ಮುಳಬಾಗಲು ಕ್ಷೇತ್ರದ ಪಕ್ಷೇತರ ಶಾಸಕರೂ ಆಗಿರುವ ಜಿಲ್ಲಾ ಉಸ್ತುವಾರಿ ಸಚಿವ ಎಚ್.ನಾಗೇಶ ಅವರು ಬಿಜೆಪಿ ಸೇರುವ ಇಂಗಿತವನ್ನೂ ವ್ಯಕ್ತಪಡಿಸಿದ್ದಾರೆ. ಧಾನಿ ನರೇಂದ್ರ ಮೋದಿ ಅವರ ಕಾರ್ಯವೈಖರಿಯನ್ನು ಹೊಗಳಿದ ಅವರು ಜಿಲ್ಲೆಯಲ್ಲಿ ಬಿಜೆಪಿ ಸದೃಢವಾಗಿ ಬೆಳೆಯಬೇಕು ಎಂದಿದ್ದಾರೆ.
ಕೋಲಾರ(ಡಿ.22): ಮುಳಬಾಗಲು ಕ್ಷೇತ್ರದ ಪಕ್ಷೇತರ ಶಾಸಕರೂ ಆಗಿರುವ ಜಿಲ್ಲಾ ಉಸ್ತುವಾರಿ ಸಚಿವ ಎಚ್.ನಾಗೇಶ ಅವರು ಬಿಜೆಪಿ ಸೇರುವ ಇಂಗಿತವನ್ನೂ ವ್ಯಕ್ತಪಡಿಸಿದ್ದಾರೆ. ಧಾನಿ ನರೇಂದ್ರ ಮೋದಿ ಅವರ ಕಾರ್ಯವೈಖರಿಯನ್ನು ಹೊಗಳಿದ ಅವರು ಜಿಲ್ಲೆಯಲ್ಲಿ ಬಿಜೆಪಿ ಸದೃಢವಾಗಿ ಬೆಳೆಯಬೇಕು ಎಂದಿದ್ದಾರೆ.
ನಗರದಲ್ಲಿ ಪತ್ರಕರ್ತರ ಜತೆ ಮಾತನಾಡಿದ ಸಚಿವರು, ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯವೈಖರಿಯನ್ನು ಹೊಗಳಿದ್ದಾರೆ. ಮಂಗಳೂರು ಗೋಲಿಬಾರ್ ಬಗ್ಗೆ ಪ್ರತಿಕ್ರಿಯಿಸಿ, ಗೋಲಿಬಾರ್ ಘಟನೆ ನಡೆಯಬಾರದಿತ್ತು. ಆದರೆ ಕಾಂಗ್ರೆಸ್ ಮುಖಂಡರು ಮಂಗಳೂರು ಪ್ರವೇಶಿಸುವುದಕ್ಕೆ ಸರ್ಕಾರ ಅವಕಾಶ ನಿರಾಕರಿಸಿರುವುದು ಸರಿಯಾಗಿದೆ ಎಂದು ಎಂದು ಅವರು ಹೇಳಿದ್ದಾರೆ.
ಭಾರತದಲ್ಲಿ ಹೊಂದಾಣಿಕೆ ಸಾಧ್ಯವಿಲ್ಲಾಂದ್ರೆ ಪಾಕ್‌ಗೆ ಹೋಗಬಹುದು ಎಂದ ಶಾಸಕ
ಕೋಲಾರದಲ್ಲಿಯೂ ಸಹ ಪೌರತ್ವ ಕಾಯ್ದೆ ಜಾರಿಯನ್ನು ವಿರೋಧಿಸಿ ಡಿ.23 ರಂದು ಸೋಮವಾರ ನಡೆಸಲು ಉದ್ದೇಶಿಸಿರುವ ಪ್ರತಿ ಭಟನೆಯನ್ನು ಕೈಬಿಡುವಂತೆ ಮನವಿ ಮಾಡಲಾಗಿದೆ. ಈ ನಿಟ್ಟಿನಲ್ಲಿ ಜಿಲ್ಲಾ ಡಳಿತ ಮತ್ತು ಪೊಲೀಸ್ ಇಲಾಖೆಯ ಅಧಿಕಾರಿಗಳು ಮುಸ್ಲಿಂ ಮುಖಂಡರ ಮನವೊಲಿಸುವ ಪ್ರಯತ್ನ ನಡೆಸಿದ್ದಾರೆ ಎಂದು ತಿಳಿಸಿದ್ದಾರೆ.
ಸೂರ್ಯಗ್ರಹಣ: ಬರಿಗಣ್ಣಿನ ವೀಕ್ಷಣೆ ಅಪಾಯ, ಗ್ರಹಣ ನೋಡುವುದು ಹೇಗೆ..?