ಸರ್ಕಾರಿ ಬಸ್‌ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಘಟನೆ ಚಿಕ್ಕಮಗಳೂರು ತಾಲೂಕಿನ ಮಾಗಡಿ ಚೆಕ್ ಪೋಸ್ಟ್ ನಲ್ಲಿ ನಡೆದಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನವನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಚಿಕ್ಕಮಗಳೂರು (ಮಾ.21): ಸರ್ಕಾರಿ ಬಸ್‌ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಘಟನೆ ಚಿಕ್ಕಮಗಳೂರು ತಾಲೂಕಿನ ಮಾಗಡಿ ಚೆಕ್ ಪೋಸ್ಟ್ ನಲ್ಲಿ ನಡೆದಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನವನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಲೋಕಸಭಾ ಚುನಾವಣೆಗೆ ದಿನಾಂಕ ಘೋಷಣೆಯಾದ ಬೆನ್ನಲ್ಲೇ ರಾಜ್ಯಾದ್ಯಂತ ನೀತಿ ಸಂಹಿತೆಯೂ ಜಾರಿಯಾಗಿ ಮುಖ್ಯರಸ್ತೆಗಳಲ್ಲಿ ಬ್ಯಾರಿಕೇಡ್ ಕಟ್ಟೆಚ್ಚರ ವಹಿಸಿರುವ ಪೊಲೀಸರು ಸರ್ಕಾರಿ ವಾಹನಗಳು ಸೇರಿದಂತೆ ಎಲ್ಲ ವಾಹನಗಳನ್ನು ತಪಾಸಣೆ ನಡೆಸುತ್ತಿದ್ದಾರೆ. ಬೆಂಗಳೂರಿನಿಂದ ಚಿಕ್ಕಮಗಳೂರಿನತ್ತ ಬರುತ್ತಿದ್ದ ಸರ್ಕಾರಿ ಬಸ್ ಚಿಕ್ಕಮಗಳೂರಿನ ಮಾಗಡಿ ಚೆಕ್ ಪೋಸ್ಟ್ ನಲ್ಲಿ ತಪಾಸಣೆ ನಡೆಸಿದಾಗ ದಾಖಲೆ ಇಲ್ಲದೆ ಅಕ್ರಮವಾಗಿ ಲಕ್ಷಾಂತರ ರೂಪಾಯಿ ಚಿನ್ನ ಸಾಗಿಸುತ್ತಿರುವುದು ಬೆಳಕಿಗೆ ಬಂದಿದೆ. ಓರ್ವ ಆರೋಪಿಯನ್ನು ಬಂಧಿಸಿದ ಪೊಲೀಸರು.
undefined
ಲೋಕಸಭಾ ಚುನಾವಣೆ 2024: ಕರ್ನಾಟಕದಲ್ಲಿ 5.85 ಕೋಟಿ ನಗದು ಜಪ್ತಿ
ಚಿಕ್ಕಮಗಳೂರು ಡಿಪೋಗೆ ಸೇರಿರುವ ಬಸ್. ಚಿನ್ನ ಪತ್ತೆಯಾಗ್ತಿದ್ದಂತೆ ಸಂಪೂರ್ಣ ತಪಾಸಣೆ ನಡೆಸಿದ ಪೊಲೀಸರು. ಕಂಡಕ್ಟರ್, ಡ್ರೈವರ್‌ಗಳನ್ನ ಸಹ ವಶಕ್ಕೆ ಪಡೆದ ಪೊಲೀಸರು ವಿಚಾರಣೆ ಮುಂದುವರಿಸಿದ್ದಾರೆ. ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ನಡೆದಿರುವ ಘಟನೆ.