ಕನ್ನಡಪ್ರಭ ವರದಿ ಫಲಶ್ರುತಿ: ಮುಚ್ಚಿದ್ದ ಇಂದಿರಾ ಕ್ಯಾಂಟೀನ್‌ ಮತ್ತೆ ಆರಂಭ

Published : Sep 04, 2022, 01:35 PM IST
ಕನ್ನಡಪ್ರಭ ವರದಿ ಫಲಶ್ರುತಿ: ಮುಚ್ಚಿದ್ದ ಇಂದಿರಾ ಕ್ಯಾಂಟೀನ್‌ ಮತ್ತೆ ಆರಂಭ

ಸಾರಾಂಶ

ಪತ್ರಿಕೆಯ ಜನಪರವಾದ ಕಾಳಜಿ ಮತ್ತು ಸಾಮಾನ್ಯ ಸಭೆಯಲ್ಲಿ ನಿರ್ಣಯಿಸಿದ ವಿಚಾರಕ್ಕೆ ಆದ್ಯತೆ ನೀಡಿರುವ ರಾಜ್ಯ ಸರ್ಕಾರ ಸ್ಥಗಿತಗೊಂಡಿದ್ದ ಇಂದಿರಾ ಕ್ಯಾಂಟೀನ್‌ ಪ್ರಾರಂಭಿಸಿ ಬಡವರು ಕೂಲಿ ಕಾರ್ಮಿಕರು ಮತ್ತು ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಿದೆ.

ಕೆ.ಆರ್‌. ನಗರ(ಸೆ.04):  ಕಳೆದ ಒಂದು ತಿಂಗಳಿನಿಂದ ಬಾಗಿಲು ಮುಚ್ಚಿದ್ದ ಪಟ್ಟಣದ ಬಯಲು ರಂಗ ಮಂದಿರದ ಆವರಣದಲ್ಲಿರುವ ಇಂದಿರಾ ಕ್ಯಾಂಟೀನ್‌ ಶನಿವಾರದಿಂದ ಆರಂಭವಾಗಿದ್ದು, ಕನ್ನಡಪ್ರಭ ವರದಿಯ ಫಲಶ್ರುತಿ ಪರಿಣಾಮವಾಗಿ ಪುನರಾರಂಭವಾಗಿದೆ. ಆ. 22 ರ ಕನ್ನಡಪ್ರಭ ಸಂಚಿಕೆಯಲ್ಲಿ ಕಳೆದ 20 ದಿನಗಳಿಂದ ಬಾಗಿಲು ಮುಚ್ಚಿರುವ ಇಂದಿರಾ ಕ್ಯಾಂಟೀನ್‌ ಎಂಬ ತಲೆಬರಹದಡಿ ವರದಿ ಪ್ರಕಟವಾಗಿದ್ದ ಹಿನ್ನೆಲೆ ಆ. 23 ರಂದು ನಡೆದ ಪುರಸಭೆ ಸಾಮಾನ್ಯ ಸಭೆಯಲ್ಲಿ ಈ ವಿಚಾರ ವಿಸ್ತೃತವಾಗಿ ಚರ್ಚೆ ಯಾಗಿತ್ತು.

ಪತ್ರಿಕೆಯಲ್ಲಿ ವರದಿ ಪ್ರಕಟವಾದ ಹಿನ್ನೆಲೆ ಪುರಸಭೆ ಅಧ್ಯಕ್ಷ ಪ್ರಕಾಶ್‌ ಮತ್ತು ಸಭೆಯಲ್ಲಿ ಭಾಗವಹಿಸಿದ್ದ ಉಪಾಧ್ಯಕ್ಷರು ಹಾಗೂ ಎಲ್ಲ ಸದಸ್ಯರು ಇಂದಿರಾ ಕ್ಯಾಂಟೀನ್‌ ಮುಚ್ಚಿರುವ ವಿಚಾರದ ಬಗ್ಗೆ ಕಳವಳ ವ್ಯಕ್ತಪಡಿಸುವ ಮೂಲಕ ಈ ಸಂಬಂಧ ಸರ್ಕಾರಕ್ಕೆ ಪತ್ರ ಬರೆದಿದ್ದರು.

ಅದ್ಧೂರಿ ದಸರಾ ಆಚರಣೆಗೆ ಕೈಜೋಡಿಸಿ: ಮೈಸೂರು ಜಿಲ್ಲಾಡಳಿತ ಮನವಿ

ಪತ್ರಿಕೆಯ ಜನಪರವಾದ ಕಾಳಜಿ ಮತ್ತು ಸಾಮಾನ್ಯ ಸಭೆಯಲ್ಲಿ ನಿರ್ಣಯಿಸಿದ ವಿಚಾರಕ್ಕೆ ಆದ್ಯತೆ ನೀಡಿರುವ ರಾಜ್ಯ ಸರ್ಕಾರ ಸ್ಥಗಿತಗೊಂಡಿದ್ದ ಇಂದಿರಾ ಕ್ಯಾಂಟೀನ್‌ ಪ್ರಾರಂಭಿಸಿ ಬಡವರು ಕೂಲಿ ಕಾರ್ಮಿಕರು ಮತ್ತು ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಿದೆ.

