ಸಂಸದರ ಆದರ್ಶ ಗ್ರಾಮ ಯೋಜನೆ ಅನುಷ್ಠಾನಗೊಳಿಸಿ

By Kannadaprabha News  |  First Published Feb 15, 2023, 6:16 AM IST

ಸಂಸದರ ಆದರ್ಶ ಗ್ರಾಮ ಯೋಜನೆಯಡಿ ಕನಕಪುರ ತಾಲೂಕಿನ ಕೋಡಿಹಳ್ಳಿ ಹಾಗೂ ಮಾಗಡಿ ತಾಲೂಕಿನ ಮಾದಿಗೊಂಡನಹಳ್ಳಿ ಗ್ರಾಮಗಳು ಆಯ್ಕೆಯಾಗಿದೆ ಎಂದು ಜಿಪಂ ಸಿಇಒ ದಿಗ್ವಿಜಯ ಬೋಡ್ಕೆ ತಿಳಿಸಿದರು.


ರಾಮನಗರ: ಸಂಸದರ ಆದರ್ಶ ಗ್ರಾಮ ಯೋಜನೆಯಡಿ ಕನಕಪುರ ತಾಲೂಕಿನ ಕೋಡಿಹಳ್ಳಿ ಹಾಗೂ ಮಾಗಡಿ ತಾಲೂಕಿನ ಮಾದಿಗೊಂಡನಹಳ್ಳಿ ಗ್ರಾಮಗಳು ಆಯ್ಕೆಯಾಗಿದೆ ಎಂದು ಜಿಪಂ ಸಿಇಒ ದಿಗ್ವಿಜಯ ಬೋಡ್ಕೆ ತಿಳಿಸಿದರು.

ನಗ​ರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಸಂಸದರ ಆದರ್ಶ ಗ್ರಾಮ ಯೋಜನೆಯಡಿ ಆಯ್ಕೆಯಾಗಿರುವ ಕನಕಪುರ ತಾಲೂಕಿನ ಕೋಡಿಹಳ್ಳಿ ಹಾಗೂ ಮಾಗಡಿ ತಾಲೂಕಿನ ಮಾದಿಗೊಂಡನಹಳ್ಳಿ ಗ್ರಾಮ ಪಂಚಾಯಿತಿಗಳಲ್ಲಿ ಯೋಜನೆಯ ಅನುಷ್ಠಾನ ಕುರಿತು ಹಮ್ಮಿಕೊಂಡಿದ್ದ ಸಭೆಯಲ್ಲಿ ಮಾತನಾಡಿದ ಅವರು, ತಾ​ಲೂಕು ಹಾಗೂ ಜಿಲ್ಲಾ ಮಟ್ಟದ ಅ​ಧಿಕಾರಿಗಳು ಈ ಯೋಜನೆಯ ಕುರಿತು ರೂಪುರೇಷೆಗಳು ಹಾಗೂ ಉದ್ದೇಶಗಳನ್ನು ಜನರಿಗೆ ತಿಳಿಸಬೇಕು. ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲು ಕ್ರಿಯಾ ಯೋಜನೆಯನ್ನು ಸಿದ್ದಪಡಿಸುವಂತೆ ತಿಳಿಸಿದರು.

