ತಾಲೂಕಿನ ಯಮಕನಮರಡಿ ಕ್ಷೇತ್ರದಲ್ಲಿ ಕಳಪೆ ಕಾಮಗಾರಿಯಾದಲ್ಲಿ ಸಂಬಂಧಿಸಿದ ಅಧಿಕಾರಿಗಳು ಹಾಗೂ ಗುತ್ತಿಗೆದಾರರನ್ನು ಹೊಣೆಗಾರನ್ನಾಗಿ ಮಾಡಲಾಗುವುದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷರೂ ಆದ ಶಾಸಕ ಸತೀಶ ಜಾರಕಿಹೊಳಿ ಖಡಕ್ ಎಚ್ಚರಿಕೆ ನೀಡಿದರು.
ಹುಕ್ಕೇರಿ (ಆ.10): ತಾಲೂಕಿನ ಯಮಕನಮರಡಿ ಕ್ಷೇತ್ರದಲ್ಲಿ ಕಳಪೆ ಕಾಮಗಾರಿಯಾದಲ್ಲಿ ಸಂಬಂಧಿಸಿದ ಅಧಿಕಾರಿಗಳು ಹಾಗೂ ಗುತ್ತಿಗೆದಾರರನ್ನು ಹೊಣೆಗಾರನ್ನಾಗಿ ಮಾಡಲಾಗುವುದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷರೂ ಆದ ಶಾಸಕ ಸತೀಶ ಜಾರಕಿಹೊಳಿ ಖಡಕ್ ಎಚ್ಚರಿಕೆ ನೀಡಿದರು. ಇಲ್ಲಿನ ತಾಪಂ ಸಭಾಭವನದಲ್ಲಿ ಮಂಗಳವಾರ ನಡೆದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಮಾತನಾಡಿದ ಅವರು, ಯಾವುದೇ ಕಾರಣಕ್ಕೂ ಸರ್ಕಾರಿ ಕಾಮಗಾರಿಗಳಲ್ಲಿ ಕಳಪೆ ಮಟ್ಟದ ಕಾಮಗಾರಿ ಕಂಡು ಬಂದಲ್ಲಿ ನಿರ್ದಾಕ್ಷೀಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ವಾರ್ನಿಂಗ್ ಮಾಡಿದರು.
ತಾಪಂ, ಜಿಪಂ, ಲೋಕೋಪಯೋಗಿ ಹಾಗೂ ನೀರಾವರಿ ಇಲಾಖೆಯಿಂದ ಯಮಕನಮರಡಿ ಕ್ಷೇತ್ರದಲ್ಲಿ ಕೈಗೊಂಡಿರುವ ಕಾಮಗಾರಿಗಳಲ್ಲಿ ಅಂದಾಜು ಪತ್ರಿಕೆಯಂತೆ ಗುಣಮಟ್ಟಕಾಯ್ದುಕೊಳ್ಳಬೇಕು. ಒಂದು ವೇಳೆ ಗುಣಮಟ್ಟದಲ್ಲಿ ಕಳಪೆಯಾದರೆ ಸಂಬಂಧಿಸಿದ ಅಧಿಕಾರಿಗಳು ಮತ್ತು ಗುತ್ತಿಗೆದಾರರಿಗೆ ಜವಾಬ್ದಾರಿಯಾಗಿದ್ದಾರೆ ಎಂದು ಅವರು ಹೇಳಿದರು.
ಕ್ರಾಂತಿವೀರ ರಾಯಣ್ಣ ಸೆರೆಯಾದ ಸ್ಥಳ ಡೋರಿ ಹಳ್ಳ
ಉದ್ಯೋಗ ಖಾತರಿ ಯೋಜನೆಯಲ್ಲಿ ಶಾಲಾ ಅಭಿವೃದ್ಧಿಗೆ ಸಂಬಂಧಿಸಿದ 30-40 ಲಕ್ಷ ರು.ಗಳ ಹೆಚ್ಚುವರಿ ಕಾಮಗಾರಿಗಳನ್ನು ಕೂಡಲೇ ಕೈಗೆತ್ತಿಕೊಳ್ಳಬೇಕು. ಜೆಜೆಎಂ ಯೋಜನೆಯಲ್ಲಿ ಪ್ರತಿ ಮನೆ ಮನೆಗೂ ನಳ ಸಂಪರ್ಕ ಮಾಡಬೇಕು. ನೆರೆಹಾವಳಿ ಸಂತ್ರಸ್ತರ ಮನೆಗಳ ಸಮೀಕ್ಷೆಯನ್ನು ಪಾರದರ್ಶಕವಾಗಿ ಮಾಡಬೇಕು. ಬಸವ ವಸತಿ, ಅಂಬೇಡ್ಕರ ವಸತಿ ಯೋಜನೆಗಳಲ್ಲಿ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಬೇಕು ಎಂದು ಅವರು ಹೇಳಿದರು. ತಹಸೀಲ್ದಾರ್ ಡಿ.ಎಚ್.ಹೂಗಾರ, ತಾಪಂ ಇಒ ಉಮೇಶ ಸಿದ್ನಾಳ, ಮುಖಂಡರಾದ ಕಿರಣ ರಜಪೂತ, ದಸ್ತಗೀರ ಬಸ್ಸಾಪೂರಿ ಮತ್ತಿತರರು ಉಪಸ್ಥಿತರಿದ್ದರು.
