ಡಿ.30ಕ್ಕೆ ಕಾಂಗ್ರೆಸ್‌ ಅಭ್ಯರ್ಥಿಗಳ ಆಯ್ಕೆಗೆ ಮಹತ್ವದ ಸಭೆ

By Kannadaprabha News  |  First Published Dec 29, 2022, 6:03 AM IST

ಕೆಪಿಸಿಸಿ ಸೂಚನೆ ಮೇರೆಗೆ ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳ ಕಾಂಗ್ರೆಸ್‌ ಅಭ್ಯರ್ಥಿಗಳ ಆಯ್ಕೆ ಸಂಬಂಧ ಡಿ. 30ರಂದು ಶುಕ್ರವಾರ ಜಿಲ್ಲಾ ಕಾಂಗ್ರೆಸ್‌ ಚುನಾವಣಾ ಸಮಿತಿ ಸಭೆ ನಡೆಯಲಿದೆ.


  ಚಿಕ್ಕಬಳ್ಳಾಪುರ (ಡಿ. 29):  ಕೆಪಿಸಿಸಿ ಸೂಚನೆ ಮೇರೆಗೆ ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳ ಕಾಂಗ್ರೆಸ್‌ ಅಭ್ಯರ್ಥಿಗಳ ಆಯ್ಕೆ ಸಂಬಂಧ ಡಿ. 30ರಂದು ಶುಕ್ರವಾರ ಜಿಲ್ಲಾ ಕಾಂಗ್ರೆಸ್‌ ಚುನಾವಣಾ ಸಮಿತಿ ಸಭೆ ನಡೆಯಲಿದೆ.

ನಗರದ ಹೊರ ವಲಯದ ನಂದಿ ಕ್ರಾಸ್‌ ಬಳಿ ಇರುವ ಶ್ರೀ ಕೃಷ್ಣ ಕನ್ವೆನ್ಷನ್‌ ಹಾಲ್‌ನಲ್ಲಿ ಚುನಾವಣಾ ಸಮಿತಿ ಸಭೆ ನಿಗದಿಯಾಗಿದ್ದು ಈ ಹಿನ್ನೆಲೆಯಲ್ಲಿ ಮಂಗಳವಾರ ನಗರದ ಹೊರ ವಲಯದ ಪ್ರವಾಸಿ ಮಂದಿರದಲ್ಲಿ ಪೂರ್ವಭಾವಿಯಾಗಿ ಮಾಜಿ ಸಿಎಂ ಎಂ.ವೀರಪ್ಪ ಮೊಯ್ಲಿ ಸಭೆ ಸಿದ್ಧತೆಗಳ ಕುರಿತು ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಕೇಶವರೆಡ್ಡಿ ಜೊತೆ ಚರ್ಚೆ ನಡೆಸಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕ ಎಂ.ಶಿವಾನಂದ್‌, ಕೆಪಿಸಿಸಿ ಸದಸ್ಯ ವಿನಯ್‌ ಶಾಮ್‌, ಮುಖಂಡರಾದ ವಕೀಲ ನಾರಾಯಣಸ್ವಾಮಿ, ಹನುಮಂತಪ್ಪ, ಸುಮಿತ್ರಮ್ಮ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Tap to resize

Latest Videos

ರಾಮಲಿಂಗಾರೆಡ್ಡಿ ನೇತೃತ್ವ

5 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ (Congress)  ಅಭ್ಯರ್ಥಿಗಳ ಆಯ್ಕೆ ಸಂಬಂದ ನಡೆಯಲಿರುವ ಜಿಲ್ಲಾ ಮಟ್ಟದ ಚುನಾವಣಾ (Ekection)  ಸಮಿತಿಯು ಜಿಲ್ಲೆಯ ಉಸ್ತುವಾರಿಗಳಾದ ಮಾಜಿ ಸಚಿವ ರಾಮಲಿಂಗಾ ರೆಡ್ಡಿರವರ ನೇತೃತ್ವದಲ್ಲಿ ಆಯೋಜಿಸಲಾಗಿದೆ. ವಿಶೇಷವಾಗಿ ಸಭೆಯಲ್ಲಿ ಜಿಲ್ಲಾ ಉಸ್ತುವಾರಿಗಳಾದ ಮಾಜಿ ಸಂಸದ ವಿ.ಎಸ್‌.ಉಗ್ರಪ್ಪ, ಎ ಐ ಸಿ ಸಿ. ಕಾರ್ಯದರ್ಶಿಗಳಾದ ಅಭಿಷೇಕ್‌ ದತ್‌ ಜಿಲ್ಲೆಯನ್ನು ಪ್ರತಿನಿಧಿಸುವ ಕೆ.ಪಿ.ಸಿ.ಸಿ ಉಪಾಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು , ಮಾಜಿ ಲೋಕಸಭಾ ಸದಸ್ಯರು ಜಿಲ್ಲೆಯ ಎಲ್ಲಾ ಕ್ಷೇತ್ರದ ಹಾಲಿ ಮತ್ತು ಮಾಜಿ ಶಾಸಕರು ಭಾಗವಹಿಸುವರು.