Tap to resize

Latest Videos

ಗ್ರಾಮ ಪಂಚಾಯಿತಿಗಳಲ್ಲಿ ವಿವಿಧ ಇಲಾಖೆ ವತಿಯಿಂದ ಹಮ್ಮಿಕೊಳ್ಳಬಹುದಾದ ಯೋಜನೆಗಳ ಕುರಿತು ವರದಿಗಳನ್ನು ಜರೂರಾಗಿ ಸಲ್ಲಿಸುವಂತೆ ತಿಳಿಸಿದರು. ಯೋಜನೆಗಳು ಜನರಿಗೆ ತಲುಪುವಂತಿರಬೇಕು. ಒಳ್ಳೆಯ ಗುಣಮಟ್ಟಹೊಂದಿರಬೇಕು ಹಾಗೂ ತೃಪ್ತಿದಾಯಕ ಯೋಜನೆಯಾಗಿರಬೇಕು. ಅಧಿಕಾರಿಗಳು ಗ್ರಾಮ ಸಭೆಗಳಲ್ಲಿ ಭಾಗವಹಿಸಿ ಜನರ ಬೇಡಿಕೆಗಳ ವಿವರಗಳನ್ನು ಪಡೆದು ಅದರಂತೆ ಯೋಜನೆಗಳನ್ನು ರೂಪಿಸಬೇಕು. ಅಧಿಕಾರಿಗಳು ಎಸ್‌ಎನ್‌ಜಿ ಮೂಲಕ ಮನೆ ಮನೆಗೆ ಭೇಟಿ ನೀಡಿ ಮಹಿಳೆಯರು, ಪುರುಷರು, ವಿಧವೆಯರು ವಿಕಲಚೇತನರು, ನಿರುದ್ಯೋಗಿಗಳ ಕುರಿತು ಮಾಹಿತಿಯನ್ನು ಸಂಗ್ರಹಿಸಿ. ಭೇಟಿ ನೀಡಿದ ಸಂದರ್ಭದಲ್ಲಿ ನಿರುದ್ಯೋಗಿಗಳು ಇದ್ದಲ್ಲಿ ಅವರ ವಿದ್ಯಾಭ್ಯಾಸದ ಅನುಗುಣವಾಗಿ ಅವರಿಗೆ ಕೌಶಲ್ಯ ತರಬೇತಿ ನೀಡಲು ಕ್ರಮವಹಿಸುವಂತೆ ತಿಳಿಸಿದರು.

ಕೃಷಿ, ತೋಟಗಾರಿಕೆ, ಅರಣ್ಯ, ಆರೋಗ್ಯ ಹಾಗೂ ಇತರೆ ಇಲಾಖೆಗಳಿಂದ ಸಮಗ್ರ ಚಟುವಟಿಕೆಗಳನ್ನು ಕೈಗೊಳ್ಳಬೇಕು ಹಾಗೂ ರೈತರ ಆದಾಯವನ್ನು ದುಪ್ಪಟ್ಟಆಗುವಂತೆ ಹಾಗೂ ರೈತರಿಗೆ ಅರಿವು ಮೂಡಿಸುವಂತಹ ಬೀದಿನಾಟಗಳನ್ನು ಪ್ರದರ್ಶಿಸಲು ಕ್ರಮವಹಿಸಬೇಕು ಎಂದು ದಿಗ್ವಿ​ಜಯ್‌ ಬೋಡ್ಕೆ ಹೇಳಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್‌ ಉಪಕಾರ್ಯದರ್ಶಿ ರಮೇಶ್‌, ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಜನರ ಸಹಕಾರ ಅಗತ್ಯ

ಮಂಡ್ಯ (ಸೆ.19) : ಜಿಲ್ಲೆಯಲ್ಲಿ ಇಂಡುವಾಳು ಗ್ರಾಮವನ್ನು ಆದರ್ಶ ಗ್ರಾಮವನ್ನಾಗಿ ಮಾಡಲು ಗ್ರಾಮಸ್ಥರ ಸಹಕಾರ ಅಗತ್ಯ ಎಂದು ಸಂಸದೆ ಸುಮಲತಾ ಅಂಬರೀಶ್‌ ಹೇಳಿದರು. ತಾಲೂಕಿನ ಇಂಡವಾಳು ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಆವರಣದಲ್ಲಿ ನಡೆದ ಸಂಸದರ ಆದರ್ಶ ಗ್ರಾಮ ಯೋಜನೆ ಅನುಷ್ಠಾನ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಅಧಿವೇಶನದಲ್ಲಿ ಯಾವ ಶಾಸಕರು ಏನು ಮಾತನಾಡಿದ್ದಾರೆ?: ದಳಪತಿಗಳ ವಿರುದ್ಧ ಹರಿಹಾಯ್ದ ಸುಮಲತಾ

