ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿಯಲ್ಲಿ ನಡೆದ ಘಟನೆ| ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯ| . ಗಾಯಾಳುಗಳಿಗೆ ಹಗರಿಬೊಮ್ಮನಹಳ್ಳಿಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ|
ವಿಜಯನಗರ(ಫೆ.21): ಖಾಸಗಿ ಬಸ್‌ವೊಂದು ಪಲ್ಟಿಯಾಗಿ ರಸ್ತೆ ಬದಿ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾದ ಘಟನೆ ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿಯಲ್ಲಿ ಇಂದು ಬೆಳಗಿನ ಜಾವ (ಭಾನುವಾರ) ನಡೆದಿದೆ.
ತಾಲೂಕಿನ ಬೆಣ್ಣಿಕಲ್ಲು ಹಾಗೂ ವರಲಹಳ್ಳಿ ನಡುವೆ ಕುಕ್ಕೆಶ್ರೀ ಖಾಸಗಿ ಬಸ್ ರಸ್ತೆ ಬದಿ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ.
ರಸ್ತೆ ಅಪಘಾತದಲ್ಲಿ ಸಾವನ್ನಪ್ಪುತ್ತಿರುವವರಲ್ಲಿ ಶೇ.70 ರಷ್ಟು ಯುವಜನಾಂಗ; ಬೆಚ್ಚಿ ಬೀಳಿಸುತ್ತಿದೆ ವರದಿ!
ಬಸ್ ಪಲ್ಟಿಯಾದ ಪರಿಣಾಮ ಬಸ್‌ನಲ್ಲಿ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಅದೃಷ್ಟವಷಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಗಾಯಾಳುಗಳನ್ನ ಹಗರಿಬೊಮ್ಮನಹಳ್ಳಿಯ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.