Mandya: ಪ್ರಿಯಕರನೊಂದಿಗೆ ದಿಂಬಿನಿಂದ ಗಂಡನ ಉಸಿರು ನಿಲ್ಲಿಸಿದ್ದ ಕೇಸ್; ಶಿಕ್ಷೆ ಪ್ರಕಟ

Mahmad Rafik   | Kannada Prabha
Published : Oct 28, 2025, 02:40 PM IST
Mandya husband murder case

ಸಾರಾಂಶ

Mandya husband murder case: ಮಂಡ್ಯದಲ್ಲಿ, ಫೇಸ್‌ಬುಕ್‌ನಲ್ಲಿ ಪರಿಚಯವಾದ ಪ್ರಿಯಕರನೊಂದಿಗೆ ಸೇರಿ ಪತ್ನಿಯೊಬ್ಬಳು ತನ್ನ ಪತಿಯನ್ನು ಕೊಲೆ ಮಾಡಿದ್ದಳು. ಈ ಪ್ರಕರಣದಲ್ಲಿ, ನ್ಯಾಯಾಲಯವು ಇದೀಗ ಇಬ್ಬರೂ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಮತ್ತು ದಂಡ ವಿಧಿಸಿ ತೀರ್ಪು ನೀಡಿದೆ.

ಮಂಡ್ಯ : ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಕೊ*ಲೆಗೈದಿದ್ದ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ಇಲ್ಲಿನ 2ನೇ ಅಪರ ನ್ಯಾಯಾಲಯದ ನ್ಯಾಯಾಧೀಶರು ತೀರ್ಪು ನೀಡಿದ್ದಾರೆ. ಮಂಡ್ಯದ ಸಬ್ದರಿಯಾ ಮೊಹಲ್ಲಾ ನಿವಾಸಿ ಸೈಯದ್ ರಿಜ್ವಾನ್‌ ಬಾನು (36) ಹಾಗೂ ಈಕೆಯ ಪ್ರಿಯಕರ ದಾವಣಗೆರೆ ಜಿಲ್ಲೆಯ ಹರಿಹರದ ರೆಹಮತ್ ಉಲ್ಲಾ (28) ಶಿಕ್ಷೆಗೊಳಗಾದವರು. ಸಬ್ದರಿಯಾಮೊಹಲ್ಲಾ ನಿವಾಸಿ, ತಗ್ಗಹಳ್ಳಿ ಸರ್ಕಾರಿ ಕಾಲೇಜಿನ ಉಪ ಪ್ರಾಂಶುಪಾಲ ಅಲ್ತಾಫ್ ಮೆಹದಿ ಎಂಬುವರೇ ಕೊ*ಲೆಯಾದವರು.

19 ವರ್ಷಗಳ ಹಿಂದೆ ಮದುವೆ

ಉಪ ಪ್ರಾಂಶುಪಾಲ ಅಲ್ತಾಫ್ ಮೆಹದಿ ಮತ್ತು ಸೈಯದ್ ರಿಜ್ವಾನ್‌ ಬಾನು ಅವರು 19 ವರ್ಷಗಳ ಹಿಂದೆ ಮದುವೆಯಾಗಿದ್ದು, ಈ ದಂಪತಿಗೆ ಮೂವರು ಮಕ್ಕಳಿದ್ದಾರೆ. ಹರಿಹರದ ರೆಹಮತ್ ಉಲ್ಲಾ ಫೇಸ್‌ಬುಕ್‌ನಲ್ಲಿ ರಿಜ್ವಾನ್‌ ಬಾನು ಅವರನ್ನು ಪರಿಚಯ ಮಾಡಿಕೊಂಡಿದ್ದನು. ನಂತರ ದಿನಗಳಲ್ಲಿ ಮಂಡ್ಯಕ್ಕೆ ಬಂದಿದ್ದ. ಈತನನ್ನು ಪತ್ನಿಯೇ ಪತಿಗೆ ಪರಿಚಯ ಮಾಡಿಕೊಟ್ಟು ಇವರು ಟೈಲ್ಸ್ ವ್ಯಾಪಾರ ಮಾಡುತ್ತಿದ್ದು, ಇವರಿಗೆ ಅಂಗಡಿಯೊಂದನ್ನು ತೋರಿಸುವಂತೆ ಪತಿಗೆ ತಿಳಿಸಿದ್ದಾಳೆ. ನಂತರ ಕೆಲಸಕ್ಕಾಗಿ ತಾನೇ ಅವರ ಅಂಗಡಿಯಲ್ಲಿ ಕೆಲಸ ಮಾಡುವುದಾಗಿ ಪತಿಗೆ ತಿಳಿಸಿ ಅಂಗಡಿ ಕೆಲಸಕ್ಕೆ ಸೇರಿಕೊಂಡಿದ್ದಾಳೆ.