ಹಲವು ಮುಖಂಡರು ಜೆಡಿಎಸ್ ಸೇರ್ಪಡೆ

 ಸಿದ್ದರಾಮಯ್ಯನವರ ನಾಮಬಲದ ಮೇಲೆ ಚುನಾವಣೆ ಗೆಲ್ಲುತ್ತಿದ್ದ ಮಾಜಿ ಶಾಸಕರು ಬಳಿಕ ಅಭಿವೃದ್ಧಿ ನಿರ್ಲಕ್ಷಿಸುತ್ತಿದ್ದರು ಎಂದು ಶಾಸಕ ಕೆ. ಮಹದೇವ್‌ ಆರೋಪಿಸಿದರು.

ತಾಲೂಕಿನ ಆರ್‌.ಡಿ. ಕೊಪ್ಪಲು ಗ್ರಾಮದ ಮುಖಂಡರನ್ನು ಜೆಡಿಎಸ್‌ಗೆ ಬರಮಾಡಿಕೊಂಡು ಅವರು ಮಾತನಾಡಿದರು.

ಕಳೆದ ಎರಡು ವಿಧಾನಸಭಾ ಚುನಾವಣೆಗಳಲ್ಲಿ ಸೋತರು ತಾಲೂಕಿನ ನಿಷ್ಠಾವಂತ ಜೆಡಿಎಸ್‌ ಕಾರ್ಯಕರ್ತರು ನನ್ನ ಕೈಬಿಡದೆ ಪಕ್ಷ ಸಂಘಟನೆಗೆ ಒತ್ತು ನೀಡಿ ಮೂರನೇ ಬಾರಿಗೆ ಚುನಾವಣೆಯಲ್ಲಿ ಗೆಲ್ಲಿಸಿ ಶಾಸಕನಾಗಿ ಆಯ್ಕೆ ಮಾಡಿದರು, ಅವರ ಪರಿಶ್ರಮಕ್ಕೆ ಅಗೌರವ ಆಗದಂತೆ ತಾಲೂಕಿನ ಪ್ರತಿಯೊಂದು ಹಳ್ಳಿಗೂ ಪಕ್ಷಾತೀತ ಜಾತ್ಯತೀತವಾಗಿ ಅಭಿವೃದ್ಧಿಗೆ ಅನುದಾನ ಮಂಜೂರು ಮಾಡಿಸಿದ್ದೇನೆ, ಕಾರ್ಯಕರ್ತರು ಪಕ್ಷದ ಆಸ್ತಿ ಅವರು ಚುನಾವಣೆ ವೇಳೆ ಮತದಾರರಿಗೆ ನೀಡಿದ ಆಶ್ವಾಸನೆಗಳನ್ನು ಈಡೇರಿಸಿದ್ದೇನೆ, ಚುನಾವಣೆ ಸಂದರ್ಭ ಕಾರ್ಯಕರ್ತರು ವೈಮನಸ್ಸು ಬಿಟ್ಟು ಸಂಘಟಿತರಾಗಿ ಮತ್ತೊಮ್ಮೆ ತಾಲೂಕಿನಲ್ಲಿ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಕರ್ತವ್ಯ ನಿರ್ವಹಿಸುವಂತೆ ಕೋರಿ ಪಕ್ಷ ಸೇರ್ಪಡೆಯಾದವರನ್ನು ಸ್ವಾಗತಿಸಿದರು.

