೂಚನೆ ಮೇರೆಗೆ ಸರ್ಕಾರವು ರಾಜೇಶ್‌ ಗೌಡ ಅವರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಜೊತೆಗೆ ಅವರಿಗೆ ಯಾವುದೇ ಹುದ್ದೆಯನ್ನು ಇನ್ನೂ ಫಿಕ್ಸ್ ಮಾಡಿಲ್ಲ.

ಜ್ಞಾನೇಂದ್ರ ಸ್ವಯಂ ಪ್ರೇರಿತವಾಗಿ ರಾಜೀನಾಮೆ ನೀಡುತ್ತಾರೆ: ಡಿಕೆ ಸುರೇಶ್
ಗೃಹ ಸಚಿವ ಆರಗ ಜ್ಞಾನೇಂದ್ರ ಸೇರಿದಂತೆ ಕೆಲವರಿಗೆ ಬಿಡಿಎಯಿಂದ ನಿವೇಶನ ಹಂಚಿಕೆಯಲ್ಲಿ ಉಂಟಾಗಿರುವ ಅಕ್ರಮದ ಬಗ್ಗೆ ಸುಪ್ರೀಂ ಕೋರ್ಚ್‌ ಛೀಮಾರಿ ಹಾಕಿದೆ. ಆರಗ ಜ್ಞಾನೇಂದ್ರ ಅವರು ಪ್ರಾಮಾಣಿಕತೆ, ನಿಷ್ಠೆ ಹೊಂದಿರುವ ವ್ಯಕ್ತಿಯಾಗಿದ್ದು, ಅವರೇ ಸ್ವಯಂ ಪ್ರೇರಿತವಾಗಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆ ಎಂದು ಸಂಸದ ಡಿ.ಕೆ. ಸುರೇಶ್‌ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರಗ ಜ್ಞಾನೇಂದ್ರ ಪ್ರಾಮಾಣಿಕ ವ್ಯಕ್ತಿ. ನನಗೆ ತಿಳಿದಿರುವ ಅವರ ಪ್ರಮಾಣ ಅವರೇ ರಾಜೀನಾಮೆ ನೀಡಲಿದ್ದಾರೆ ಎಂದು ವ್ಯಂಗ್ಯವಾಡಿದರು.

ಇನ್ನು ರಾಜ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿ ತೇಲುವ ಮೂಲಕ ರಾಜ್ಯದ ಮಾನ ಮರ್ಯಾದೆ ಹರಾಜು ಹಾಕುತ್ತಿದೆ. ಈಗಾಗಲೇ ಕೆಂಪಣ್ಣ ಅವರು ಪ್ರಧಾನಮಂತ್ರಿಗಳಿಗೆ 40 ಪರ್ಸೆಂಟ್‌ ಕಮಿಷನ್‌ ಬಗ್ಗೆ ಪತ್ರ ಬರೆದಿದ್ದರು. ಆದರೆ, ದೂರು ಕೊಡುವವರಿಗೆ ಕಿರುಕುಳ ನೀಡುವ ಕೆಲಸವನ್ನು ಮಾಡಲಾಗುತ್ತಿದೆ. ಇವೆಲ್ಲಾ ನೋಡಿದರೆ ಕರ್ನಾಟಕದಲ್ಲಿ ಭ್ರಷ್ಟಾಚಾರ ನಡೆಸಲು ಪ್ರಧಾನಮಂತ್ರಿಗಳೇ ಪರವಾನಗಿ ಕೊಟ್ಟಂತಿದೆ ಎಂದರು.

Shivaram Karanth Layout ನಿರ್ಮಾಣಕ್ಕೆ ಬಿಡಿಎ ಟೆಂಡರ್‌, 2430 ಕೋಟಿಯಲ್ಲಿ ನಿರ್ಮಾಣ

ಆರಗ ಸೇರಿ ಹಲವರಿಗೆ ಬಿಡಿಎ ಬದಲಿ ನಿವೇಶನ, ಸಚಿವ ಆರಗ ರಾಜೀನಾಮೆಗೆ ಡಿಕೆಶಿ ಒತ್ತಾಯ
‘ಗೃಹ ಸಚಿವ ಆರಗ ಜ್ಞಾನೇಂದ್ರ ಸೇರಿ ನಾಲ್ವರು ವಿವಿಐಪಿಗಳಿಗೆ ಬಿಡಿಎ ಬದಲಿ ನಿವೇಶನ ಹಂಚಿಕೆ ಮಾಡಿರುವುದು ಅಕ್ರಮ ಎಂದು ಸುಪ್ರೀಂ ಕೋರ್ಚ್‌ ಚಾಟಿ ಬೀಸಿದೆ. ಈ ಹಗರಣದ ಫಲಾನುಭವಿ ಸಚಿವ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಮಸ್ಯೆ ದೊಡ್ಡದಾಗುವ ಮೊದಲು ಅವರನ್ನು ಸಂಪುಟದಿಂದ ಕೈಬಿಡಬೇಕು’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಒತ್ತಾಯಿಸಿದ್ದಾರೆ.

BDA CA Site ಗುತ್ತಿಗೆ ಹಣ ವಸೂಲಿ ಬಿಡಿಎಗೆ ತಲೆಬೇನೆ!

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸುಪ್ರೀಂ ಕೋರ್ಚ್‌ ಛೀಮಾರಿ ಹಾಕಿರುವುದನ್ನು ಪತ್ರಿಕೆಗಳಲ್ಲಿ ನೋಡಿದೆ. ರಾಜಕೀಯ ಒತ್ತಡವಿಲ್ಲದೆ ಯಾವುದೇ ಅಧಿಕಾರಿಯೂ ಏನನ್ನೂ ಮಾಡಲು ಸಾಧ್ಯವಿಲ್ಲ. ಹೀಗಾಗಿ ಮೊದಲು ಫಲಾನುಭವಿಗಳು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು. ಬಸವರಾಜು ಬೊಮ್ಮಾಯಿ ಅವರು ಇದನ್ನು ದೊಡ್ಡದು ಮಾಡಿಕೊಳ್ಳದೆ ಫಲಾನುಭವಿ ಸಚಿವರನ್ನು ಮೊದಲು ಸಂಪುಟದಿಂದ ಕೈಬಿಡಬೇಕು’ ಎಂದು ಒತ್ತಾಯಿಸಿದರು.

click me!