28ರಿಂದ ಶಿಕ್ಷಕರ ಅನಿರ್ದಿಷ್ಟಾವಧಿ ಮುಷ್ಕರ

By Kannadaprabha News  |  First Published Jan 23, 2020, 11:16 AM IST

ಸರ್ಕಾರದ ಮತ್ತು ಅಧಕಾರಿಗಳ ದ್ವಂದ್ವ ನೀತಿಯಿಂದಾಗಿ ಪ್ರಾಥಮಿಕ ಶಾಲಾ ಪದವೀಧರ ಶಿಕ್ಷಕರು ತ್ರಿಶಂಕು ಸ್ಥಿತಿಯಲ್ಲಿದ್ದು ಅನ್ಯಾಯವನ್ನು ಸರಿಪಡಿಸಲು ಆಗ್ರಹಿಸಿ ಅನಿರ್ದಿಷ್ಟವಾಗಿ ಭೋದನೆಯ ಬಹಿಷ್ಕಾರ ಧರಣಿ ಮುಷ್ಕರ ಮಾಡುವುದಾಗಿ ತಿಳಿಸಿದ್ದಾರೆ.


ಚಿಕ್ಕಬಳ್ಳಾಪುರ(ಜ.23):  ಸರ್ಕಾರದ ಮತ್ತು ಅಧಕಾರಿಗಳ ದ್ವಂದ್ವ ನೀತಿಯಿಂದಾಗಿ ಪ್ರಾಥಮಿಕ ಶಾಲಾ ಪದವೀಧರ ಶಿಕ್ಷಕರು ತ್ರಿಶಂಕು ಸ್ಥಿತಿಯಲ್ಲಿದ್ದು ಅನ್ಯಾಯವನ್ನು ಸರಿಪಡಿಸಲು ಆಗ್ರಹಿಸಿ ಅನಿರ್ದಿಷ್ಟವಾಗಿ ಭೋದನೆಯ ಬಹಿಷ್ಕಾರ ಧರಣಿ ಮುಷ್ಕರ ಮಾಡುವುದಾಗಿ ತಿಳಿಸಿದ್ದಾರೆ.

ನಗರದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪ್ರಾಥಮಿಕ ಶಾಲಾ ಪದವಿ ಶಿಕ್ಷಕರ ಸಂಘದ ಅದ್ಯಕ್ಷ ಮುಜಾಫೀರ್ 28 ರ ಮಂಗಳವಾರದಿಂದ ಬೋಧನಾ ಬಹಿಷ್ಕಾರ, ಅನಿರ್ದಿಷ್ಟಾವದಿ ಧರಣಿ ಮುಷ್ಕರ ಮಾಡಲು ಬೆಂಗಳೂರಿನ ಫ್ರೀಡಂ ಪಾರ್ಕ್‌ಗೆ ಸಾಮೂಹಿಕವಾಗಿ ತೆರಳುವುದಾಗಿ ತಿಳಿಸಿದ್ದಾರೆ.

Tap to resize

Latest Videos

ಚಿಕ್ಕಬಳ್ಳಾಪುರ: ಮತದಾರರ ಪಟ್ಟಿಯೇ ಇಲ್ಲದೆ ಅಧಿಸೂಚನೆ!

ನಮ್ಮ ಪದವಿ ಶಿಕ್ಷಕರಿಗೆ ಆದ ಅನ್ಯಾಯದ ಬಗ್ಗೆ ಮುಖ್ಯ ಮಂತ್ರಿಗಳು ಮತ್ತು ಶಿಕ್ಷಣ ಸಚಿವರೊಂದಿಗೆ ನಡೆದ ಮಾತುಕತೆಯಲ್ಲಿ ನಮಗಾದ ಅನ್ಯಾಯ ವನ್ನು ಪರಿಗಣಿಸಿ ಮುಖ್ಯಮಂತ್ರಿಗಳು ನಿಯಮ ತಿದ್ದುಪಡಿಗಾಗಿ ಟಿಪ್ಪಣಿ ಹಾಕಿ ಆದೇಶ ಮಾಡಿದ್ದಾರೆ, ಆದರೆ ಶಿಕ್ಷಣ ಇಲಾಖೆಯ ಐ.ಎ.ಎಸ್ ಅದಿಕಾರಿಗಳು ಈ ಬಗ್ಗೆ ಕ್ರಮ ತೆಗೆದುಕೊಳ್ಳದೆ ಬೇಡಿಕೆಗೆ ಸ್ವಂದಿಸದೆ ಕಾಲ ದೂಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಪತ್ರಿಕಾ ಗೋಷ್ಠಿಯಲ್ಲಿ ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅದ್ಯಕ್ಷ ಮುನಿರಾಜು, ಪಿಳ್ಳಣ್ಣ, ಮುನಿ ನಾರಾಯಣಪ್ಪ, ಪ್ರಸನ್ನ ಕುಮಾರ್, ಶ್ರೀಮತಿ ಸುಮಾ ಅಮರೇಂದ್ರ. ಮುಂತಾದವರು ಇದ್ದರು  

click me!