ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ: ಕುಮಾರ್‌ ಬಂಗಾರಪ್ಪ

By Kannadaprabha News  |  First Published May 31, 2020, 10:06 AM IST

ನಾನಂತೂ ಸಚಿವ ಸ್ಥಾನದ ಆಕಾಂಕ್ಷಿಯಲ್ಲಾ. ನನಗೆ ಅದರ ಬಗ್ಗೆ ಆಸೆಯೂ ಇಲ್ಲ. ನಾನು ಸಚಿವ ಸ್ಥಾನಕ್ಕೆ ಅರ್ಜಿ ಹಾಕಿಲ್ಲ ಎಂದು ಕುಮಾರ್‌ ಬಂಗಾರಪ್ಪ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತಾದ ಒಂದು ವರದಿ ಇಲ್ಲಿದೆ ನೋಡಿ. 


ಶಿವಮೊಗ್ಗ(ಮೇ.31): ರಾಜಕೀಯದಲ್ಲಿ ಪ್ರತಿಯೊಬ್ಬರಿಗೂ ಮಂತ್ರಿ ಆಗಬೇಕೆಂಬ ಆಸೆ ಇದ್ದೇ ಇರುತ್ತದೆ. ಈ ಕುರಿತು ಸೂಕ್ತ ತೀರ್ಮಾನವನ್ನು ಪಕ್ಷದ ಮುಖಂಡರು, ವರಿಷ್ಠರು ಕೈಗೊಳ್ಳುತ್ತಾರೆ ಎಂದು ಸೊರಬ ಶಾಸಕ ಕುಮಾರ್‌ ಬಂಗಾರಪ್ಪ ಹೇಳಿದರು. 

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜಕೀಯ ಪಕ್ಷದಲ್ಲಿ ಸಣ್ಣಪುಟ್ಟ ಅಸಮಾಧಾನ ಇವೆಲ್ಲವೂ ಕಾಮನ್‌. ಆದರೆ, ಪಕ್ಷದ ಚೌಕಟ್ಟು, ನಿಯಮಗಳಿಗೆ ನಾವೆಲ್ಲರೂ ಬದ್ಧವಾಗಿ ನಡೆಯಬೇಕು ಎಂದರು. ನಾನಂತೂ ಸಚಿವ ಸ್ಥಾನದ ಆಕಾಂಕ್ಷಿಯಲ್ಲಾ. ನನಗೆ ಅದರ ಬಗ್ಗೆ ಆಸೆಯೂ ಇಲ್ಲ. ನಾನು ಸಚಿವ ಸ್ಥಾನಕ್ಕೆ ಅರ್ಜಿ ಹಾಕಿಲ್ಲ ಎಂದು ಕುಮಾರ್‌ ಬಂಗಾರಪ್ಪ ಸ್ಪಷ್ಟನೆ ನೀಡಿದರು.

Tap to resize

Latest Videos

ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದ ಅವಧಿಯಲ್ಲಿ ದೇಶ ಹಾಗೂ ರಾಜ್ಯ ಸಾಕಷ್ಟು ಸಂಕಷ್ಟಎದುರಿಸಿಕೊಂಡು ಬಂದಿದೆ. ಇದರ ನಡುವೆಯೂ ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ಉತ್ತಮ ಆಡಳಿತ ನೀಡಿದ್ದಾರೆ. ಕಳೆದ ವರ್ಷ ಅತಿವೃಷ್ಟಿಯಿಂದಾಗಿ ಸಾಕಷ್ಟುಸಂಕಷ್ಟಅನುಭವಿಸುವಂತಾಯಿತು. ಜೊತೆಗೆ ಆರ್ಥಿಕ ಹಿಂಜರಿತದಿಂದ ನಲುಗುವಂತಾಯಿತು. ಇದೀಗ ಕೊರೋನಾ ಸಾಕಷ್ಟುಸಮಸ್ಯೆ ಹುಟ್ಟುಹಾಕಿದೆ. ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಸಮಸ್ಯೆ ಎದುರಿಸುತ್ತಿದ್ದೇವೆ ಎಂದರು.

ಕಮಲ ಪಾಳಯದಲ್ಲಿ ಅಸಮಾಧಾನ: 'ವಲಸಿಗರಿಂದ ಮೂಲ ಬಿಜೆಪಿಗರಿಗೆ ಅನ್ಯಾಯ, ಜಾರಕಿಹೊಳಿ

ಕೊರೋನಾ ಸಂಕಷ್ಟದ ನಡುವೆಯೂ ಎಸ್‌ಎಸ್‌ಎಲ್ಸಿ ಪರೀಕ್ಷೆ ನಡೆಸುವುದಾಗಿ ಶಿಕ್ಷಣ ಸಚಿವರು ತಿಳಿಸಿದ್ದಾರೆ. ಅವರ ಕ್ರಮ ಸ್ವಾಗತಾರ್ಹ. ಆದರೆ ಪರೀಕ್ಷೆ ನಡೆಸುವಾಗ ಸಾಕಷ್ಟುಮುನ್ನೆಚ್ಚರಿಕೆ ವಹಿಸಬೇಕು. ಮಲೆನಾಡಿನಲ್ಲಿ ಮಳೆಗಾಲ ಆರಂಭವಾಗುತ್ತದೆ. ಈ ಸಂದರ್ಭದಲ್ಲಿ ಎಸ್‌ಎಸ್‌ಎಲ್ಸಿ ಪರೀಕ್ಷೆ ನಡೆಯುತ್ತಿದೆ. ವಿದ್ಯಾರ್ಥಿಗಳಿಗೆ ಯಾವುದೇ ಸಮಸ್ಯೆ ಆಗದಂತೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಅಭಿಪ್ರಾಯಿಸಿದರು.

click me!