34.17 ಕೋಟಿ ಮೌಲ್ಯದ ಅಕ್ರಮ ಒತ್ತುವರಿ ತೆರವು: ಜಿಲ್ಲಾಧಿಕಾರಿ ಜಗದೀಶ್‌

ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಒತ್ತುವರಿಯಾಗಿರುವ ರೂ.34.17 ಕೋಟಿ ಅಂದಾಜು ಮೌಲ್ಯದ ಒಟ್ಟು 12ಎಕರೆ 0.25 ಗುಂಟೆ ಸರ್ಕಾರಿ ಜಮೀನನ್ನು ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಜಗದೀಶ.ಜಿ ಅವರ ನೇತೃತ್ವದಲ್ಲಿ ತೆರವುಗೊಳಿಸಿ ವಶಕ್ಕೆ ಪಡೆಯಲಾಯಿತು. 


ವರದಿ: ವಿದ್ಯಾಶ್ರೀ, ಏಷ್ಯಾನೆಟ್ ಸುವರ್ಣನ್ಯೂಸ್, ಬೆಂಗಳೂರು.

ಬೆಂಗಳೂರು (ಏ.05): ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಒತ್ತುವರಿಯಾಗಿರುವ ರೂ.34.17 ಕೋಟಿ ಅಂದಾಜು ಮೌಲ್ಯದ ಒಟ್ಟು 12ಎಕರೆ 0.25 ಗುಂಟೆ ಸರ್ಕಾರಿ ಜಮೀನನ್ನು ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಜಗದೀಶ.ಜಿ ಅವರ ನೇತೃತ್ವದಲ್ಲಿ ತೆರವುಗೊಳಿಸಿ ವಶಕ್ಕೆ ಪಡೆಯಲಾಯಿತು. ಇಂದು ಬೆಂಗಳೂರು ನಗರ ಜಿಲ್ಲೆಯಾದ್ಯಂತ ವಿವಿಧ ತಾಲ್ಲೂಕುಗಳ  ತಹಶೀಲ್ದಾರ್ ಗಳು ತಮ್ಮ ವ್ಯಾಪ್ತಿಯಲ್ಲಿ ಅಕ್ರಮವಾಗಿ  ಒತ್ತುವರಿಯಾಗಿದ್ದ ಗೋಮಾಳ, ಕುಂಟೆ, ಸ್ಮಶಾನ, ಗುಂಡುತೋಪು, ಸರ್ಕಾರಿ ಕಟ್ಟೆ, ಸರ್ಕಾರಿ ಕೆರೆ, ಸರ್ಕಾರಿ ಊರ ಮುಂದಲ ತಿಪ್ಪೆಗಳಿಗೆ ಭೇಟಿ ನೀಡಿ ತೆರವು ಕಾರ್ಯಾಚರಣೆ ಕೈಗೊಂಡರು.

Latest Videos

ಬೆಂಗಳೂರು ಪೂರ್ವ ತಾಲ್ಲೂಕಿನ ಬಿದರಹಳ್ಳಿ ಹೋಬಳಿಯ ಯರಪ್ಪನಹಳ್ಳಿ ಗ್ರಾಮದ ಸ.ನಂ  20 ರ ಗೋಮಾಳ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ  1 ಎಕರೆ 0.20 ಗುಂಟೆಗಳಾಗಿದ್ದು ಅಂದಾಜು ಮೌಲ್ಯ ರೂ 6.00 ಕೋಟಿಗಳಾಗಿರುತ್ತದೆ. ವರ್ತೂರು ಹೋಬಳಿಯ ಗುಂಜೂರು ಗ್ರಾಮದ ಸ.ನಂ  124ರ ಕುಂಟೆ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ  0.10 ಗುಂಟೆಗಳಾಗಿದ್ದು ಅಂದಾಜು ಮೌಲ್ಯ ರೂ 2.50 ಕೋಟಿಗಳಾಗಿರುತ್ತದೆ. ವರ್ತೂರು ಹೋಬಳಿಯ ಹಾಲನಾಯಕನಹಳ್ಳಿ ಗ್ರಾಮದ ಸ.ನಂ  23ರ ಸ್ಮಶಾನ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ  0.04 ಗುಂಟೆಗಳಾಗಿದ್ದು ಅಂದಾಜು ಮೌಲ್ಯ ರೂ 1.60  ಕೋಟಿಗಳಾಗಿರುತ್ತದೆ.

ಇದನ್ನೂ ಓದಿ: ಪ್ರತಿಷ್ಠಿತ ವಿಶ್ವವಿದ್ಯಾಲಯಗಳಲ್ಲಿ ಶಿಕ್ಷಣ ಪಡೆಯಬೇಕೆಂಬುದು ವಿದ್ಯಾರ್ಥಿಗಳ ಹಂಬಲ: ಡಿ.ಕೆ.ಶಿವಕುಮಾರ್