ಬಿಜೆಪಿ ಶಾಸಕರಿಗೆ ಗೌನ್ ಉಡುಗೊರೆ: ಬೆಳಗಾವಿ ಮಹಾನಗರ ಪಾಲಿಕೆ ಮೇಯರ್, ಉಪಮೇಯರ್ ಚುನಾವಣೆ ವಿಳಂಬವಾಗಿರುವ ಹಿನ್ನೆಲೆಯಲ್ಲಿ ಸ್ಥಳೀಯ ಬಿಜೆಪಿ ಶಾಸಕರಿಗೆ ಆ.9ರಂದು ಕಾಂಗ್ರೆಸ್‌ನಿಂದ ಗೌನ್ ಉಡುಗೊರೆ ನೀಡಲಾಗುವುದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು. ಶನಿವಾರ ಕಾಂಗ್ರೆಸ್ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಸಭೆಯ ಚುನಾವಣೆ ಮುಗಿಯುವವರೆಗೂ ಮೇಯರ್, ಉಪಮೇಯರ್ ಆಯ್ಕೆಯಾಗುವುದಿಲ್ಲ. ಈಗಾಗಲೇ ಅನಧಿಕೃತವಾಗಿ ಬೆಳಗಾವಿಯ ಸ್ಥಳೀಯ ಶಾಸಕರು ಮೇಯರ್, ಉಪಮೇಯರ್ ಆಗಿದ್ದಾರೆ.
ಅವರಿಗೆ ಆ.9ರಂದು ಬೆಳಗಾವಿಗೆ ಬರುತ್ತಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಕಾರ್ಯಕ್ರಮದಲ್ಲಿ ಮೇಯರ್, ಉಪಮೇಯರ್ ಗೌನ್ ಉಡುಗೊರೆ ಕಳುಹಿಸಿಕೊಡಲಾಗುವುದು ಎಂದು ತಿಳಿಸಿದರು. ಪಾಲಿಕೆಯ ಬಿಜೆಪಿ ಸದಸ್ಯರೇ ಮೇಯರ್, ಉಪಮೇಯರ್ ಆಯ್ಕೆಯಾಗದಿದ್ದಕ್ಕೆ ಅಸಮಾಧಾನ ಇದ್ದಾರೆ ಎನ್ನುವ ಮಾಹಿತಿ ಇದೆ. ಪಾಲಿಕೆಯ ಬಿಜೆಪಿ ಸದಸ್ಯರು ಕಾಂಗ್ರೆಸ್‌ಗೆ ಸೇರ್ಪಡೆಯಾಗುತ್ತೇವೆ ಎಂದು ನಮ್ಮ ಬಳಿ ಬಂದಿಲ್ಲ. ಅವರು ಚರ್ಚೆ ನಡೆಸಿರುವ ಮಾಹಿತಿ ಇದೆ ಎಂದರು.
ಬಿಜೆಪಿ ನಾಯಕರೇ ವಾಹನ ಕಳುಹಿಸಿಕೊಟ್ಟಿದ್ದಾರೆ: ದಾವಣಗೆರೆಯಲ್ಲಿ ಸಿದ್ದರಾಮಯ್ಯ ಅಮೃತ್ ಮಹೋತ್ಸವ ಕಾರ್ಯಕ್ರಮ ಕಾಂಗ್ರೆಸ್‌ಗೆ ಶಕ್ತಿ ನೀಡಿದೆ. ಅದೊಂದು ಐತಿಹಾಸಿಕ ಸಮಾವೇಶ. ಇದು ಕಾರ್ಯಕರ್ತರಲ್ಲಿ ಹೊಸ ಹುಮ್ಮಸ್ಸು ತುಂಬಿದೆ. ಬಿಜೆಪಿ ಮಾಡುವ ಆರೋಪದಲ್ಲಿ ಯಾವುದೇ ಹುರುಳಿಲ್ಲ. ಸಿದ್ದರಾಮಯ್ಯನವರ ಅಮೃತ ಮಹೋತ್ಸವಕ್ಕೆ ಬಿಜೆಪಿ ನಾಯಕರೇ ವಾಹನ ಕಳುಹಿಸಿಕೊಟ್ಟಿದ್ದಾರೆ ಎಂದು ಬಿಜೆಪಿಗೆ ತಿರುಗೇಟು ನೀಡಿದರು.
ಇನ್ಮುಂದೆ ಚಿಲ್ಲರೆ ಸಮಸ್ಯೆ ಇರಲ್ಲ; ಬಸ್‌ನಲ್ಲಿ ಟಿಕೆಟ್ ಬದಲು ಬರಲಿದೆ ಸ್ಮಾರ್ಟ್ ಕಾರ್ಡ್!
ಕಾಂಗ್ರೆಸ್‌ನಲ್ಲಿ ಎಷ್ಟೇ ಪ್ರಭಾವಿ ನಾಯಕರಿದ್ದರೂ ಪಕ್ಷಕ್ಕೆ ಮುಜುಗರ ತರುವ ಹೇಳಿಕೆ ನೀಡದರೆ ಕ್ರಮ ಕೈಗೊಳ್ಳಲಾಗುವುದು ಎಂದು ಹೈಕಮಾಂಡ ಸಂದೇಶ ನೀಡಿದೆ. ಈಗಾಗಲೇ ರಾಜ್ಯಾದ್ಯಂತ ಪಾದಯಾತ್ರೆ ನಡೆದಿದೆ. ಆ.9ರಂದು ಕಾಂಗ್ರೆಸ್ ಭವನದಲ್ಲಿ ಸಮಾರೋಪ ಸಮಾವೇಶ ಮಾಡಲಾಗುವುದು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.