ಹುಬ್ಬಳ್ಳಿ-ಧಾರವಾಡ ಅವಳಿ ನಗರಗಳ ವಿಮಾನಯಾನ ಪ್ರಯಾಣಿಕರಿಗೆ ಶುಭಸುದ್ದಿ. ಹುಬ್ಬಳ್ಳಿಯಿಂದ ಮಂಗಳೂರು ಮತ್ತು ಮೈಸೂರಿಗೆ ಸಂಪರ್ಕ ಒದಗಿಸುವ ವಿಮಾನ ಸೇವೆ ಆರಂಭಿಸಲು ಇಂಡಿಗೋ ವಿಮಾನಯಾನ ಸಂಸ್ಥೆ ಮುಂದೆ ಬಂದಿದೆ.
ಹುಬ್ಬಳ್ಳಿ (ಏ.08): ಹುಬ್ಬಳ್ಳಿ-ಧಾರವಾಡ ಅವಳಿ ನಗರಗಳ ವಿಮಾನಯಾನ ಪ್ರಯಾಣಿಕರಿಗೆ (Passengers) ಶುಭಸುದ್ದಿ. ಹುಬ್ಬಳ್ಳಿಯಿಂದ (Hubballi) ಮಂಗಳೂರು (Mangaluru) ಮತ್ತು ಮೈಸೂರಿಗೆ (Mysuru) ಸಂಪರ್ಕ ಒದಗಿಸುವ ವಿಮಾನ ಸೇವೆ (Flight Service) ಆರಂಭಿಸಲು ಇಂಡಿಗೋ ವಿಮಾನಯಾನ ಸಂಸ್ಥೆ ಮುಂದೆ ಬಂದಿದೆ. ಮೇ 1ರಿಂದ ವಾರದಲ್ಲಿ 4 ದಿನ ಮಂಗಳೂರಿಗೆ ಮತ್ತು ಮೇ 3ರಿಂದ ವಾರದಲ್ಲಿ 3 ದಿನ ಮೈಸೂರಿಗೆ ವಿಮಾನ ಹಾರಾಟ ಆರಂಭಗೊಳ್ಳಲಿದೆ. ಕೇಂದ್ರ ಸಂಸದೀಯ ವ್ಯವಹಾರ, ಗಣಿ ಮತ್ತು ಕಲ್ಲಿದ್ದಲು ಖಾತೆ ಸಚಿವ ಪ್ರಹ್ಲಾದ್ (Pralhad Joshi) ಜೋಶಿಯವರು ಇಂಡಿಗೋ ವಿಮಾನಯಾನ ಸಂಸ್ಥೆಗೆ ಮಾಡಿದ ಮನವಿಗೆ ಸ್ಪಂದಿಸಿದ ಇಂಡಿಗೋ (IndiGo) ಸಂಸ್ಥೆಯವರು ಇದೇ ಮೇ 1ರಿಂದ ವಾರದಲ್ಲಿ 4 ದಿನ ವಿಮಾನ ಸೇವೆ ಆರಂಭಿಸಲಿದೆ.
ಈ ವಿಚಾರವನ್ನು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಮ್ಮ ಫೇಸ್‌ಬುಕ್ (Facebook) ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಕೇಂದ್ರ ಸರ್ಕಾರ ಹುಬ್ಬಳ್ಳಿ ವಿಮಾನ ನಿಲ್ದಾಣವನ್ನು ಸುಸಜ್ಜಿತ ನಿಲ್ದಾಣವನ್ನಾಗಿ ಮಾರ್ಪಡಿಸಿದೆ. ಹುಬ್ಬಳ್ಳಿಯಿಂದ ಮೈಸೂರು, ಮಂಗಳೂರು ನಗರಗಳಿಗೆ ವಿಮಾನ ಯಾನ ಸೇವೆ ಅವಶ್ಯಕವಾಗಿತ್ತು. ಬಹುದಿನ ಬೇಡಿಕೆಗೆ ಇಂದು ಚಾಲನೆ ನೀಡಲಾಗುತ್ತಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳು, ಗಣಿ ಮತ್ತು ಕಲ್ಲಿದ್ದಲು ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ಇದನ್ನು ಸಾಧ್ಯವಾಗಿಸಿದ ಕೇಂದ್ರ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧ್ಯಾ (Jyotiraditya Scindia) ಮತ್ತು ಇಂಡಿಗೋದ ಆಡಳಿತ ವರ್ಗಕ್ಕೆ ಸಚಿವ ಜೋಶಿಯವರು ಹೃತ್ಪೂರ್ವಕ ಧನ್ಯವಾದಗಳನ್ನು ತಿಳಿಸಿದ್ದಾರೆ.
