ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯಗಳಿಗೆ ಎಲ್ಲ ರಾಷ್ಟ್ರೀಯ ಪಕ್ಷಗಳು ಅನ್ಯಾಯ ಮಾಡಿದ್ದು, ಬಲಾಢ್ಯ ಸಮುದಾಯ ಓಲೈಸಲು 147 ಜಾತಿಗಳಿಗೆ ಅನ್ಯಾಯ ಮಾಡಲಾಗಿದೆ ಎಂದು ಬುಡÜಕಟ್ಟು ಸಮುದಾಯದ ರಾಜ್ಯ ಪ್ರಧಾನ ಕಾರ್ಯದರ್ಶಿ ಕಿರಣ್ ಕುಮಾರ್ ಕೊತ್ತಗೆರೆ ಆರೋಪಿಸಿದರು.
ತುಮಕೂರು : ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯಗಳಿಗೆ ಎಲ್ಲ ರಾಷ್ಟ್ರೀಯ ಪಕ್ಷಗಳು ಅನ್ಯಾಯ ಮಾಡಿದ್ದು, ಬಲಾಢ್ಯ ಸಮುದಾಯ ಓಲೈಸಲು 147 ಜಾತಿಗಳಿಗೆ ಅನ್ಯಾಯ ಮಾಡಲಾಗಿದೆ ಎಂದು ಬುಡಕಟ್ಟು ಸಮುದಾಯದ ರಾಜ್ಯ ಪ್ರಧಾನ ಕಾರ್ಯದರ್ಶಿ ಕಿರಣ್ ಕುಮಾರ್ ಕೊತ್ತಗೆರೆ ಆರೋಪಿಸಿದರು.
ತುಮಕೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅವಕಾಶ ವಂಚಿತರಿಗೆ ಮೀಸಲಾತಿ ಕಲ್ಪಿಸಿದ್ದು, ಎಸ್ಸಿ, ಎಸ್ಟಿ ಬುಡಕಟ್ಟು ಸಮುದಾಯವನ್ನು ನಿರ್ಲಕ್ಷಿಸಿದ್ದು, ಅಲೆಮಾರಿ ಸಮುದಾಯಗಳನ್ನು ರಾಜಕೀಯ ಅಧಿಕಾರದಿಂದ ದೂರ ಇಡಲಾಗಿದೆ. ಜಿಲ್ಲೆಯಲ್ಲಿ 85 ಸಾವಿರ ಸಮುದಾಯದ ಮತಗಳಿದ್ದರೂ ಸಹ ಪ್ರಾತಿನಿಧ್ಯ ಸಿಗುತ್ತಿಲ್ಲ, ಸಂವಿಧಾನದ ತತ್ವಗಳನ್ನು ಗಾಳಿಗೆ ತೂರಲಾಗಿದೆ, ಸಾಮಾಜಿಕ ನ್ಯಾಯಕ್ಕಾಗಿ ಶೋಷಿತ ಸಮುದಾಯಗಳಿಗೆ ರಾಜಕೀಯ ಅಧಿಕಾರ ದೊರಕಿಸಿಕೊಡಬೇಕೆಂದು ಆಗ್ರಹಿಸಿದರು.
