ಶಿರಾದಲ್ಲಿ ₹1 ಕೋಟಿ ವೆಚ್ಚದಲ್ಲಿ ಒಳಾಂಗಣ ಕ್ರೀಡಾಂಗಣ

By Kannadaprabha News  |  First Published Oct 16, 2023, 8:04 AM IST

ಕ್ರೀಡಾಪಟುಗಳಿಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ಶಿರಾ ನಗರದ ವಿವೇಕಾನಂದ ಕ್ರೀಡಾಂಗಣದಲ್ಲಿ 1 ಕೋಟಿ ರು. ವೆಚ್ಚದಲ್ಲಿ ಒಳಾಂಗಣ ಕ್ರೀಡಾಂಗಣ ನಿರ್ಮಾಣ ಮಾಡಲಾಗುವುದು ರಾಜ್ಯ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ ಹೇಳಿದರು.


 ಶಿರಾ :  ಕ್ರೀಡಾಪಟುಗಳಿಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ಶಿರಾ ನಗರದ ವಿವೇಕಾನಂದ ಕ್ರೀಡಾಂಗಣದಲ್ಲಿ 1 ಕೋಟಿ ರು. ವೆಚ್ಚದಲ್ಲಿ ಒಳಾಂಗಣ ಕ್ರೀಡಾಂಗಣ ನಿರ್ಮಾಣ ಮಾಡಲಾಗುವುದು ರಾಜ್ಯ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ ಹೇಳಿದರು.

ನಗರದ ಕೋಟೆ ಬಳಿ ಶ್ರೀ ವಿವೇಕಾನಂದ ಮತ್ತು ಕ್ರೀಡಾ ಸಂಘದ ವತಿಯಿಂದ ನಡೆದ ರಾಜ್ಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಟೂರ್ನಿಯ ಸಮಾರೋಪ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಶಿರಾದಲ್ಲಿ ರಾಜ್ಯಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿ ಏರ್ಪಡಿಸಿರುವುದು ಶ್ಲಾಘನೀಯ. ರಾಜ್ಯದ ಹಲವು ಜಿಲ್ಲೆಗಳಿಂದ ಆಗಮಿಸಿರುವ ಕ್ರೀಡಾಪಟುಗಳಿಗೆ ಶುಭವಾಗಲಿ ಎಂದು ತಿಳಿಸಿದರು.

Latest Videos

undefined

ನಗರಸಭಾ ಅಧ್ಯಕ್ಷೆ ಪೂಜಾಪೆದ್ದರಾಜು, ಸ್ಥಾಯಿ ಸಮಿತಿ ಅಧ್ಯಕ್ಷ ಎಸ್.ಎಲ್.ರಂಗನಾಥ್, ತಡಕಲೂರು ಗ್ರಾ.ಪಂ ಅಧ್ಯಕ್ಷ ಹರೀಶ್, ಮಾಜಿ ನಗರಸಭಾ ಸದಸ್ಯರಾದ ವಿ.ನಟರಾಜ್, ಕಾಂಗ್ರೆಸ್ ಮುಖಂಡ ಪಾವಗಡ ಎಚ್.ವಿ.ಕುಮಾರಸ್ವಾಮಿ, ಶ್ರೀ ವಿವೇಕಾನಂದ ಸಾಂಸ್ಕೃತಿಕ ಮತ್ತು ಸಂಸ್ಥೆಯ ಸುರೇಶ್, ಮಹಮ್ಮದ್ ಆಲಿ, ಟಿ.ಎಚ್.ಕುಮಾರ್ ಭಾಗವಹಿಸಿದ್ದರು.

ಗುಡಿಸಲು ಮುಕ್ತ ತಾಲೂಕು ಮಾಡುವುದೇ ಗುರಿ

  ಶಿರಾ : ಶಿರಾ ತಾಲೂಕಿನಲ್ಲಿ ಸುಮಾರು 70 ಸಾವಿರ ಕುಟುಂಬಗಳು ವಸತಿ ರಹಿತರಿದ್ದಾರೆ. ಗುಡಿಸಲು ರಹಿತ ತಾಲೂಕು ಮಾಡಬೇಕು ಎಂಬುದು ನನ್ನ ಉದ್ದೇಶವಾಗಿದ್ದು, ಹಂತ ಹಂತವಾಗಿ ಮನೆಗಳನ್ನು ಮಂಜೂರು ಮಾಡಿಸಲಾಗುವುದು ಎಂದು ರಾಜ್ಯ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿಗಳಾದ ಟಿ.ಬಿ.ಜಯಚಂದ್ರ ಹೇಳಿದರು.