ಶನಿವಾರ ಇಂದಿರಾ ಕ್ಯಾಂಟೀನ್‌ ಪುನರಾರಂಭಕ್ಕೆ ಹಸಿರು ನಿಶಾನೆ ತೋರಿದ ಪುರಸಭೆ ಮಾಜಿ ಅಧ್ಯಕ್ಷ ಕೆ.ಜಿ. ಸುಬ್ರಹ್ಮಣ್ಯ ಮತ್ತು ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ನಟರಾಜು ಸಾರ್ವಜನಿಕರು ಇದರ ಪ್ರಯೋಜನ ಪಡೆಯಬೇಕೆಂದು ಕೋರಿದರು.

ಹಿಂದೆ ಇಂದಿರಾ ಕ್ಯಾಂಟಿನ್‌ ಗುತ್ತಿಗೆ ಪಡೆದವರಿಗೆ ಸರ್ಕಾರ ಹಣ ಪಾವತಿಸದ ಹಿನ್ನೆಲೆ ಕ್ಯಾಂಟೀನ್‌ ಸ್ಥಗಿತವಾಗಿತ್ತು, ಆನಂತರ ಕನ್ನಡಪ್ರಭ ಪತ್ರಿಕೆಯಲ್ಲಿ ವರದಿ ಪ್ರಕಟವಾಗಿ ನಾವು ಎಚ್ಚೆತ್ತುಕೊಂಡು ಈ ವಿಚಾರವನ್ನು ಸರ್ಕಾರದ ಗಮನಕ್ಕೆ ತಂದ ಹಿನ್ನೆಲೆಯಲ್ಲಿ ಮತ್ತೆ ಪುನರಾರಂಭವಾಗಿದ್ದು, ಈ ವಿಚಾರದಲ್ಲಿ ಕಾಳಜಿ ತೋರಿದ ಪತ್ರಿಕೆಗೆ ಧನ್ಯವಾದ ಸಲ್ಲಿಸುವುದಾಗಿ ಅವರು ತಿಳಿಸಿದರು. ಪುರಸಭಾ ಮುಖ್ಯಾಧಿಕಾರಿ ಡಾ. ಜಯಣ್ಣ ಮಾತನಾಡಿ, ತಾಂತ್ರಿಕ ಕಾರಣಗಳಿಂದ ಸ್ಥಗಿತವಾಗಿದ್ದ ಇಂದಿರಾ ಕ್ಯಾಂಟೀನ್‌ ಎಂದಿನಂತೆ ಆರಂಭವಾಗಿದ್ದು, ಇದಕ್ಕೆ ಕಾರಣರಾದ ಪತ್ರಿಕೆ ಮತ್ತು ಪುರಸಭೆ ಆಡಳಿತ ಮಂಡಳಿಗೆ ಧನ್ಯವಾದ ಸಲ್ಲಿಸುವುದಾಗಿ ನುಡಿದರು. ಪುರಸಭೆ ಮಾಜಿ ಅಧ್ಯಕ್ಷ ಕೆ.ಜಿ. ಸುಬ್ರಹ್ಮಣ್ಯ, ಸದಸ್ಯ ಶಿವುನಾಯಕ್‌, ಮಾಜಿ ಸದಸ್ಯ ಕೆ. ವಿನಯ…, ಕ್ಯಾಂಟೀನ್‌ ಮೇಲ್ವಿಚಾರಕರಾದ ಪ್ರಕಾಶ್‌, ವೆಂಕಟೇಶ್‌ ಇದ್ದರು.
 

PREV
Read more Articles on
click me!

Recommended Stories

ಡಿಕೆಸು ಹೆಸರಿನಲ್ಲಿ ಕೋಟ್ಯಂತರ ವಂಚನೆ ಪ್ರಕರಣ.. 'ಬಂಗಾರಿ' ಕೇಸ್‌ನಲ್ಲಿ ನಟ ಧರ್ಮಗೆ ಧ್ವನಿ ಪರೀಕ್ಷೆ?
ಬೆಳಗಾವಿಯ 31 ಕೃಷ್ಣಮೃಗ ಸಾವಿಗೆ ಸಿಬ್ಬಂದಿ ನಿರ್ಲಕ್ಷ್ಯ ಕಾರಣವಲ್ಲ: ಸಚಿವ ಈಶ್ವರ್ ಖಂಡ್ರೆ