ಇವರಿಬ್ಬರ ನಡುವೆ ಅನೈತಿಕ ಸಂಬಂಧ ಉಂಟಾಗಿದೆ. ಇದನ್ನು ಗಮನಿಸಿದ ಉಪ ಪ್ರಾಂಶುಪಾಲ ಅಲ್ತಾಫ್ ಪತ್ನಿಯೊಂದಿಗೆ ಜಗಳವಾಡಿದ್ದಾನೆ. ಬಳಿಕ ಇಬ್ಬರೂ ಬೇರೆಯಾಗಿ ಅಲ್ತಾಫ್ ಬೇರೊಂದು ಮದುವೆ ಮಾಡಿಕೊಂಡು ದೂರವಾಗಿದ್ದ. ಆದರೂ ಮಕ್ಕಳನ್ನು ನೋಡುವುದಕ್ಕಾಗಿ ಆಗಾಗ್ಗೆ ಬರುತ್ತಿದ್ದನು. ಕಳೆದ 2021ರ ಜೂನ್ 29ರಂದು ಮಕ್ಕಳನ್ನು ನೋಡಲು ಸಬ್ದರಿಯಾಮೊಹಲ್ಲಾದ ಪತ್ನಿ ಮನೆಗೆ ಬಂದು ಅಲ್ಲೇ ರಾತ್ರಿ ಮಲಗಿದ್ದಾನೆ. ಈ ವೇಳೆ ರಿಜ್ವಾನ್‌ ಬಾನು ತನ್ನ ಪ್ರಿಯಕರ ರೆಹಮತ್ ಉಲ್ಲಾನನ್ನು ಮಧ್ಯರಾತ್ರಿ ಮನೆಗೆ ಕರೆಸಿಕೊಂಡು ಇಬ್ಬರೂ ಸೇರಿ ಪತಿ ಅಲ್ತಾಫ್‌ನನ್ನು ದಿಂಬಿನಿಂದ ಉಸಿರುಗಟ್ಟಿಸಿ ಹತ್ಯೆ ಮಾಡಿ, ಸಾಕ್ಷ್ಯ ನಾಶ ಮಾಡಲು ಯತ್ನಿಸಿದ್ದರು.

ಇದನ್ನೂ ಓದಿ: Good Bye My Dear Life RIP ಸ್ಟೇಟಸ್ ಹಾಕಿ ಪ್ರಾಣ ಕಳೆದುಕೊಂಡ ತುಮಕೂರು ವಿದ್ಯಾರ್ಥಿ ಕೇಸ್‌ಗೆ ಟ್ವಿಸ್ಟ್

ಶಿಕ್ಷೆ ಏನು?

ಈ ಬಗ್ಗೆ ವಿಷಯ ತಿಳಿದ ಪೂರ್ವ ಠಾಣೆ ಪೊಲೀಸರು ವಿಚಾರಣೆ ನಡೆಸಿದಾಗ ಸತ್ಯಾಂಶ ಹೊರಬಿದ್ದಿದೆ. ಇಬ್ಬರೂ ಆರೋಪಿಗಳ ವಿರುದ್ಧ ಅಂದಿನ ಸಿಪಿಐ ಸಂತೋಷ್ ಅವರು ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿ 2ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶೆ ಸೈಯಿದ್ ಉನ್ನಿಸ್ ಅವರು ಆರೋಪಿಗಳ ಅಪರಾಧ ಸಾಬೀತಾದ ಕಾರಣ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ, 1 ಲಕ್ಷ ರು. ದಂಡ, ಸಾಕ್ಷ್ಯ ನಾಶಕ್ಕಾಗಿ 5 ವರ್ಷ ಸಜೆ ಮತ್ತು 50 ಸಾವಿರ ದಂಡ ವಿಸಿ ತೀರ್ಪು ನೀಡಿದ್ದಾರೆ.

ಮೃತ ಅಲ್ತಾಫ್ ಮೆಹದಿ ಅವರ ಮೂವರು ಮಕ್ಕಳಿಗೆ ಕಾನೂನು ಸೇವಾ ಪ್ರಾಧಿಕಾರದಿಂದ ಪರಿಹಾರ ನೀಡುವಂತೆ ಸೂಚಿಸಿದ್ದಾರೆ. ಪ್ರಾಷಿಕ್ಯೂಷನ್ ಪರವಾಗಿ ಸರ್ಕಾರಿ ಅಭಿಯೋಜಕ ಕೆ.ನಾಗರಾಜು ಅವರು ವಾದ ಮಂಡಿಸಿದ್ದರು.

ಇದನ್ನೂ ಓದಿ: Koppal: ಗಂಡ-ಮಕ್ಕಳನ್ನ ಬಿಟ್ಟು ಬಾ ಅಂದ, ಇಬ್ಬರು ಕಂದಮ್ಮಗಳನ್ನು ಕೊಂದು ಪ್ರಾಣ ಬಿಟ್ಟ ತಾಯಿ

PREV
Read more Articles on
click me!

Recommended Stories

ಕಾರವಾರದಲ್ಲಿ ಭಾರತೀಯ ನೌಕಾ ದಿನಾಚರಣೆ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭಾಗಿ!
ದತ್ತಪೀಠ ವಿಚಾರದಲ್ಲಿ ರಾಜ್ಯ ಸರ್ಕಾರ ನ್ಯಾಯ ಒದಗಿಸಲಿ: ಸಿ.ಟಿ.ರವಿ ಆಗ್ರಹ