ಯಾದಗಿರಿ: ಗರ್ಭದಲ್ಲೇ ಶಿಶು ಮರಣ: ವೈದ್ಯರ ನಿರ್ಲಕ್ಷ್ಯ ಆರೋಪ

By Kannadaprabha News  |  First Published Jun 9, 2023, 4:51 AM IST

ಹೆರಿಗೆಗೆಂದು ಆಸ್ಪತ್ರೆಗೆ ತೆರಳಿದ್ದ ವೇಳೆ, ಗರ್ಭದಲ್ಲೇ ಶಿಶು ಮೃತಪಟ್ಟಘಟನೆ ತಾಲೂಕಿನ ಹೊನಗೇರಾ ಪ್ರಾಥಮಿಕ ಆಸ್ಪತ್ರೆಯಲ್ಲಿ ನಡೆದಿದ್ದು, ಇದಕ್ಕೆ ವೈದ್ಯರ ನಿರ್ಲಕ್ಷ ್ಯವೇ ಕಾರಣ ಎಂದು ಕುಟುಂಬಸ್ಥರು ದೂರಿದ್ದಾರೆ.


ಯಾದಗಿರಿ (ಜೂ.9) ಹೆರಿಗೆಗೆಂದು ಆಸ್ಪತ್ರೆಗೆ ತೆರಳಿದ್ದ ವೇಳೆ, ಗರ್ಭದಲ್ಲೇ ಶಿಶು ಮೃತಪಟ್ಟಘಟನೆ ತಾಲೂಕಿನ ಹೊನಗೇರಾ ಪ್ರಾಥಮಿಕ ಆಸ್ಪತ್ರೆಯಲ್ಲಿ ನಡೆದಿದ್ದು, ಇದಕ್ಕೆ ವೈದ್ಯರ ನಿರ್ಲಕ್ಷ ್ಯವೇ ಕಾರಣ ಎಂದು ಕುಟುಂಬಸ್ಥರು ದೂರಿದ್ದಾರೆ. ಆಶನಾಳ ಗ್ರಾಮದ ಗರ್ಭಿಣಿ ಲಕ್ಷ್ಮಿ ಗರ್ಭದಲ್ಲೇ ಶಿಶು ಮೃತಪಟ್ಟಿದೆ. ವೈದ್ಯರು ನಿರ್ಲಕ್ಷ್ಯದಿಂದಾಗಿ ಸಕಾಲಕ್ಕೆ ಸೂಕ್ತ ಚಿಕಿತ್ಸೆ ಸಿಗಲಿಲ್ಲ ಎಂದು ಆರೋಪ ಮಾಡಲಾಗಿದೆ.

ಮೊದಲಿಗೆ ಆಶಾ ಕಾರ್ಯಕರ್ತೆಯು ಇವರನ್ನು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದಿದ್ದರು. ಅಲ್ಲಿ ವೈದ್ಯರು ಇರದ ಹಿನ್ನೆಲೆಯಲ್ಲಿ ಯಾದಗಿರಿ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ ಎನ್ನಲಾಗಿದ್ದು, ಸೋಮವಾರ ರಾತ್ರಿ ಗರ್ಭಿಣಿ ಲಕ್ಷ್ಮಿಯ ಸ್ಕಾ ್ಯನಿಂಗ್‌ ಮಾಡಿಸಿದಾಗ ಹೊಟ್ಟೆಯಲ್ಲಿ ಶಿಶು ಮೃತಪಟ್ಟಿದ್ದ ಬಗ್ಗೆ ತಿಳಿದುಬಂದಿದೆ.

Latest Videos

undefined

ಸಹೋದರನಿಂದ ಗರ್ಭಿಣಿಯಾಗಿದ್ದ ಅಪ್ರಾಪ್ತೆಯ ಮಗು ತೆಗೆಸೋದು ಸರಿಯಲ್ಲ: ಅದು ದೇವರ ಕೊಡುಗೆ ಎಂದು ಮೇಲ್ಮನವಿ ಸಲ್ಲಿಕೆ

ಕೊನೆಗೆ ಮೃತ ಶಿಶುವನ್ನು ಶಸ್ತ್ರಚಿಕಿತ್ಸೆ ಮೂಲಕ ವೈದ್ಯರು ಹೊರ ತೆಗೆದಿದ್ದಾರೆ. ಬಳಿಕ ಬಾಣಂತಿ ಲಕ್ಷ್ಮಿಗೆ ಅಗತ್ಯ ಚಿಕಿತ್ಸೆ ನೀಡಲಾಗಿದೆ. ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ವೈದ್ಯರು ಬಾರದೆ ನಿರ್ಲಕ್ಷ್ಯ ಮಾಡಿದ್ದಾರೆಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಆರೋಗ್ಯ ಅ​ಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಕುಟುಂಬಸ್ಥರು, ತಪ್ಪಿತಸ್ಥ ವೈದ್ಯರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಘಟನೆಯಿಂದ ರೊಚ್ಚಿಗೆದ್ದ ಗ್ರಾಮಸ್ಥರು ಯಾದಗಿರಿ ಜಿಲ್ಲಾಸ್ಪತ್ರೆ ಎದುರು ಪ್ರತಿಭಟನೆ ನಡೆಸಿದರು. ವಿಷಯ ತಿಳಿದ ಶಾಸಕ ಚೆನ್ನಾರೆಡ್ಡಿ ಪಾಟೀಲ ತುನ್ನೂರ, ಆಸ್ಪತ್ರೆಗೆ ಭೇಟಿ ನೀಡಿ ಸಮಸ್ಯೆ ಆಲಿಸಿದ್ದಾರೆ. ಈ ವೇಳೆ, ಶಾಸಕರ ಮುಂದೆ ಗ್ರಾಮಸ್ಥರು ನೋವು ತೋಡಿಕೊಂಡಿದ್ದಾರೆ. ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳುವುದಾಗಿ ಶಾಸಕರು ಭರವಸೆ ನೀಡಿ, ಗ್ರಾಮಸ್ಥರನ್ನು ಸಮಾಧಾನ ಪಡಿಸಿದರು.

ಭ್ರೂಣದ ಹಾರ್ಟ್‌ಗೇ ಸರ್ಜರಿ, ಅಮ್ಮ-ಮಗು ಸೇಫ್, ಜೈ ಹೋ ಡಾಕ್ಟರ್!

click me!