ವರದಿ : ಆಲ್ದೂರು ಕಿರಣ್ ಏಷ್ಯಾನೆಟ್ ಸುವರ್ಣ ನ್ಯೂಸ್
ಚಿಕ್ಕಮಗಳೂರು (ಜೂ.10): ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಕಾಯ್ದೆ ಜಾರಿ ಇಲ್ಲಿದೆ. ಇದರ ನಡುವೆಯೂ ಚಿಕ್ಕಮಗಳೂರಿನಲ್ಲಿ ಎಗ್ಗಿಲ್ಲದೆ ಗೋ ಮಾಂಸ ಮಾರಾಟದ ದಂಧೆ ನಡೆಯುತ್ತಿದೆ. ಇದಕ್ಕೆ ಸಾಕ್ಷಿ ಎನ್ನುವಂತೆ ನಗರಸಭಾ ಸಿಬ್ಬಂದಿಗಳು ಸ್ವಚ್ಚತಾ ಕಾರ್ಯಕ್ಕೆ ಹೋಗಿದ್ದ ಸಮಯದಲ್ಲಿ ಶೆಡ್ ನಲ್ಲಿ ಗೋ ಮಾಂಸ ಮಾರಾಟ ಮಾಡುವುದು ಬೆಳಕಿಗೆ ಬಂದಿರುವುದು.
ಜೆಸಿಬಿ ದಾಳಿ ನಡೆಸಿದ ನಗರಸಭೆ: ಚಿಕ್ಕಮಗಳೂರು ನಗರವನ್ನು ಸ್ವಚ್ವ ನಗರವನ್ನಾಗಿಸಲು ನಗರಸಭೆಯ ಜನಪ್ರತಿನಿಧಿಗಳು, ಅಧಿಕಾರಿಗಳು ಶ್ರಮವಹಿಸುತ್ತಿದ್ದಾರೆ. ನಗರದಲ್ಲಿ ನಿತ್ಯ ಕಸ, ಗಿಡಗಳನ್ನು ಕ್ಲೀನ್ ಮಾಡಲು ನಗರಸಭಾ ಅಧ್ಯಕ್ಷರು, ಪೌರಯುಕ್ತರು , ನಗರಸಭೆಯ ಸಿಬ್ಬಂದಿಗಳು ಮುಂಜಾನಯಿಂದಲೇ ಜಂಟಿ ಕಾರ್ಯಚಾರಣೆಯನ್ನು ನಡೆಸುತ್ತಿದ್ದಾರೆ. ಎಂದಿನಂತೆ ಇಂದು ಕೂಡ ತಮಿಳು ಕಾಲೋನಿ ಹಾಗೂ ಷರೀಫ್ ಗಲ್ಲಿಯಲ್ಲಿ ಬೆಳೆದಿದ್ದ ಗಿಡ-ಘಂಟೆಗಳ ತೆರವಿಗೆ ನಗರಸಭೆ ಮುಂದಾಗಿತ್ತು.
ಖಾಲಿ ಬ್ಯಾಲೆಟ್ ಪೇಪರ್ ಹಾಕಿದ್ದರೆ ರಾಜಕೀಯದಿಂದ ನಿವೃತ್ತಿ ಹೊಂದುವೆ : GUBBI SRINIVAS
ಆಗ ತಮಿಳು ಕಾಲೋನಿಯ ಜನನಿಬಿಡ ಪ್ರದೇಶದಲ್ಲಿದ್ದ ಅಕ್ರಮ ಗೋಮಾಂಸ ಶೆಡ್ ಕಣ್ಣಿಗೆ ಬಿದ್ದಿದೆ. ಅಧಿಕಾರಿಗಳು ಸ್ಥಳಕ್ಕೆ ಹೋದಾಗ ಗೋಮಾಂಸವೂ ಅಲ್ಲಿ ಇತ್ತು ಎಂದು ಹೇಳಲಾಗಿದೆ. ಕೂಡಲೇ ನಗರಸಭೆ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್ ಹಾಗೂ ನಗರಸಭೆ ಆಯುಕ್ತ ಬಸವರಾಜ್ ನಗರ ಪೊಲೀಸರಿಗೆ ಮಾಹಿತಿ ನೀಡಿ ಪೊಲೀಸರೊಂದಿಗೆ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಅಂದಾಜು 400 ಕೆ.ಜಿ ಪ್ರಮಾಣದ ಗೋಮಾಂಸ ಪತ್ತೆಯಾಗಿದೆ. ಅಕ್ರಮ ಗೋಮಾಂಸ ಮಳಿಗೆಯನ್ನ ಜೆಸಿಬಿಯಿಂದ ದ್ವಂಸ ಮಾಡಿದ್ದಾರೆ. ಸ್ಥಳಕ್ಕೆ ಅಧಿಕಾರಿಗಳು ಹಾಗೂ ಪೊಲೀಸರು ಭೇಟಿ ನೀಡುತ್ತಿದ್ದಂತೆ ಗೋಮಾಂಸದ ಮಳಿಯಲ್ಲಿದ್ದ ಆರು ಮಂದಿ ನಾಪತ್ತೆಯಾಗಿದ್ದಾರೆ.