ಕಾರ್ಯಾಧ್ಯಕ್ಷ ಆದಶ್‌ರ್ ಚಿನ್ನಯಲ್ಲಪ್ಪ ಮಾತನಾಡಿ,ಸರ್ಕಾರ ಕಲ್ಪಿಸಿರುವ ಒಳ ಮೀಸಲಾತಿ ಅಸಂವಿಧಾನವಾಗಿದ್ದು, ಸುಪ್ರೀಂಕೋರ್ಚ್ ನಿರ್ದೇಶನವಿದ್ದರೂ ಸಹ ಪರಿಶಿಷ್ಟರಲ್ಲಿಯೇ ಒಳ ಮೀಸಲಾತಿ ವರ್ಗೀಕರಣ ಮಾಡಲು ಹೊರಟಿರುವುದು ಖಂಡನೀಯ. ಸಮಾನ ಅವಕಾಶ ವಂಚಿತರಿಗೆ ಅಂಬೇಡ್ಕರ್ ಅವರು ಸಂವಿಧಾನದಲ್ಲಿ ನೀಡಿದ್ದ ಮೀಸಲಾತಿಯನ್ನು ಸಾಮಾಜಿಕ ನ್ಯಾಯದ ಹೆಸರಿನಲ್ಲಿ ಅವೈಜ್ಞಾನಿಕವಾಗಿ ಹಂಚಿಕೆ ಮಾಡಿದ್ದು, ಕೇವಲ 5 ಬಲಾಢ್ಯ ಜಾತಿಗಳಿಗೆ ಮಣೆ ಹಾಕಿ ಉಳಿದ 147 ಜಾತಿ/ಬುಡಕಟ್ಟುಗಳನ್ನು ನಿರ್ಲಕ್ಷಿಸುವ ಸಾಮಾಜಿಕ ನ್ಯಾಯವನ್ನು ಕಗ್ಗೊಲೆ ಮಾಡಲಾಗಿದೆ ಎಂದು ಆರೋಪಿಸಿದರು.
ಜಿಲ್ಲಾಧ್ಯಕ್ಷ ಲೋಕೇಶ್ ಸ್ವಾಮಿ ಮಾತನಾಡಿ, ಜಿಲ್ಲೆಯಲ್ಲಿ ಅಲೆಮಾರಿ ಸಮುದಾಯಗಳಿಗೆ ಮೂಲಸೌಕರ್ಯವನ್ನು ಒದಗಿಸಲು ವಿಫಲವಾಗಿರುವ ಜನಪ್ರತಿನಿಧಿಗಳ ವಿರುದ್ಧವಾಗಿ ಮತ ನೀಡುವಂತೆ ಕರೆ ನೀಡಲಾಗಿದ್ದು, ಜನಪ್ರತಿನಿಧಿಗಳ ಇಚ್ಛಾಶಕ್ತಿಯ ಕೊರತೆಯಿಂದ ಅಲೆಮಾರಿ ಸಮುದಾಯಗಳು ಇಂದಿಗೂ ಕಷ್ಟದಲ್ಲಿವೆ ಎಂದರು. ಚಿಕ್ಕನಾಯಕನಹಳ್ಳಿಯಲ್ಲಿ ಅಲೆಮಾರಿ ಸಮುದಾಯಗಳು ಮಳೆಯಿಂದ ಸಂಕಷ್ಟಕ್ಕೆ ಸಿಲುಕಿದಾಗ ಪರಾರಯಯ ಜಾಗವನ್ನು ಗುರುತಿಸುವುದಾಗಿ ನೀಡಿದ್ದ ಭರವಸೆ ಇನ್ನು ಈಡೇರಿಲ್ಲ, ಜಿಲ್ಲೆಯಲ್ಲಿರುವ ಎಲ್ಲ ಅಲೆಮಾರಿಗಳ ಪರಿಸ್ಥಿತಿ ಹೀಗೆಯೇ ಇದ್ದು ಸ್ವತಂತ್ರ್ಯ ಬಂದು ಇಷ್ಟುವರ್ಷಗಳಾದರೂ ಅಲೆಮಾರಿಗಳಿಗೆ ಪ್ರಾತಿನಿಧ್ಯ ದೊರೆತಿಲ್ಲ ಎಂದರು.
ಮಹದೇವಯ್ಯ, ಅಮಲಾಪುರ ಕೇಶವ್, ದಯಾನಂದ್ ಸುದ್ದಿಗೋಷ್ಠಿಯಲ್ಲಿದ್ದರು.