ಶುಕ್ರವಾರ ನಗರದ ತಾಲೂಕು ಪಂಚಾಯಿತಿ ಆವರಣದಲ್ಲಿ ಪಿಎಂಎವೈ ಯೋಜನೆಯಡಿ ಸುಮಾರು 817 ಫಲಾನುಭವಿಗಳಿಗೆ ಕಾರ್ಯಾದೇಶ ಪತ್ರ ನೀಡಿ ಮಾತನಾಡಿದ ಅವರು, ಈ ಹಿಂದೆ ಕಾಂಗ್ರೆಸ್ ಸರ್ಕಾರ ಅನೇಕ ರೀತಿಯ ವಸತಿ ಯೋಜನೆಗಳನು ಜಾರಿಗೆ ತಂದಿತ್ತು. ಇಂದಿರಾ ವಸತಿ ಯೋಜನೆ, ಬಸವ ವಸತಿ ಯೋಜನೆ, ಅಂಬೇಡ್ಕರ್ ವಸತಿ ಯೋಜನೆ, ಈ ಯೋಜನೆಗಳ ಮುಖಾಂತರ ಎಲ್ಲಾ ವರ್ಗದ ವಸತಿ ರಹಿತರಿಗೂ ಮನೆಯನ್ನು ಮಂಜೂರು ಮಾಡಲಾಗುತ್ತಿತ್ತು. ಕಳೆದ ಬಾರಿ ನಾನು ಸಚಿವನಾಗಿದ್ದ ಸಂದರ್ಭದಲ್ಲಿ ತಾಲೂಕಿಗೆ ಸುಮಾರು 25 ಸಾವಿರ ಮನೆಗಳನ್ನು ನೀಡಿದ್ದೆವು. ಆದರೆ ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಐದು ವರ್ಷಗಳಲ್ಲಿ ಕೇವಲ  ಮೂರು ಸಾವಿರ ಮನೆಗಳನ್ನು ಮಂಜೂರು ಮಾಡಲಾಗಿದೆ. ಅದಕ್ಕೂ ಸರಿಯಾದ ಹಣ ಬಿಡುಗಡೆಯಾಗಿಲ್ಲ ಎಂದರು.

ಈ ಬಾರಿ ಜನರು ಜನಪರ ಸರ್ಕಾರವನ್ನು ಆಯ್ಕೆ ಮಾಡಿದ್ದೀರಿ. ರಾಜ್ಯವನ್ನು ಗುಡಿಸಲು ಮುಕ್ತ ರಾಜ್ಯವನ್ನಾಗಿಸಬೇಕೆಂಬುದು ಕಾಂಗ್ರೆಸ್ ಪಕ್ಷದ ಸಂಕಲ್ಪವಾಗಿದೆ. ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಶೇಷವಾದ ಕಾಳಜಿಯನ್ನು ತೆಗೆದುಕೊಂಡಿದ್ದು, ಹೆಚ್ಚು ಮನೆಗಳನ್ನು ಮಂಜೂರು ಮಾಡುವ ಕಾರ್ಯ ಮಾಡುತ್ತಿದ್ದು, ಹಂತ ಹಂತವಾಗಿ ಮನೆಗಳು ಮಂಜೂರಾಗಲಿವೆ ಎಂದರು.

ಕಾರ್ಯಕ್ರಮದಲ್ಲಿ ನಾದೂರು ಗ್ರಾ.ಪಂ. ಅಧ್ಯಕ್ಷೆ ರಕ್ಷಿತ, ಮಾಜಿ ಜಿ.ಪಂ. ಸದಸ್ಯ ಅರೆಹಳ್ಳಿ ರಮೇಶ್, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಅನಂತರಾಜು, ಕೆಪಿಸಿಸಿ ಅಲ್ಪಸಂಖ್ಯಾತರ ಘಟಕದ ರಾಜ್ಯ ಉಪಾಧ್ಯಕ್ಷ ಅಬ್ದುಲ್ಲಾ ಖಾನ್ ಸೇರಿದಂತೆ ಹಲವರು ಹಾಜರಿದ್ದರು.

click me!