Udupi; ಮಹಿಳೆಯರನ್ನು ಬಳಸಿಕೊಂಡು ಗೋಮಾಂಸ ಸಾಗಾಟಕ್ಕೆ ಯತ್ನಿಸಿದ ನಾಲ್ವರು
6 ಮಂದಿ ಆರೋಪಿಗಳು ಕಾಂಪೌಂಡ್ ಹಾರಿ ಎಸ್ಕೇಪ್: ನಗರಸಭೆ ಸಿಬ್ಬಂದಿಗಳು, ಪೊಲೀಸ್ರು ಬರುವುದನ್ನು ನೋಡಿದ ಆರೋಪಿಗಳು ಶೆಡ್ ನಲ್ಲಿದ್ದ ಆರು ಜನ ಆರೋಪಿಗಳು ಕಾಂಪೌಂಡ್ ಹಾರಿ ಎಸ್ಕೇಪ್ ಆಗಿದ್ದಾರೆ ಎನ್ನಲಾಗಿದೆ. ಘಟನಾ ಸಂಬಂಧ ಆರೋಪಿಗಳನ್ನು ಸೆರೆ ಹಿಡಿಯುವ ಸಲುವಾಗಿ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಅಕ್ರಮವಾಗಿ ಲಭ್ಯವಾಗಿರುವ ಗೋಮಾಂಸವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
Koppalaದಲ್ಲಿ ಬಿಇಓ ವಿರುದ್ಧ ಶಿಕ್ಷಕನ ಮೌನ ಪ್ರತಿಭಟನೆ
ಅಕ್ರಮ ಗೋಮಾಂಸ ಶೆಡ್ ಕಣ್ಣಿಗೆ ಬೀಳುತ್ತಿದ್ದಂತೆ ಆ ಕಟ್ಟಡವನ್ನ ಜೆಸಿಬಿಯಿಂದ ದ್ವಂಸ ಮಾಡಿದ್ದಾರೆ. ಪೊಲೀಸರು ಹಾಗೂ ಅಧಿಕಾರಿಗಳನ್ನ ಕಂಡು ಓಡಿ ಹೋದ ಅಕ್ರಮ ಗೋಮಾಂಸ ಮಳಿಗೆಯಲ್ಲಿದ್ದ ಶೋಧ ಕಾರ್ಯ ಆರಂಭಿಸಿದ್ದಾರೆ. ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಈ ಬಗ್ಗೆ ಏಷ್ಯಾನೆಟ್ ಸುವರ್ಣ ನ್ಯೂಸ್ ನೊಂದಿಗೆ ಮಾತಾಡಿದ ಚಿಕ್ಕಮಗಳೂರು ನಗರಸಭಾ ಅಧ್ಯಕ್ಷ ವರಸಿದ್ದ ವೇಣುಗೋಪಾಲ್ ಚಿಕ್ಕಮಗಳೂರಿನಲ್ಲಿ ಅಕ್ರಮವಾಗಿ ಗೋಮಾಂಸದ ದಂಧೆ ನಡೆಸುವವರ ಕಟ್ಟಡಗಳ ಮೇಲೆ ದಾಳಿ ಮಾಡಿ ಕಟ್ಟಡಗಳನ್ನು ದ್ವಂಸ ಮಾಡುವ ಕೆಲಸವನ್ನು ನಗರಸಭೆ ಮಾಡಲಿದೆ, ಈ ಕಾರ್ಯಾಚರಣೆಗೆ ಪೊಲೀಸ್ ಇಲಾಖೆಗೆ ನಗರಸಭೆ ಸಂಪೂರ್ಣ ಸಹಕಾರ ನೀಡಲಿದೆ ಎಂದು ತಿಳಿಸಿದ್ದೇವೆ, ಅಕ್ರಮ ಚಟುವಟಿಕೆಗಳು ನಡೆಯುವ ಜಾಗಗಳ ಮೇಲೆ ದಾಳಿ ನಡೆಸಿ ಅಕ್ರಮಗಳಿಗೆ ಲಗಾಮ್ ಹಾಕಲಾಗುವುದು ಎಂದು ಎಚ್ಚರಿಸಿದ್ದಾರೆ.