ಇನ್ಫೋಸಿಸ್‌ನಿಂದ 1.5 ಕೋಟಿ ರು. ಸಲಕರಣೆ ವಿತರಣೆ

Kannadaprabha News   | Asianet News
Published : May 22, 2020, 11:02 AM ISTUpdated : May 22, 2020, 11:32 AM IST
ಇನ್ಫೋಸಿಸ್‌ನಿಂದ 1.5 ಕೋಟಿ ರು. ಸಲಕರಣೆ ವಿತರಣೆ

ಸಾರಾಂಶ

ಇಸ್ಫೋಸಿಸ್‌ ಫೌಂಡೇಶನ್‌ ವತಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ ವೆನ್ಲಾಕ್‌ ಆಸ್ಪತ್ರೆ ಮತ್ತು ಪೊಲೀಸ್‌ ಆಯುಕ್ತರ ಕಚೇರಿಗಳಿಗೆ 1.50 ಕೋಟಿ ರು. ಮೌಲ್ಯದ ವೈದ್ಯಕೀಯ ಉಪಕರಣಗಳು ಹಾಗೂ ಸಾಮಗ್ರಿಗಳನ್ನು ಬುಧವಾರ ಹಸ್ತಾಂತರಿಸಲಾಯಿತು.

ಮಂಗಳೂರು(ಮೇ 22): ಇಸ್ಫೋಸಿಸ್‌ ಫೌಂಡೇಶನ್‌ ವತಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ ವೆನ್ಲಾಕ್‌ ಆಸ್ಪತ್ರೆ ಮತ್ತು ಪೊಲೀಸ್‌ ಆಯುಕ್ತರ ಕಚೇರಿಗಳಿಗೆ 1.50 ಕೋಟಿ ರು. ಮೌಲ್ಯದ ವೈದ್ಯಕೀಯ ಉಪಕರಣಗಳು ಹಾಗೂ ಸಾಮಗ್ರಿಗಳನ್ನು ಬುಧವಾರ ಹಸ್ತಾಂತರಿಸಲಾಯಿತು. ಬುಧವಾರ ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿಯಲ್ಲಿ ಇಸ್ಫೋಸಿಸ್‌ ಫೌಂಡೇಶನ್‌ ವತಿಯಿಂದ ಕಿಟ್‌ ವಿತರಣೆ ಕಾರ್ಯಕ್ರಮ ನಡೆಯಿತು.

ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಮಾತನಾಡಿ, ಈ ಮಹತ್ತರ ನೆರವನ್ನು ನೀಡಿದ ಇಸ್ಫೋಸಿಸ್‌ ಫೌಂಡೇಷನ್‌ ಅಧ್ಯಕ್ಷೆ ಸುಧಾಮೂರ್ತಿ ಅವರಿಗೆ ಅಭಿನಂದನೆಗಳನ್ನು ಸಲ್ಲಿಸಿದರು.

ಮುಂಬೈನಿಂದ ಬಂದು ಕ್ವಾರೆಂಟೈನ್‌ನಲ್ಲಿದ್ದಾತ 2 ಗಂಟೆಯಲ್ಲೇ ಆತ್ಮಹತ್ಯೆ

ಇಸ್ಫೋಸಿಸ್‌ ಕೇಂದ್ರಿಯ ಮುಖ್ಯಸ್ಥ ವ್ಯಾಸದೇವ ಕಾಮತ್‌ ಇಸ್ಫೋಸಿಸ್‌ ಕ್ರಾಂತಿ ಮುಖ್ಯಸ್ಥ ಹರೀಶ್‌, ಜಿಲ್ಲಾ ವ್ಯವಸ್ಥಾಪಕ ಡಾ. ಕಿಶೋರ್‌, ಜಿಲ್ಲಾ ಆರೋಗ್ಯಾಧಿಕಾರಿ ಡಾ. ರಾಮಚಂದ್ರ ಬಾಯರಿ, ಜಿಲ್ಲಾ ಪಂಚಾಯಿತಿ ಸ್ಥಾಯೀ ಸಮಿತಿ ಅಧ್ಯಕ್ಷ ರವೀಂದ್ರ ಕಂಬಳಿ ಜಿ.ಪಂ. ಮಾಜಿ ಉಪಾಧ್ಯಕ್ಷ ಸತೀಶ್‌ ಕುಂಪಲ ಇದ್ದರು.

PREV
click me!

Recommended Stories

ಪ್ರಿ ವೆಡ್ಡಿಂಗ್ ಫೋಟೋ ಶೂಟ್ ಮುಗಿಸಿ ಬೈಕ್‌ನಲ್ಲಿ ತೆರಳುತ್ತಿದ್ದ ಜೋಡಿಗೆ ಲಾರಿ ಡಿಕ್ಕಿ, ಸ್ಥಳದಲ್ಲೇ ಸಾವು
ಕಾಂಗ್ರೆಸ್ ಸರ್ಕಾರ ಶೇ.60ರಷ್ಟು ಭ್ರಷ್ಟಾಚಾರದಲ್ಲಿ ಮುಳುಗಿದೆ: ಮಾಜಿ ಸಚಿವ ಬಿ.ಸಿ.ಪಾಟೀಲ್ ಆರೋಪ