ಬೆಂಗಳೂರು-ಮುಂಬೈ ವಂದೇ ಭಾರತ್ ಸ್ಲೀಪರ್ ರೈಲು ಸಂಚರಿಸುವ ಮಾರ್ಗ ಅಂತಿಮ

Published : Apr 14, 2026, 02:53 PM IST
Vande Bharat

ಸಾರಾಂಶ

ಬಹುನಿರೀಕ್ಷಿತ ಬೆಂಗಳೂರು-ಮುಂಬೈ ವಂದೇ ಭಾರತ್ ಸ್ಲೀಪರ್ ರೈಲು ಕಲ್ಯಾಣ ಕರ್ನಾಟಕದ ಕಲಬುರಗಿ, ಸೊಲ್ಲಾಪುರ ಮಾರ್ಗವಾಗಿ ಸಂಚರಿಸಲಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಖಚಿತಪಡಿಸಿದ್ದಾರೆ.

ಹುಬ್ಬಳ್ಳಿ: ಬೆಂಗಳೂರು-ಮುಂಬೈ ವಂದೇ ಭಾರತ್‌ ಸ್ಲೀಪರ್ ರೈಲಿನ ಮಾರ್ಗ ಖಚಿತವಾಗಿದೆ. ಬೆಂಗಳೂರು, ಕಲಬುರಗಿ, ಸೊಲ್ಲಾಪುರ ಮಾರ್ಗವಾಗಿ ಈ ರೈಲು ಸಂಚರಿಸಲಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್‌’ ನಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ರಾಜ್ಯಕ್ಕೆ ಹೊಸ ರೈಲು ನೀಡಿರುವುದಕ್ಕೆ ಪ್ರಧಾನಿ ಮೋದಿ ಹಾಗೂ ರೈಲ್ವೆ ಸಚಿವರಿಗೆ ಧನ್ಯವಾದ ಸಲ್ಲಿಸಿದ್ದಾರೆ. ಈ ರೈಲು ಬೆಂಗಳೂರಿನಿಂದ ಕಲ್ಯಾಣ ಕರ್ನಾಟಕದ ಮಾರ್ಗವಾಗಿ ಸಂಚರಿಸುವಂತೆ ನಾನು ಮನವಿ ಮಾಡಿದ್ದೆ, ನನ್ನ ಮನವಿಗೆ ರೈಲ್ವೆ ಇಲಾಖೆ ಮನ್ನಣೆ ನೀಡಿದೆ ಎಂದು ಜೋಶಿ ಹೇಳಿದ್ದಾರೆ.

ಟ್ವೀಟ್ ಮೂಲಕ ಖಚಿತಪಡಿಸಿದ ಜೋಶಿ

ಬಹುನಿರೀಕ್ಷಿತ ಬೆಂಗಳೂರು ಮುಂಬೈ ವಂದೇ ಭಾರತ್‌ ಸ್ಲೀಪರ್‌ ರೈಲು ಸಂಚಾರ ಮಾರ್ಗ ಎಲ್ಲಿಂದ ಎಂಬುದರ ಕುರಿತು ಖಚಿತ ಪಡಿಸಿರಲಿಲ್ಲ. ಬೆಂಗಳೂರು, ಹುಬ್ಬಳ್ಳಿ, ಬೆಳಗಾವಿ, ಪುಣೆ ಮಾರ್ಗವೋ ಅಥವಾ ಬೆಂಗಳೂರು, ಕಲಬುರಗಿ, ಸೊಲ್ಲಾಪುರ, ಪುಣೆ ಮಾರ್ಗವೋ ಎಂಬ ಗೊಂದಲ ಪ್ರಯಾಣಿಕರಲ್ಲಿತ್ತು. ಸದ್ಯ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಟ್ವೀಟ್‌ ಮಾಡಿ ಯಾವ ಮೂರ್ಗದ ಮೂಲಕ ರೈಲು ಸಂಚರಿಸಲಿದೆ ಎಂಬುದನ್ನು ಖಚಿತಪಡಿಸಿದ್ದಾರೆ.

ಜೋಶಿ ಅವರ ಟ್ವಿಟ್‌ನಲ್ಲೇನಿದೆ?