ಆನೇಕಲ್ ತಾಲ್ಲೂಕಿನ ಸರ್ಜಾಪುರ -3 ಹೋಬಳಿಯ ತಿಗಳಚೌಡೇನಹಳ್ಳಿ ಗ್ರಾಮದ ಸ.ನಂ 81ರ ಕುಂಟೆ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.02 ಗುಂಟೆಗಳಾಗಿದ್ದು, ಅಂದಾಜು ಮೌಲ್ಯ ರೂ 0.30 ಕೋಟಿಗಳಾಗಿರುತ್ತದೆ. ಬೆಂಗಳೂರು ದಕ್ಷಿಣ ತಾಲ್ಲೂಕಿನ  ತಾವರೆಕೆರೆ ಹೋಬಳಿಯ  ಮಾದಾಪಟ್ಟಣ ಗ್ರಾಮದ ಸ.ನಂ 31ರ ಗುಂಡುತೋಪು ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.20 ಗುಂಟೆಗಳಾಗಿದ್ದು, ಅಂದಾಜು ಮೌಲ್ಯ ರೂ  1.23 ಕೋಟಿಗಳಾಗಿರುತ್ತದೆ. ತಾವರೆಕೆರೆ ಹೋಬಳಿಯ ಚಿಕ್ಕನಹಳ್ಳಿ ಗ್ರಾಮದ ಸ.ನಂ 58ರ ಸರ್ಕಾರಿ ಕಟ್ಟೆ  ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.05 ಗುಂಟೆಗಳಾಗಿದ್ದು,ಅಂದಾಜು ಮೌಲ್ಯ ರೂ  0.69  ಕೋಟಿಗಳಾಗಿರುತ್ತದೆ. 

ಕೆಂಗೇರಿ  ಹೋಬಳಿಯ ವಡ್ಡರಪಾಳ್ಯ ಗ್ರಾಮದ ಸ.ನಂ 53ರ ಸರ್ಕಾರಿ ಕರೆ  ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.30 ಗುಂಟೆಗಳಾಗಿದ್ದು, ಅಂದಾಜು ಮೌಲ್ಯ ರೂ  0.50 ಕೋಟಿಗಳಾಗಿರುತ್ತದೆ. ಯಲಹಂಕ ತಾಲ್ಲೂಕಿನ ಯಲಹಂಕ-3 ಹೋಬಳಿಯ ದೊಡ್ಡಬೆಟ್ಟಹಳ್ಳಿ ಗ್ರಾಮದ ಸ.ನಂ 5 ಸರ್ಕಾರಿ ಊರ ಮುಂದಲ ತಿಪ್ಪೆ  ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.04 ಗುಂಟೆಗಳಾಗಿದ್ದು, ಅಂದಾಜು ಮೌಲ್ಯ ರೂ 0.80 ಕೋಟಿಗಳಾಗಿರುತ್ತದೆ.  ಹೆಸರುಘಟ್ಟ-1 ಹೋಬಳಿಯ ಮತ್ಕೂರು ಗ್ರಾಮದ ಸ.ನಂ 76 ಸ್ಮಶಾನ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.15 ಗುಂಟೆಗಳಾಗಿದ್ದು ಅಂದಾಜು ಮೌಲ್ಯ ರೂ 0.75 ಕೋಟಿಗಳಾಗಿರುತ್ತದೆ.

ಇದನ್ನೂ ಓದಿ: ಒಬ್ಬರೇ ಇದ್ದರೆ ಹನಿಟ್ರ್ಯಾಪ್ ಆಗುತ್ತಾ ಸಚಿವ ಕೆ.ಎನ್ ರಾಜಣ್ಣ ತಪ್ಪು ಮಾಡಿದ್ದಾರೆ: ಡಿ.ಕೆ.ಶಿವಕುಮಾರ್

ಬೆಂಗಳೂರು ಉತ್ತರ ತಾಲ್ಲೂಕಿನ ದಾಸನಪುರ ಹೋಬಳಿಯ ಹುಣ್ಣಿಗೆರೆ ಗ್ರಾಮದ ಸ.ನಂ51  ಸರ್ಕಾರಿ ಕಟ್ಟೆ  ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.15 ಗುಂಟೆಗಳಾಗಿದ್ದು,ಅಂದಾಜು ಮೌಲ್ಯ ರೂ 0.75ಕೋಟಿಗಳಾಗಿರುತ್ತದೆ. ದಾಸನಪುರ ಹೋಬಳಿಯ ಬೆಟ್ಟಹಳ್ಳಿ ಗ್ರಾಮದ ಸ.ನಂ38  ಸರ್ಕಾರಿ ಗೋಮಾಳ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 3 ಎಕರೆಗಳಾಗಿದ್ದು,ಅಂದಾಜು ಮೌಲ್ಯ ರೂ 3.00  ಕೋಟಿಗಳಾಗಿರುತ್ತದೆ. ಯಶವಂತಪುರ ಹೋಬಳಿಯ ಚಿಕ್ಕಬಾಣಾವರ ಗ್ರಾಮದ ಸ.ನಂ 57 ಸರ್ಕಾರಿ ಕಟ್ಟಿ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 5 ಎಕರೆ 20 ಗುಂಟೆಗಳಾಗಿದ್ದು ಅಂದಾಜು ಮೌಲ್ಯ ರೂ 16.05 ಕೋಟಿಗಳಾಗಿರುತ್ತದೆ. ಇದೇ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿಯಾದ ಜಗದೀಶ್ ಕೆ ನಾಯಕ್ ಹಾಗೂ ತಾಲ್ಲೂಕಿನ ತಹಶೀಲ್ದಾರ್ ರವರು ಉಪಸ್ಥಿತರಿದ್ದರು.

click me!