ಜೆಡಿಎಸ್‌ ಅಧಿಕಾರಕ್ಕೆ ಬಂದರೆ ರೈತರಿಗೆ ಸಾಲದಿಂದ ಮುಕ್ತಿ: ಸಿ.ಎಂ.ಇಬ್ರಾಹಿಂ

ಜೆಡಿಎಸ್‌ ಕಾರ್ಯಾಧ್ಯಕ್ಷ ಆರ್‌.ಎಲ್ ಮಣಿ ಮಾತನಾಡಿದರು. ಗ್ರಾಮದ ಚಂದ್ರೇಗೌಡ, ಜಯರಾಮ…, ಸ್ವಾಮಿ, ಗೌರೀಶ್‌, ಗಂಗಾಧರ್‌, ಪಾಪಣ್ಣ, ಸಂತೋಷ್‌, ಪ್ರಕಾಶ್‌ ಸೇರಿದಂತೆ ಹಲವರು ಶಾಸಕರ ಸಮ್ಮುಖ ಜೆಡಿಎಸ್‌ ಸೇರಿದರು.  ಜೆಡಿಎಸ್‌ ತಾಲೂಕು ಅಧ್ಯಕ್ಷ ಅಣ್ಣಯ್ಯಶೆಟ್ಟಿ, ಗ್ರಾಪಂ ಸದಸ್ಯ ಕುಮಾರ್‌, ಮುಖಂಡರಾದ ರವಿ, ಕೆಂಡಗಣ್ಣ, ನಾಗಪ್ಪ, ಮಹದೇವ್‌, ಮಲ್ಲೇಶ್‌, ಹೊನ್ನಾಳಿಗೌಡ, ಗ್ರಾಮಸ್ಥರು ಇದ್ದರು.

JDS ಪಟ್ಟಿ ಬಿಡುಗಡೆ

 2023ನೇ ಸಾಲಿನ ಕರ್ನಾಟಕ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಜೆಡಿಎಸ್‌ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಮತ್ತು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ರಾಜ್ಯದ 93 ವಿಧಾನಸಭಾ ಕ್ಷೇತ್ರಗಳ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ. ರಾಜ್ಯದಲ್ಲಿ ಒಟ್ಟು 224 ವಿಧಾನಸಭಾ ಕ್ಷೇತ್ರಗಳಿದ್ದು, ಎಲ್ಲ ಕ್ಷೇತ್ರಗಳಲ್ಲಿಯೂ ಸ್ಪರ್ಧೆ ಮಾಡುವುದಾಗಿ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದರು. 

ಈಗ ಮೊದಲ ಹಂತದಲ್ಲಿ 93 ಕ್ಷೇತ್ರಗಳ ಅಭ್ಯರ್ಥಿಗಳನ್ನು ಬಿಡುಗಡೆ ಮಾಡಿದ್ದು, ಮುಂದಿನ ದಿನಗಳಲ್ಲಿ ಉಳಿದ ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುವುದಾಗಿ ಬೆಂಗಳೂರಿನಲ್ಲಿ ಕುಮಾರಸ್ವಾಮಿ ತಿಳಿಸಿದ್ದಾರೆ. ಇನ್ನು ಈ ಎಲ್ಲ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡುವ ಮುನ್ನ ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ ಅವರ ಅನುಮತಿಯನ್ನೂ ಪಡೆಯಲಾಗಿದೆ ಎಂದು ಹೇಳಿದರು.

Mandya: ಡಿ.24ಕ್ಕೆ ಮೇಲುಕೋಟೆಗೆ ಪಂಚರತ್ನ ರಥಯಾತ್ರೆ: ಶಾಸಕ ಸಿ.ಎಸ್‌.ಪುಟ್ಟರಾಜು

ನಿಖಿಲ್‌ ಕುಮಾರಸ್ವಾಮಿಗೆ ಟಿಕೆಟ್‌ ಫಿಕ್ಸ್: ಕಳೆದ ವಿಧಾನಸಭಾ ಕ್ಷೇತ್ರದ ಚುನಾವಣೆಯ ವೇಳೆ ಕುಮಾರಸ್ವಾಮಿ ಅವರು ರಾಮನಗರ ಮತ್ತು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಗಳಿಂದ ಸ್ಪರ್ಧಿಸಿ ಗೆದ್ದು ನಂತರ, ರಾಮನಗರ ವಿಧಾನಸಭಾ ಕ್ಷೇತ್ರದಿಂದ ಪತ್ನಿ ಅನಿತಾ ಕುಮಾರಸ್ವಾಮಿ ಅವರನ್ನು ನಿಲ್ಲಿಸಿ ಗೆಲ್ಲಿಸಿದ್ದರು. ಆದರೆ, ಈ ಬಾರಿ ಅನಿತಾ ಕುಮಾರಸ್ವಾಮಿ ಅವರು ತನ್ನ ಮಗನಿಗೆ ಕ್ಷೇತ್ರ ತ್ಯಾಗ ಮಾಡುವುದಾಗಿ ತಿಳಿಸಿದ್ದರು. ಅದರಂತೆ ಈಗ ನಿಖಿಲ್‌ ಕುಮಾರಸ್ವಾಮಿ ಅವರಿಗೆ ರಾಮನಗರ ವಿಧಾನಸಭಾ ಕ್ಷೇತ್ರದ ಟಿಕೆಟ್‌ ಘೋಷಣೆ ಮಾಡಲಾಗಿದೆ.

click me!