ಚಿಕ್ಕಮಗಳೂರು: ತರೀಕೆರೆಯಲ್ಲಿ 6.44 ಕೋಟಿ ಮೌಲ್ಯದ ಅಕ್ರಮ ಚಿನ್ನ ವಶ

By Kannadaprabha News  |  First Published Apr 1, 2023, 11:00 AM IST

ಟಾಟಾ ಏಸ್‌ ವಾಹನದಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಸುಮಾರು 6.44 ಕೋಟಿ ರು.ಮೌಲ್ಯದ 17 ಕೆ.ಜಿ.ಚಿನ್ನ ಹಾಗೂ ಬೆಳ್ಳಿ ಜಪ್ತಿ. 


ಬೆಂಗಳೂರು(ಏ.01): ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಎಂ.ಸಿ.ಹಳ್ಳಿಯ ಚೆಕ್‌ಪೋಸ್ಟ್‌ನಲ್ಲಿ ಶುಕ್ರವಾರ ಟಾಟಾ ಏಸ್‌ ವಾಹನದಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಸುಮಾರು 6.44 ಕೋಟಿ ರು.ಮೌಲ್ಯದ 17 ಕೆ.ಜಿ.ಚಿನ್ನ ಹಾಗೂ ಬೆಳ್ಳಿಯನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ಇದೇ ವೇಳೆ, ಉತ್ತರ ಕನ್ನಡ ಜಿಲ್ಲೆ ಮುಂಡಗೋಡ ತಾಲೂಕಿನ ಅಗಡಿ ಚೆಕ್‌ಪೋಸ್ಟ್‌ನಲ್ಲಿ ಬೈಕ್‌ನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ .3.39 ಲಕ್ಷ, ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಪಿ.ಡಿ.ಕೋಟೆಯಲ್ಲಿ ದಾಖಲೆ ಇಲ್ಲದೆ ಕಾರಿನಲ್ಲಿ ಸಾಗಿಸುತ್ತಿದ್ದ 3 ಲಕ್ಷ ರೂ.ಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಜೊತೆಗೆ, ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಚೆಕ್‌ಪೋಸ್ಟ್‌ನಲ್ಲಿ ಧರ್ಮಸ್ಥಳ, ಕಟೀಲ್‌ ದೇವಸ್ಥಾನದ ಹುಂಡಿಗೆ ಹಾಕಲು ತಂದಿದ್ದ, ದಾಖಲೆ ಇಲ್ಲದ 2.50 ಲಕ್ಷ ನಗದನ್ನು ವಶಪಡಿಸಿಕೊಳ್ಳಲಾಗಿದೆ. 

Tap to resize

Latest Videos

undefined

ತುಮಕೂರು: ದಾಖಲೆಯಿಲ್ಲದ ಲಕ್ಷಾಂತರ ರೂ. ಮೌಲ್ಯದ ಎಲ್‌ಇಡಿ ಬಲ್ಬ್‌ ಜಪ್ತಿ

ಪಾವಗಡ ಮೂಲದ ಕುಟುಂಬಸ್ಥರು ಧರ್ಮಸ್ಥಳ ಮತ್ತು ಕಟೀಲ್‌ಗೆ ತೆರಳುತ್ತಿದ್ದು, ದೇವರ ಹುಂಡಿಗೆ ಹಾಕಲು ಹಣ ತೆಗೆದುಕೊಂಡು ಹೋಗುತ್ತಿದ್ದರು ಎನ್ನಲಾಗಿದೆ.

ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಿದ್ದು, ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನಾಮಪತ್ರ ಹಿಂಪಡೆಯಲು ಏಪ್ರಿಲ್ 24 ಕಡೆಯ ದಿನಾಂಕ.

click me!