ಸಭೆಗೆ ಗೈರಾಗಿದ್ದಕ್ಕೆ ವಿಶೇಷ ಅರ್ಥ ಬೇಡ
ಬೆಂಗಳೂರು (ಏ.19): ‘ಕಾಂಗ್ರೆಸ್‌ನ ಭಾರತ್ ಜೋಡೋ ಭವನ ಉದ್ಘಾಟನೆಗೆ ಗೈರಾದ ಬಗ್ಗೆ ವಿಶೇಷ ಅರ್ಥ ಕಲ್ಪಿಸಬೇಕಾಗಿಲ್ಲ. ನಾನು ಅರ್ಧ ದಾರಿಗೆ ಬಂದು ನಮ್ಮ ಕ್ಷೇತ್ರದಲ್ಲಿ ಅಪಘಾತವಾದ್ದರಿಂದ ವಾಪಸು ತೆರಳಿದೆ. ಕೋಲಾರದ ರಾಹುಲ್ ಗಾಂಧಿ ಸಮಾವೇಶಕ್ಕೆ ಬರುವುದಿಲ್ಲ ಮೊದಲೇ ಹೇಳಿದ್ದೆ’ ಎಂದು ಕೆಪಿಸಿಸಿ ಪ್ರಣಾಳಿಕೆ ಸಮಿತಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ಕೆಪಿಸಿಸಿ ಕಚೇರಿ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನಾನು ರಾಹುಲ್ ಗಾಂಧಿ ಅವರ ಎರಡೂ ಕಾರ್ಯಕ್ರಮಗಳಲ್ಲಿ ಭಾಗವಹಿಸಿಲ್ಲ ಎಂಬ ಕಾರಣಕ್ಕೆ ವಿಶೇಷ ಅರ್ಥ ಕಲ್ಪಿಸಲಾಗುತ್ತಿದೆ. ಕಾಂಗ್ರೆಸ್ ಭವನ ಉದ್ಘಾಟನೆ ಕಾರ್ಯಕ್ರಮಕ್ಕೆ ಆಗಮಿಸಲು ನಾನು ಅರ್ಧ ದಾರಿಗೆ ಬಂದಿದ್ದೆ.
ಆದರೆ ನಮ್ಮ ಕ್ಷೇತ್ರದಲ್ಲಿ ಅಪಘಾತ ಉಂಟಾಗಿ ನಾನು ಅಲ್ಲಿಗೆ ತೆರಳಲೇಬೇಕಾದ ಅನಿವಾರ್ಯತೆ ಇದ್ದಿದ್ದರಿಂದ ವಾಪಸು ಹೋದೆ’ ಎಂದು ಸ್ಪಷ್ಟನೆ ನೀಡಿದರು. ಭವನದ ಕೆಲಸ ನಾನೇ ಶೇ.80 ರಷ್ಟುಮುಗಿಸಿದ್ದೆ. ಹೀಗಾಗಿ ನಾನು ಭವನ ಉದ್ಘಾಟನೆಗೆ ಉದ್ದೇಶಪೂರ್ವಕವಾಗಿ ಗೈರಾಗಲು ಸಾಧ್ಯವೇ ಇಲ್ಲ. ನನ್ನ ಗೈರು ಹಾಜರಿಗೆ ವಿಶೇಷ ಅರ್ಥ ಕಲ್ಪಿಸಬೇಕಾಗಿಲ್ಲ. ‘ಇನ್ನು ಕೋಲಾರ ಸಮಾವೇಶಕ್ಕೆ ಬರುವುದಿಲ್ಲ ಎಂದು ಮೊದಲೇ ಹೇಳಿದ್ದೆ. ನಮ್ಮ ಕ್ಷೇತ್ರದಲ್ಲಿ ಚುನಾವಣಾ ಕೆಲಸ ನೋಡಿಕೊಳ್ಳಬೇಕು. ಪ್ರಚಾರ ಕಾರ್ಯ ನಡೆಸಬೇಕು. ಹೀಗಾಗಿ ಬರುವುದಿಲ್ಲ ಎಂದು ಮೊದಲೇ ತಿಳಿಸಿದ್ದೆ’ ಎಂದು ಸ್ಪಷ್ಟಪಡಿಸಿದರು.