ಇಂಡುವಾಳು ಗ್ರಾಮವನ್ನು ಸಂಸದರ ಆದರ್ಶ ಗ್ರಾಮ ಯೋಜನೆಯಡಿ ಆಯ್ಕೆ ಮಾಡಿಕೊಂಡಿದ್ದು, ಗ್ರಾಮದ ಸಮಸ್ಯೆಗಳು ಹಾಗೂ ಬೇಡಿಕೆಗಳು ಇದ್ದಲ್ಲಿ ಗಮನಕ್ಕೆ ತರುವಂತಹ ಕೆಲಸ ಮಾಡಿ. ಈ ಯೋಜನೆಯಡಿ ಇರುವ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ತಿಳಿಸಿದರು. ರಸ್ತೆ, ಒಳಚರಂಡಿ, ಶಾಲೆ, ಪ್ರವಾಸಿ ತಾಣಗಳು, ವಸತಿ, ಸ್ಮಶಾನ, ಶೌಚಾಲಯ ಹಾಗೂ ಇನ್ನಿತರೆ ಕಾಮಗಾರಿಗಳನ್ನು ಆದರ್ಶ ಗ್ರಾಮದ ಯೋಜನೆಯಡಿ ತೆಗೆದುಕೊಳ್ಳಲು ಅವಕಾಶವಿದೆ. ಸಂಬಂಧಿಸಿದ ಇಲಾಖೆಗಳು ಕ್ರಮ ಕೈಗೊಳ್ಳಲು ಸೂಚನೆ ನೀಡಿದರು. ಜಲ ಜೀವನ್‌ ಮೀಷನ್‌ ಯೋಜನೆ ಪ್ರತಿ ಮನೆಗೂ ನೀರು ತಲುಪುವ ಯೋಜನೆಯಾಗಿದೆ. ಈ ಯೋಜನೆ ಕ್ರಮಬದ್ಧವಾಗಿ ಅನುಷ್ಠಾನವಾಗಬೇಕು ಎಂದು ನುಡಿದರು.

ಜಿಪಂ ಸಿಇಒ ಶಾಂತ ಎಲ್‌.ಹುಲ್ಮನಿ ಮಾತನಾಡಿ, ಇಂಡುವಾಳು ಗ್ರಾಮದಲ್ಲಿ ಉತ್ತಮ ಯೋಜನೆಗಳನ್ನು ರೂಪಿಸಿ ಇತರೆ ಗ್ರಾಮಗಳಿಗೆ ಮಾದರಿಯಾಗಿ ಸಂಪೂರ್ಣ ಅಭಿವೃದ್ಧಿಯಾಗುವಂತೆ ಮಾಡಬೇಕು. ಇದೇ ಆದರ್ಶ ಗ್ರಾಮದ ಪರಿಕಲ್ಪನೆ. ಅಭಿವೃದ್ಧಿ ಕೆಲಸಗಳ ಜೊತೆ, ಲಿಂಗ ಸಮಾನತೆ, ಸ್ತ್ರೀಯರನ್ನು ಗೌರವಿಸುವುದು, ಸಾಮಾಜಿಕ ನ್ಯಾಯವನ್ನು ಖಾತ್ರಿಪಡಿಸಿಕೊಳ್ಳುವುದು, ಕಾಯಕವೇ ಕೈಲಾಸ, ಸ್ವಚ್ಛತೆಯ ಸಂಸ್ಕೃತಿಯನ್ನು ಉತ್ತೇಜಿಸುವುದು, ಪ್ರಕೃತಿಯೊಂದಿಗೆ ಸ್ಪಂದಿಸುತ್ತಾ ಪರಿಸರ ಮತ್ತು ವಿಜ್ಞಾನದ ಸಮತೋಲನವನ್ನು ಖಾತರಿಪಡಿಸಿಕೊಳ್ಳುವುದು, ಸ್ಥಳೀಯ ಸಾಂಸ್ಕೃತಿಕ ಪರಂಪರೆಯನ್ನು ಉಳಿಸಿ ಉತ್ತೇಜಿಸುವುದು, ಗ್ರಾಮದಲ್ಲಿ ಶಾಂತಿ ಮತ್ತು ಸಾಮರಸ್ಯವನ್ನು ಬೆಳೆಸುವ ಮೌಲ್ಯಯುತ ಕೆಲಸಗಳು ಸಹ ನಡೆಯಬೇಕು ಎಂದರು.

click me!