2 ವರ್ಷಗಳ ಬಳಿಕ ಅಂತಾರಾಷ್ಟ್ರೀಯ ವಿಮಾನ ಸಂಚಾರ ಶುರು!
ಹುಬ್ಬಳ್ಳಿಯ ವಿಮಾನ ನಿಲ್ದಾಣಕ್ಕೆ ವಿಂಗ್ಸ್ ಇಂಡಿಯಾ- 2022 ಪ್ರಶಸ್ತಿ: ಉತ್ತರ ಕರ್ನಾಟಕ ಹೆಬ್ಬಾಗಿಲು ಎಂದೇ ಖ್ಯಾತಿ ಪಡೆದ ಹುಬ್ಬಳ್ಳಿಯಲ್ಲಿ ರೈಲು ಹಾಗೂ ಸಾರಿಗೆ ಸೇವೆ ಜನಪ್ರಿಯತೆ ಪಡೆದಿರುವಂತೆ ವಿಮಾನ ಸೇವೆ ಕೂಡ ಸಾಕಷ್ಟು ಜನಪ್ರಿಯತೆ ಪಡೆದುಕೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಉತ್ತಮ ಸೇವೆ ಹಾಗೂ ಸಂಪರ್ಕದ ಮೂಲಕ ಹುಬ್ಬಳ್ಳಿಯ ವಿಮಾನ ನಿಲ್ದಾಣ ವಿಂಗ್ಸ್ ಇಂಡಿಯಾ-2022 ಅತ್ಯುತ್ತಮ ವಿಮಾನ ನಿಲ್ದಾಣ ಎಂಬ ಪ್ರಶಸ್ತಿಯನ್ನು ತನ್ನ ಮುಡಿಗೇರಿಸಿಕೊಂಡಿದೆ. ಹುಬ್ಬಳ್ಳಿಯ ವಿಮಾನ ನಿಲ್ದಾಣಕ್ಕೆ ವಿಂಗ್ಸ್ ಇಂಡಿಯಾ 2022 ಅವರ ಪ್ರಾದೇಶಿಕ ಸಂಪರ್ಕದ ವಿಭಾಗದಲ್ಲಿ ಅತ್ಯುತ್ತಮ ವಿಮಾನ ನಿಲ್ದಾಣ ಪ್ರಶಸ್ತಿ ದೊರಕಿದ್ದು, ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ಟ್ವಿಟರ್ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ.
ವಿಮಾನಯಾನ ಸಚಿವರಾದ ಬೆನ್ನಲ್ಲೇ ಗುಡ್‌ನ್ಯೂಸ್ ನೀಡಿದ ಜ್ಯೋತಿರಾದಿತ್ಯ ಸಿಂಧಿಯಾ!
ಕೋವಿಡ್ ನಂತರದಲ್ಲಿ ಚೇತರಿಕೆ ಕಂಡಿರುವ ಹುಬ್ಬಳ್ಳಿ ವಿಮಾನ ನಿಲ್ದಾಣ ಇತ್ತಿಚೆಗೆ ಕಾರ್ಗೋ ಸೇವೆಯ ಮೂಲಕ ಸರಕು ಸಾಗಾಣಿಕೆಯಲ್ಲಿಯೂ ಸಾಧನೆ ಮಾಡುತ್ತಿದ್ದು, ಪ್ರಯಾಣಿಕರ ಮೆಚ್ಚುಗೆಗೆ ಪಾತ್ರವಾಗಿರುವ ವಿಮಾನ ನಿಲ್ದಾಣವಾಗಿದೆ. ಒಟ್ಟಿನಲ್ಲಿ ಸ್ವಚ್ಚತೆ, ವ್ಯವಸ್ಥಿತ ಪರಿಸರ ಹೀಗೆ ಹಲವಾರು ವಿಷಯ ವಸ್ತಗಳ ಮಾನದಂಡವನ್ನು ಆಧರಿಸಿ ಅತ್ಯುತ್ತಮ ವಿಮಾನ ನಿಲ್ದಾಣ ಎಂಬುವಂತ ಪ್ರಶಸ್ತಿಗೆ ಹುಬ್ಬಳ್ಳಿಯ ವಿಮಾನ ನಿಲ್ದಾಣ ಭಾಜನವಾಗಿರುವುದು ಹುಬ್ಬಳ್ಳಿಯ ಹೆಮ್ಮೆ ವಿಷಯವಾಗಿದೆ.