ನನ್ನ ಮನವಿಗೆ ಸ್ಪಂದಿಸಿ, ನೂತನ ವಂದೇ ಭಾರತ್ ಸ್ಲೀಪರ್ ರೈಲು ಕೆ‌ಎಸ್‌ಆರ್ ಬೆಂಗಳೂರು ನಿಲ್ದಾಣದಿಂದ ಕಲ್ಯಾಣ ಕರ್ನಾಟಕದ ಮೂಲಕ ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಲ್‌ಗೆ ಸಂಚರಿಸಲಿದೆ. ಹಾಗೂ ಬೆಂಗಳೂರಿನಿಂದ ಕರ್ನಾಟಕದ ಮಧ್ಯ ಭಾಗವಾದ ತುಮಕೂರು, ದಾವಣಗೆರೆ, ಹಾವೇರಿ, ಹುಬ್ಬಳ್ಳಿ-ಧಾರವಾಡ ಮತ್ತು ಬೆಳಗಾವಿ ಮಾರ್ಗದ ಮೂಲಕ ವಾಣಿಜ್ಯ ನಗರಿ ಮುಂಬೈಗೆ ತೆರಳಲು ಬೆಂಗಳೂರು- ಮುಂಬೈ ಸೂಪರ್ ಫಾಸ್ಟ್ ರೈಲಿಗೆ ನನ್ನ ಮನವಿಯ ಮೇರೆಗೆ ಈಗಾಗಲೇ ಅನುಮೋದನೆ ನೀಡಲಾಗಿತ್ತು. 

 

 

ಈ ಸೂಪರ್ ಫಾಸ್ಟ್ ರೈಲನ್ನು ಶೀಘ್ರವೇ ಪ್ರಾರಂಭಿಸುವುದಾಗಿ, ತದನಂತರದ ದಿನಗಳಲ್ಲಿ ವಂದೇ ಭಾರತ್ ಸ್ಲೀಪರ್ ರೈಲಾಗಿ ಬದಲಾಯಿಸುವಂತೆ ನನ್ನ ಪ್ರಸ್ತಾವನೆಯನ್ನು ಸಕಾರಾತ್ಮಕವಾಗಿ ಪರಿಗಣಿಸುವುದಾಗಿ ಹೇಳಿರುವ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ರಾಜ್ಯದ ಪರವಾಗಿ ಧನ್ಯವಾದಗಳು ಎಂದು ತಮ್ಮ "ಎಕ್ಸ್‌" ಖಾತೆಯಲ್ಲಿ ಪೋಸ್ಟ್‌ ಮಾಡಿದ್ದಾರೆ.

ಇದನ್ನೂ ಓದಿ: ಕೇವಲ 2 ಗಂಟೆಯಲ್ಲಿ ಬೆಂಗಳೂರಿನಿಂದ ಹುಬ್ಬಳ್ಳಿಗೆ ಪ್ರಯಾಣ; ಗಂಟೆಗೆ 220 ಕಿ.ಮೀ ವೇಗದ ಹೊಸ ರೈಲು!

ಇದನ್ನೂ ಓದಿ: ಬೆಂಗಳೂರು-ಮುಂಬೈ ನಡುವೆ ವಂದೇ ಭಾರತ್ ಸ್ಲೀಪರ್ ರೈಲಿನ ಆಗಮನ ; ಎಷ್ಟು ಸಮಯ ಉಳಿತಾಯ?

 

 

PREV
Read more Articles on
click me!

Recommended Stories

ತುಮಕೂರು ರಾ.ಹೆ.48ರಲ್ಲಿ ನಿಂತಿದ್ದ ಲಾರಿಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ; 35 ಪ್ರಯಾಣಿಕರಿಗೆ ಗಂಭೀರ ಗಾಯ!
ದಾವಣಗೆರೆ ಹರಿಹರ ಪೀಠ ಸಮರ: ವಚನಾನಂದ ಶ್ರೀಗಳ ವಿರುದ್ಧ 'ಮಸಾಜ್‌ ಪ್ರಿಯ' ಆರೋಪ; ಪೊಕ್ಸೊ ಕೇಸ್‌ ಭೀತಿ!