ಇಂಧನ ಉತ್ಪಾದನೆ, ಇಂಧನ ನೀತಿಗಳ ಬಗ್ಗೆ ಚಿಂತನೆ ನಡೆಯುವ ಬೃಹತ್ ಕಾರ್ಯಕ್ರಮ ‘ಇಂಡಿಯಾ ಎನರ್ಜಿ ವೀಕ್-2023’ಅನ್ನು ಮುಂಬರುವ ಫೆಬ್ರವರಿಯಲ್ಲಿ ಬೆಂಗಳೂರಿ ನಲ್ಲಿ ಆಯೋಜಿಸಲಾಗುತ್ತಿದ್ದು, ಪ್ರಧಾನಿ ಮೋದಿಯವರು ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಹಾವೇರಿ (ಡಿ.19) : ಇಂಧನ ಉತ್ಪಾದನೆ, ಇಂಧನ ನೀತಿಗಳ ಬಗ್ಗೆ ಚಿಂತನೆ ನಡೆಯುವ ಬೃಹತ್ ಕಾರ್ಯಕ್ರಮ ‘ಇಂಡಿಯಾ ಎನರ್ಜಿ ವೀಕ್-2023’ಅನ್ನು ಮುಂಬರುವ ಫೆಬ್ರವರಿಯಲ್ಲಿ ಬೆಂಗಳೂರಿ ನಲ್ಲಿ ಆಯೋಜಿಸಲಾಗುತ್ತಿದ್ದು, ಪ್ರಧಾನಿ ಮೋದಿಯವರು ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಶಿಗ್ಗಾಂವಿ ತಾಲೂಕಿನ ಕೋಣನಕೆರೆ ಗ್ರಾಮದಲ್ಲಿ ಭಾನುವಾರ ವಿಐಎನ್‌ಪಿ ಡಿಸ್ಟಿಲರೀಸ್ ಆ್ಯಂಡ್ ಶುಗರ್ಸ್ ಪ್ರೈವೇಟ್ ಲಿಮಿಟೆಡ್‌ನ ಎಥೆನಾಲ್ ಹಾಗೂ ಸಕ್ಕರೆ ಕಾರ್ಖಾನೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಎನರ್ಜಿ ವೀಕ್ ಕಾರ್ಯಕ್ರಮದಲ್ಲಿ ದೇಶ ವಿದೇಶಗಳಿಂದ ಸುಮಾರು 10 ಸಾವಿರ ಪ್ರತಿನಿಧಿಗಳು ಭಾಗವಹಿಸುತ್ತಿದ್ದು, ಹೆಚ್ಚು ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರಗಳನ್ನು ಹೊಂದಿರುವ ಬೆಂಗಳೂರು ನಗರದಲ್ಲಿ ಇಂಧನ ಸಪ್ತಾಹವನ್ನು ಆಚರಿಸಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ ಎಂದರು.
undefined
ಮುಂದಿನ 50 ವರ್ಷಗಳಲ್ಲಿ ಜೈವಿಕ ಇಂಧನಕ್ಕೆ ಬಹಳ ಬೇಡಿಕೆ ಬರುತ್ತದೆ. ಪರಿಸರ, ಆರ್ಥಿಕತೆ ಹಾಗೂ ಇಂಧನ ಶಕ್ತಿ ಇವುಗಳು ಒಂದಕ್ಕೊಂದು ಬೆಸೆದುಕೊಂಡಿವೆ. ಇವುಗಳ ಸಮತೋಲನವನ್ನು ಕಾಯ್ದುಕೊಳ್ಳುವ ಮೂಲಕ ಆರ್ಥಿಕತೆಯಲ್ಲಿ ಅಭಿವೃದ್ಧಿ ಕಾಣಬಹುದಾಗಿದೆ. ಕರ್ನಾಟಕ ಪ್ರಗತಿಪರ ರಾಜ್ಯವಾಗಿದ್ದು, ದೇಶದ ಮುಂದಿನ ಭವಿಷ್ಯ ಬರೆಯುವ ಕಾರ್ಯ ರಾಜ್ಯದಲ್ಲಾಗುತ್ತಿದೆ. ಕರ್ನಾಟಕ ಇಂದು ಚಿಂತನೆ ಮಾಡಿ ಕಾರ್ಯರೂಪಕ್ಕೆ ತರುವುದನ್ನು ಭಾರತ ನಂತರ ಮಾಡುತ್ತದೆ. ಆ ಶಕ್ತಿ ಕರ್ನಾಟಕ ರಾಜ್ಯಕ್ಕಿದೆ ಎಂದು ಅವರು ದೃಢವಾಗಿ ಹೇಳಿದರು.
ಹಣಕ್ಕಿಂತ ಜ್ಞಾನ ಸಂಪಾದನೆ ಮುಖ್ಯ: ಸಿಎಂ ಬಸವರಾಜ ಬೊಮ್ಮಾಯಿ