ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿಗೆ ವಿದ್ಯುಕ್ತ ಚಾಲನೆ: ಸ್ಪರ್ಧಾಳುಗಳಲ್ಲಿ ಕ್ರೀಡಾ ಮನೋಭಾವನೆ ಮುಖ್ಯ

By Govindaraj SFirst Published Sep 11, 2023, 9:23 PM IST
Highlights

ಕ್ರೀಡೆಗಳು ನಮ್ಮ ಜೀವನದಲ್ಲಿ ಮಹತ್ವದವಾದ ಪಾತ್ರ ವಹಿಸುತ್ತಿದ್ದು, ಸ್ಪರ್ಧಾಳುಗಳು ಕ್ರೀಡಾ ಮನೋಭಾವನೆ ಬೆಳೆಸಿಕೊಳ್ಳುವುದು ಮುಖ್ಯವಾಗಿದೆ ಎಂದು ಮುಧೋಳ ತಹಶೀಲ್ದಾರ ವಿನೋದ ಹತ್ತಳ್ಳಿ ಹೇಳಿದರು.

ವರದಿ: ಮಲ್ಲಿಕಾರ್ಜುನ ಹೊಸಮನಿ, ಏಷ್ಯಾನೆಟ್ ಸುವರ್ಣನ್ಯೂಸ್, ಬಾಗಲಕೋಟೆ

ಬಾಗಲಕೋಟೆ (ಸೆ.11): ಕ್ರೀಡೆಗಳು ನಮ್ಮ ಜೀವನದಲ್ಲಿ ಮಹತ್ವದವಾದ ಪಾತ್ರ ವಹಿಸುತ್ತಿದ್ದು, ಸ್ಪರ್ಧಾಳುಗಳು ಕ್ರೀಡಾ ಮನೋಭಾವನೆ ಬೆಳೆಸಿಕೊಳ್ಳುವುದು ಮುಖ್ಯವಾಗಿದೆ ಎಂದು ಮುಧೋಳ ತಹಶೀಲ್ದಾರ ವಿನೋದ ಹತ್ತಳ್ಳಿ ಹೇಳಿದರು. ಮುಧೋಳ ನಗರದ ದಾನಮ್ಮದೇವಿ ಕಲ್ಯಾಣ ಮಂಟಪದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಶಾಲಾ ಶಿಕ್ಷಣ ಇಲಾಖೆ ಹಾಗೂ ತಾಲೂಕಾ ಆಡಳಿತ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿಗೆ ಚಾಲನೆ ನೀಡಿ, ಕ್ರೀಡಾ ಜ್ಯೋತಿಯನ್ನು ಸ್ವಾಗತಿಸಿ ಮಾತನಾಡಿದ ಅವರು ಕುಸ್ತಿಗೆ ವಿಶೇಷ ಸ್ಥಾನಮಾನವಿದ್ದು, ಶತಮಾನಗಳ ಇತಿಹಾಸವಿದೆ. 

22 ವರ್ಷಗಳ ನಂತರ ಮುಧೋಳ ನಗರದಲ್ಲಿ ಕುಸ್ತಿ ಪಂದ್ಯಾವಳಿ ಆಯೋಜನೆಗೊಳ್ಳುತ್ತಿರುವುದು ಸಂತಸ ತಂದಿದೆ ಎಂದರು. ಕುಸ್ತಿ ಪಂದ್ಯಾವಳಿಯಲ್ಲಿ ಭಾಗವಹಿಸಿ ಎಲ್ಲ ಕ್ರೀಡಾಪಟುಗಳು ಕ್ರೀಡಾ ಮನೋಭಾವನೆಯಿಂದ ಪಾಲ್ಗೊಂಡು ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸಲು ಕರೆ ನೀಡಿದರು. ರಾಜ್ಯ ಮಟ್ಟದಲ್ಲಿ ವಿಜೇತರಾಗಿ ನಂತರ ರಾಷ್ಟ್ರ ಮಟ್ಟದಲ್ಲಿಯೂ ಕೂಡಾ ತಮ್ಮ ಛಾಪವನ್ನು ಮೂಡಿಸಬೇಕು. ಕಾರ್ಯಕ್ರಮ ಯಶಸ್ವಿಗೆ ಈ ಭಾಗದ ಗಣ್ಯ ವ್ಯಕ್ತಿಗಳು, ವಿವಿಧ ಸಂಘ ಸಂಸ್ಥೆಗಳು ಹಾಗೂ ಕ್ರೀಡಾ ಅಭಿಮಾನಿಗಳು ಸಹಾಯಹಸ್ತ ನೀಡಿದ್ದಾರೆ ಎಂದರು.

ಕೆಎಸ್‌ಆರ್‌ಟಿಸಿ ಬಸ್-ಲಾರಿ ನಡುವೆ ಭೀಕರ ಅಪಘಾತ: ಐವರ ದುರ್ಮರಣ

ರಾಜ್ಯದ 26 ಜಿಲ್ಲೆಗಳಿಂದ 1,010 ಕ್ರೀಡಾಪಟುಗಳು ಭಾಗಿ: ಇನ್ನು ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಬಿ.ಕೆ.ನಂದನೂರ ಅವರು ಎರಡು ದಿನಗಳ ಕಾಲ ನಡೆಯುವ ಕುಸ್ತಿ ಪಂದ್ಯಾವಳಿಯಲ್ಲಿ ಸುಮಾರು 26 ಜಿಲ್ಲೆಗಳಿಂದ 1010 ಕ್ರೀಡಾ ಪಟುಗಳು ಹಾಗೂ ಪ್ರತಿ ಜಿಲ್ಲೆಯಿಂದ ತಂಡದ ವ್ಯವಸ್ಥಾಪಕರು ಭಾಗವಹಿಸಿದ್ದಾರೆ. ಸದರಿ ಪಂದ್ಯಾವಳಿಯಲ್ಲಿ ಸುಮಾರು 50 ಜನ ನಿರ್ಣಾಯಕರಾಗಿ ಆಗಮಿಸಿದ್ದಾರೆ. 

ಕಾಂಗ್ರೆಸ್ ಶಾಸಕರೇ ಬಿಜೆಪಿಗೆ ಬರಲಿದ್ದಾರೆ: ಮಾಜಿ ಶಾಸಕ ಅಪ್ಪಚ್ಚು ರಂಜನ್ ಬಾಂಬ್!

ಕ್ರೀಡಾಪಟುಗಳಿಗೆ ಹಾಗೂ ತಂಡದ ವ್ಯವಸ್ಥಾಪಕರಿಗೆ ತಾಲೂಕಿನ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಇಲಾಖೆಯ ಶಾಲೆಗಳಲ್ಲಿ ವಸತಿ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು, ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಎ.ಆರ್.ಛಬ್ಬಿ, ದೈಹಿಕ ಪರಿವೀಕ್ಷಣಾಕಾರಿ ಎಸ್.ಎಂ.ಕುರೂಗಿ, ಮುಖಂಡರಾದ ಶಿವಕುಮಾರ ಮಲಘಾಣ, ಸಂಗಪ್ಪ ಇಮ್ಮನ್ನವರ, ಉದಯ, ಎಂ.ಡಿ.ದಾಸರ, ಎಂ.ಕೆ.ದಾಸರಡ್ಡಿ, ಅನೀಲ, ಬಸವಂತಪ್ಪ ರಾಟಿ, ಮುದಕಪ್ಪ ಅಂಬಿಗೇರ, ಕಲ್ಮೇಶ ಹನಗೊಂಜಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

click me!