ಇಂದಿರಾ ಕ್ಯಾಂಟೀನ್‌ ಹಿಂದಿನಂತೆ ಸೇವೆ ಸ್ವಾಗತಾರ್ಹ: ರೂಪೇಶ್‌ ಕೃಷ್ಣಯ್ಯ

Published : May 28, 2023, 07:57 AM IST
 ಇಂದಿರಾ ಕ್ಯಾಂಟೀನ್‌ ಹಿಂದಿನಂತೆ ಸೇವೆ ಸ್ವಾಗತಾರ್ಹ: ರೂಪೇಶ್‌ ಕೃಷ್ಣಯ್ಯ

ಸಾರಾಂಶ

ರಾಜ್ಯದ ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್‌ ಸರ್ಕಾರವು ಪ್ರಥಮ ಸಂಪುಟ ಸಭೆಯಲ್ಲಿ ಈ ಹಿಂದಿನಂತೆ ರಾಜಾದ್ಯಂತ ಇಂದಿರಾ ಕ್ಯಾಂಟೀನ್‌ಗಳು ಜನರ ಸೇವೆ ಶುರುಮಾಡಲಿವೆ ಎಂದು ತಿಳಿಸಿರುವುದು ಸ್ವಾಗತಾರ್ಹ ಎಂದು ಬ್ಲಾಕ್‌ ಕಾಂಗ್ರೆಸ್‌ ಉಪಾಧ್ಯಕ್ಷ ರೂಪೇಶ್‌ ಕೃಷ್ಣಯ್ಯ ತಿಳಿಸಿದ್ದಾರೆ.

 ಶಿರಾ: ರಾಜ್ಯದ ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್‌ ಸರ್ಕಾರವು ಪ್ರಥಮ ಸಂಪುಟ ಸಭೆಯಲ್ಲಿ ಈ ಹಿಂದಿನಂತೆ ರಾಜಾದ್ಯಂತ ಇಂದಿರಾ ಕ್ಯಾಂಟೀನ್‌ಗಳು ಜನರ ಸೇವೆ ಶುರುಮಾಡಲಿವೆ ಎಂದು ತಿಳಿಸಿರುವುದು ಸ್ವಾಗತಾರ್ಹ ಎಂದು ಬ್ಲಾಕ್‌ ಕಾಂಗ್ರೆಸ್‌ ಉಪಾಧ್ಯಕ್ಷ ರೂಪೇಶ್‌ ಕೃಷ್ಣಯ್ಯ ತಿಳಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು ನಗರ-ಪಟ್ಟಣಗಳಲ್ಲಿರುವ ಮತ್ತು ಶಿಕ್ಷಣ, ಕಾರ್ಯ ನಿಮಿತ್ತ ನಗರಗಳಿಗೆ ಬರುವ ರೈತರ, ವಿದ್ಯಾರ್ಥಿಗಳ, ಬಡವರ ಹಸಿವು ತಣಿಸುವ ಸದುದ್ದೇಶದಿಂದ ಈ ಹಿಂದೆ ಸಿದ್ದರಾಮಯ್ಯನವರ ನೇತೃತ್ವದ ಸರ್ಕಾರ ಪ್ರಾರಂಭಿಸಿದ್ದ ಇಂದಿರಾ ಕ್ಯಾಂಟೀನ್‌ಗಳನ್ನು ಬಿಜೆಪಿ ಸರ್ಕಾರ ನಿರ್ಲಕ್ಷಿಸಿದ ಕಾರಣದಿಂದಾಗಿ ಕೆಲವು ಮುಚ್ಚಿವೆ, ಹಲವು ಮುಚ್ಚುವ ಸ್ಥಿತಿಯಲ್ಲಿವೆ. ಇಂತಹ ಸಂದರ್ಭದಲ್ಲಿ ಬಡತನ ನಿರ್ಮೂಲನೆಯ ಕಾರ್ಯವನ್ನು ಕಾಳಜಿಯಿಂದ ಮಾಡಿದ್ದ ಮಾಜಿ ಪ್ರಧಾನಿ ಇಂದಿರಾಗಾಂಧಿಯವರ ಹೆಸರಿನ ಇಂದಿರಾ ಕ್ಯಾಂಟಿನ್‌ಗಳನ್ನು ಮುಚ್ಚಲು ನಾವು ಅವಕಾಶ ನೀಡುವುದಿಲ್ಲ. ಅಗತ್ಯ ಸಂಪನ್ಮೂಲ ಒದಗಿಸಿ ಅವುಗಳನ್ನು ಪುನಶ್ಚೇತನಗೊಳಿಸುವುದಕ್ಕೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಹೇಳಿ ಅತಿ ಶೀಘ್ರದಲ್ಲೇ ಇಂದಿರಾ ಕ್ಯಾಂಟೀನ್‌ಗಳು ಸ್ವಸ್ಥ ಮತ್ತು ರುಚಿಕರವಾದ ಊಟ ತಿಂಡಿಗಳೊಂದಿಗೆ ಜನರ ಸೇವೆ ಶುರುಮಾಡಲಿವೆ ಎಂದು ತಿಳಿಸುವ ಮೂಲಕ ಸಿದ್ದರಾಮಯ್ಯನವರು ತಮ್ಮ ಆದ್ಯತೆ ಹಾಗೂ ಕಾಂಗ್ರೆಸ್‌ ಪಕ್ಷ ಶ್ರೀಸಾಮಾನ್ಯರ ಪರ ಎಂದು ಮತ್ತೊಮ್ಮೆ ನಿರೂಪಿಸಿದ್ದಾರೆ ಎಂದು ಹೇಳಿದ್ದಾರೆ

PREV
click me!

Recommended Stories

ಬೆಂಗಳೂರು ಕಬ್ಬನ್‌ಪಾರ್ಕ್‌ ಪುಷ್ಪ ಪ್ರದರ್ಶನಕ್ಕೆ ಇಂದು ತೆರೆ
ಪುಟಿನ್‌ಗೆ ಇಲ್ಲೇ ಎಲೆಕ್ಷನ್‌ ನಿಲ್ಲೋಕೆ ಟಿಕೆಟ್‌ ಕೊಡ್ತಾರೆ ಅಂದ್ಕೊಂಡಿದ್ದೆ.. ಸಂತೋಷ್‌ ಲಾಡ್‌ ಲೇವಡಿ