ಸಚಿವ ಅಶೋಕ್ ವಿರುದ್ಧ ಕಾಂಗ್ರೆಸ್‌ನಿಂದ ಪ್ರತಿಸ್ಪರ್ಧಿ ಯಾರು?: ಕುತೂಹಲ
ನಾಲ್ಕು ಮಂದಿ ಹೆಚ್ಚು ಬಾರಿ ಶಾಸಕರಾಗಿ ಆಯ್ಕೆ: ತುಮಕೂರು ಜಿಲ್ಲೆಯಲ್ಲಿ ಈವರೆಗೆ ಅತಿ ಹೆಚ್ಚು ಬಾರಿ ಶಾಸಕರಾಗಿ ಆಯ್ಕೆಯಾದ ಕೀರ್ತಿ ನಾಲ್ವರು ಜನಪ್ರತಿನಿಧಿಗೆ ಸಲ್ಲುತ್ತದೆ. ಅವರ ಪೈಕಿ ಜಯಚಂದ್ರ, ಡಾ.ಜಿ.ಪರಮೇಶ್ವರ್, ಸೊಗಡು ಶಿವಣ್ಣ ಹಾಗೂ ಎಸ್.ಆರ್. ಶ್ರೀನಿವಾಸ್ ಅವರೇ ಹೆಚ್ಚು ಬಾರಿ ವಿಧಾನಸಭೆಗೆ ಆಯ್ಕೆಯಾದವರು. 1989ರಲ್ಲಿ ಮೊದಲ ಬಾರಿಗೆ ಡಾ. ಜಿ. ಪರಮೇಶ್ವರ್ ಅವರು ಮಧುಗಿರಿ ಮೀಸಲು ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾದರು. ಅಂದು ನಡೆದ ಚುನಾವಣೆಯಲ್ಲಿ ಅವರು ಜನತಾದಳದ ರಾಜವರ್ಧನ್ ಅವರನ್ನು ಪರಾಭವಗೊಳಿಸಿದ್ದರು. ಆ ಚುನಾವಣೆಯಲ್ಲಿ ಪರಮೇಶ್ವರ್ ಅವರು 47 ಸಾವಿರದ 477 ಮತಗಳನ್ನು ಪಡೆದಿದ್ದರು.
1994ರಲ್ಲಿ ನಡೆದ ಚುನಾವಣೆಯಲ್ಲಿ ಅವರು ಜನತಾದಳದ ಗಂಗಹನುಮಯ್ಯ ಅವರ ವಿರುದ್ಧ ಪರಾಭವಗೊಂಡರು. ಅಂದಿನ ಚುನಾವಣೆಯಲ್ಲಿ ಪರಮೇಶ್ವರ್ ಅವರು ಶೇ. 40.52 ಅಂದರೆ 42 ಸಾವಿರದ 131 ಮತಗಳನ್ನು ಪಡೆದಿದ್ದರು. 1999ರ ಚುನಾವಣೆಯಲ್ಲಿ ಡಾ.ಜಿ.ಪರಮೇಶ್ವರ್ ಪುನಃ ಮಧುಗಿರಿ ಮೀಸಲು ಕ್ಷೇತ್ರದಿಂದ ಸ್ಪರ್ಧಿಸಿ ಭಾರಿ ಅಂತರದಿಂದ ಜಯಗಳಿಸಿ ಎರಡನೇ ಬಾರಿಗೆ ಶಾಸನಸಭೆಗೆ ಆಯ್ಕೆಯಾಗುತ್ತಾರೆ. ಆ ಚುನಾವಣೆಯಲ್ಲಿ ಅವರು ಜೆಡಿಎಸ್‌ನಿಂದ ಸ್ಪರ್ಧಿಸಿದ್ದ ಗಂಗಹನುಮಯ್ಯ ಅವರು ಪರಾಭವಗೊಳಿಸಿದ್ದರು. ಪರಮೇಶ್ವರ್ ಆ ಚುನಾವಣೆಯಲ್ಲಿ 71 ಸಾವಿರದ 895 ಮತಗಳನ್ನು ಪಡೆದಿದ್ದರು.