ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಸಂಸದ ಡಿ.ಕೆ. ಸುರೇಶ್ ಅವರ ಆಪ್ತ ಕನಕಪುರ ಕೆಂಪರಾಜು ಮನೆ ಮೇಲೆ ಆದಾಯ ತೆರಿಗೆ ಇಲಾಖೆ (ಐಟಿ) ಅಧಿಕಾರಿಗಳು ದಾಳಿ ಮಾಡಿದ್ದಾರೆ.
ಬೆಂಗಳೂರು (ಏ.14): ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಸಂಸದ ಡಿ.ಕೆ. ಸುರೇಶ್ ಅವರ ಆಪ್ತ ಕನಕಪುರ ಕೆಂಪರಾಜು ಮನೆ ಮೇಲೆ ಆದಾಯ ತೆರಿಗೆ ಇಲಾಖೆ (ಐಟಿ) ಅಧಿಕಾರಿಗಳು ದಾಳಿ ಮಾಡಿದ್ದಾರೆ.
ಲೋಕಸಭಾ ಚುನಾವಣೆ ನಡೆಯುತ್ತಿದ್ದು, ಚುನಾವಣೆ ನಿಮಿತ್ತ ಹಣ ಹಂಚಿಕೆ ಮಾಡಲಾಗುತ್ತಿದೆ ಎಂಬ ಅನುಮಾನದ ಹಿನ್ನೆಲೆಯಲ್ಲಿ ವಿವಿಧೆಡೆ ದೂರು ಬಂದ ಕಡೆಗಳಲ್ಲಿ ಐಟಿ ಇಲಾಖೆ ಅಧಿಕಾರಿಗಳು ದಾಳಿ ಮಾಡುತ್ತಿದ್ದಾರೆ. ಈಗ ಕರ್ನಾಟಕದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಅವರ ಸಹೋದರ ಸಂಸದ ಡಿ.ಕೆ.ಸುರೇಶ್ ಅವರಿಗೆ ಅತ್ಯಾಪ್ತರಾಗಿರುವ ಕನಕಪುರದ ಕೆಂಪರಾಜು ಮನೆಯ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ಮೋದಿ, ಅಮಿತ್ ಶಾ ಅವರೇ ಸಂವಿಧಾನ ಬದಲಾವಣೆ ಮಾತನ್ನು ಅನಂತ್ ಕುಮಾರ್ ಬಾಯಲ್ಲಿ ಹೇಳಿಸಿದ್ದಾರೆ; ಸಿದ್ದರಾಮಯ್ಯ
ಬೆಂಗಳೂರಿನಲ್ಲಿ ಕನಕಪುರ ರಸ್ತೆಯ ವಾಜರ ಹಳ್ಳಿಯಲ್ಲಿರುವ ಕೆಂಪರಾಜು ಮನೆತ ಮೇಲೆ ಐಟಿ ದಾಳಿ ಮಾಡಲಾಗಿದ್ದು, ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ. ಕನಕಪುರ ಕೆಂಪರಾಜು ಈ ಹಿಂದೆ ಯುವ ಕಾಂಗ್ರೆಸ್ ಚುನಾವಣೆಗೂ ಸ್ಪರ್ಧಿಸಿದ್ದರು. ಇವರು ಕನಕಪುರದಲ್ಲಿರುವ ಕೆಂಪರಾಜು ಗ್ರಾನೈಟ್ ಹಾಗೂ ಕ್ರಶರ್ ಸೇರದಂತೆ ಹಲವು ಉದ್ಯಮಗಳನ್ನು ಹೊಂದಿದ್ದಾರೆ. ಎರಡು ಇನೋವಾ ಕಾರಿನಲ್ಲಿ ಬಂದಿರುವ ಐಟಿ ಅಧಿಕಾರಿಗಳು ಬೆಳಗ್ಗೆಯೇ ಕೆಂಪರಾಜು ಮನೆಯ ಮೇಲೆ ದಾಳಿ ಮಾಡಿದ್ದು, ಈವರೆಗೂ ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ ಎಂದು ತಿಳಿದು ಬಂದಿದೆ.